ಮಗಳ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ರಜನಿಕಾಂತ್ – ‘ಲಾಲ್ ಸಲಾಮ್’ ಸಿನಿಮಾಗೆ ಸ್ಟಾರ್ ನಟ ಪಡೆದದ್ದು ಎಷ್ಟು ಗೊತ್ತಾ..!?

ಮಗಳ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆ ಪಡೆದ ರಜನಿಕಾಂತ್ – ‘ಲಾಲ್ ಸಲಾಮ್’ ಸಿನಿಮಾಗೆ ಸ್ಟಾರ್ ನಟ ಪಡೆದದ್ದು ಎಷ್ಟು ಗೊತ್ತಾ..!?

ನ್ಯೂಸ್ ಆ್ಯರೋ : ತಮಿಳು ಚಿತ್ರರಂಗದಲ್ಲಿ ನಿರ್ದೇಶಕಿಯಾಗಿ ಛಾಪು ಮೂಡಿಸುತ್ತಿರುವ ಐಶ್ವರ್ಯಾ ರಜನಿಕಾಂತ್ ಹೊಸ ಸಿನಿಮಾದ ನಿರ್ದೇಶನದತ್ತ ಬ್ಯುಸಿಯಾಗಿದ್ದಾರೆ. ಮಗಳ ನಿರ್ದೇಶನದ ಸಿನಿಮಾದಲ್ಲಿ ನಟಿಸಲು ದುಬಾರಿ ಸಂಭಾವನೆಯನ್ನ ರಜನಿಕಾಂತ್ ಪಡೆದಿದ್ದಾರೆ ಎಂಬ ಸುದ್ದಿ ಕಾಲಿವುಡ್‌ ಅಂಗಳದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಚಿತ್ರರಂಗದಲ್ಲಿ ಗಾಯಕಿ, ಡಬ್ಬಿಂಗ್ ಆರ್ಟಿಸ್ಟ್ ಆಗಿ ಐಶ್ವರ್ಯ ಗುರುತಿಕೊಂಡಿದ್ದಾರೆ. ಈಗಾಗಲೇ ತ್ರಿ, ವೈ ರಾಜ ವೈ, ಸಿನಿಮಾಗಳನ್ನ ನಿರ್ದೇಶನ ಮಾಡಿದ್ದಾರೆ. ‘ಲಾಲ್ ಸಲಾಮ್’ ಸಿನಿಮಾಗೆ ಐಶ್ವರ್ಯ ಡೈರೆಕ್ಷನ್ ಮಾಡ್ತಿದ್ದಾರೆ. ಈಗ ಕಾಲಿವುಡ್ ಅಂಗಳದಲ್ಲಿ ತಲೈವಾ ಬಗ್ಗೆ ಹೊಸ ಸುದ್ದಿಯೊಂದು ಹರಿದಾಡುತ್ತಿದೆ.

ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಗಳು ಐಶ್ವರ್ಯಾ ನಿರ್ದೇಶನದ ಚಿತ್ರ ‘ಲಾಲ್ ಸಲಾಮ್’ನಲ್ಲಿ ನಟಿಸಲು 25 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರೆ. ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲು ತಲೈವಾ ದುಬಾರಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. 7 ದಿನಗಳ ಶೂಟಿಂಗ್‌ನಲ್ಲಿ ತಲೈವಾ ಭಾಗಿಯಾಗುತ್ತಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಐಶ್ವರ್ಯಾ ರಜನಿಕಾಂತ್ ನಿರ್ದೇಶಿಸುತ್ತಿರುವ ‘ಲಾಲ್ ಸಲಾಮ್’ ಸಿನಿಮಾವನ್ನು ಲೈಕಾ ಪ್ರೊಡಕ್ಷನ್ ನಿರ್ಮಾಣ ಮಾಡುತ್ತಿದೆ. ವಿಷ್ಣು ವಿಶಾಲ್ ಹಾಗೂ ವಿಕ್ರಾಂತ್ ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇವರೊಂದಿಗೆ ರಜನಿಕಾಂತ್ ಅತಿಥಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಸಿನಿಮಾ ಎ.ಆರ್ ರೆಹಮಾನ್ ಸಂಗೀತ ನೀಡುತ್ತಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *