ದಳಪತಿ ವಿಜಯ್ ಮತ್ತು ರಕ್ಷಿತ್ ಶೆಟ್ಟಿ ತೆರೆ ಹಂಚಿಕೊಳ್ಳಲಿದ್ದಾರಾ?, ಲೋಕೇಶ್ ಕನಕರಾಜ್ ಯೂನಿವರ್ಸ್ ಗೆ ಸಿಂಪಲ್ ಸ್ಟಾರ್ ಎಂಟ್ರಿ!

ದಳಪತಿ ವಿಜಯ್ ಮತ್ತು ರಕ್ಷಿತ್ ಶೆಟ್ಟಿ ತೆರೆ ಹಂಚಿಕೊಳ್ಳಲಿದ್ದಾರಾ?, ಲೋಕೇಶ್ ಕನಕರಾಜ್ ಯೂನಿವರ್ಸ್ ಗೆ ಸಿಂಪಲ್ ಸ್ಟಾರ್ ಎಂಟ್ರಿ!

ನ್ಯೂಸ್ ಆ್ಯರೋ : ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಬಹು ನಿರೀಕ್ಷಿತ ‘ವಾರಿಸು’ ಚಿತ್ರ ಬಿಡುಗಡೆಯಾಗಿ ದೇಶದಾದ್ಯಂತ ಸದ್ದು ಮಾಡುತ್ತಿದ್ದು, ನೂರು ಕೋಟಿ ಕ್ಲಬ್ ನತ್ತ ದಾಪುಗಾಲಿಡುತ್ತಿದೆ‌. ಇದೇ ಸಂಧರ್ಭ ವಿಜಯ್ ಅವರ ಮುಂದಿನ ಸಿನಿಮಾ ಯಾವುದು, ಯಾರ ಜೊತೆ ಸಿನಿಮಾ ಮಾಡುತ್ತಾರೆ ಎಂಬ ಕುತೂಹಲ ಸಿನಿ ಪ್ರೇಕ್ಷರನ್ನ ಆವರಿಸಿಕೊಂಡಿತ್ತು. ಇದೀಗ ತಮಿಳಿನ ‘ಖೈದಿ’, ‘ಮಾಸ್ಟರ್’, ‘ವಿಕ್ರಮ್’ ದಂತಹ ಅತ್ಯದ್ಭುತ ಸಿನಿಮಾಗಳನ್ನ ಮಾಡಿ ದೇಶದಾದ್ಯಂತ ಸುದ್ದಿಯಲ್ಲಿರುವ ಯುವ ನಿರ್ದೇಶಕ ಲೋಕೇಶ್ ಕನಕರಾಜ್ ನಿರ್ದೇಶನದಲ್ಲಿ ದಳಪತಿ ನಟಿಸುವುದು ಪಕ್ಕಾ ಆಗಿದೆ.

ವಿಜಯ್ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿಗೆ ಅವಕಾಶ

ವರ್ಷದ ಹಿಂದೆಯಷ್ಟೆ ‘ಮಾಸ್ಟರ್’ ಸಿನಿಮಾ ಮೂಲಕ ದಳಪತಿ ವಿಜಯ್ ಹಾಗೂ ಲೋಕೇಶ್ ಕನಕರಾಜ್ ಒಟ್ಟಿಗೆ ಕೆಲಸ ಮಾಡಿ ಹಿಟ್ ಜೋಡಿ ಎನಿಸಿಕೊಂಡಿತ್ತು. ಈ ಚಿತ್ರದಲ್ಲಿ ನಟ ವಿಜಯ್ ಸೇತುಪತಿ ವಿಲನ್ ಶೇಡ್ ನಲ್ಲಿ ಮಿಂಚಿದ್ದರು. ಸದ್ಯ, ಮತ್ತೊಮ್ಮೆ ವಿಜಯ್ ಅವರಿಗೆ ಲೋಕೇಶ್ ಆ್ಯಕ್ಷನ್ ಕಟ್ ಹೇಳಲು ತಯಾರಾಗಿದ್ದು ಕನ್ನಡದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಲಾರಂಭಿಸಿದೆ.

ನಟ ರಕ್ಷಿತ್ ಶೆಟ್ಟಿ ಅವರನ್ನು ಸಂಪರ್ಕಿಸಿರುವ ಚಿತ್ರತಂಡ ಈಗಾಗಲೇ ಮಾತುಕತೆ ನಡೆಸಿದೆ ಎನ್ನಲಾಗುತ್ತಿದೆ. ಆದರೆ ಇದಕ್ಕೆ ಶೆಟ್ರು ಯಾವ ಉತ್ತರ ನೀಡಲಿದ್ದಾರೆ ಎಂಬುದು ಇನ್ನಷ್ಟೆ ತಿಳಿಯಬೇಕಿದೆ. ರಕ್ಷಿತ್ ಶೆಟ್ಟಿ ಅವರು ಕಿರಣ್ ರಾಜ್ ನಿರ್ದೇಶನದ ‘ಚಾರ್ಲಿ777’ ಸಿನಿಮಾದಲ್ಲಿ ಕೊನೆಯದಾಗಿ ನಾಯಕನಾಗಿ ನಟಿಸಿದ್ದರು. ಈ ಸಿನಿಮಾ ಜಾಗತಿಕ ಮಟ್ಟದಲ್ಲಿ ಸುದ್ದಿ ಮಾಡಿ ಗಲ್ಲಾಪೆಟ್ಟಿಗೆಯನ್ನು ಕೊಳ್ಳೆ ಹೊಡೆದಿತ್ತು. ರಕ್ಷಿತ್ ಶೆಟ್ಟಿ ಅವರ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು ಮುಂದೆ ‘ಉಳಿದವರು ಕಂಡಂತೆ’ ಸಿನಿಮಾದ ಮುಂದುವರೆದ ಭಾಗವಾದ ‘ರಿಚರ್ಡ್ ಆಂಟೋನಿ’ ಸಿನಿಮಾದ ನಿರ್ದೇಶನಕ್ಕೆ‌ ಇಳಿಯಲಿದ್ದಾರೆ ಎನ್ನಲಾಗುತ್ತಿದೆ‌. ಈ ನಡುವೆ ವಿಜಯ್ ಜೊತೆ ನಟಿಸುತ್ತಾರೆ ಎಂಬ ಸುದ್ದಿಯೂ ಹರಿದಾಡುತ್ತಿದ್ದು. ಸಿಂಪಲ್ ಸ್ಟಾರ್ ಅಧಿಕೃತವಾಗಿ ಯಾವುದನ್ನೂ ಹೇಳಿಕೊಂಡಿಲ್ಲ.

ದಳಪತಿ 67 ನಲ್ಲಿದೆ ಬಹುತಾರಾಂಗಣ!

ವಿಜಯ್ ನಟನೆಯ ಮುಂದಿನ ಸಿನಿಮಾಗೆ ಇನ್ನೂ ಕೂಡ ಹೆಸರಿಟ್ಟಿಲ್ಲ ಆ ಕಾರಣ ಇದನ್ನು ದಳಪತಿ 67 ಎಂದು ಕರೆಯಲಾಗುತ್ತಿದೆ‌. ಈ ಸಿನಿಮಾ ಫ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಲಿದ್ದು, ಭಾರತೀಯ ಚಿತ್ರರಂಗದ ದಿಗ್ಗಜರಾದ ಸಂಜಯ್ ದತ್, ಅರ್ಜುನ್ ಸರ್ಜಾ, ಗೌತಮ್ ವಾಸುದೇವ್ ಮೆನನ್, ಮಿಷ್ಕಿನ್, ಪೃಥ್ವಿರಾಜ್ ಸುಕುಮಾನ್, ತ್ರಿಷಾ ನಟಿಸಲಿದ್ದಾರೆ.

ದಳಪತಿ 67 ಬಗ್ಗೆ ಮಿಷ್ಕಿನ್ ಮಾತು

ಮಿಷ್ಕಿನ್ ಭಾರತೀಯ ಚಿತ್ರರಂಗ ಕಂಡ ಪ್ರತಿಭಾನ್ವಿತ ನಟರಲ್ಲಿ ಒಬ್ಬರು. ಸದ್ಯ, ಇವರು ವಿಜಯ್ ಅವರ ಮುಂದಿನ ಸಿನಿಮಾದಲ್ಲಿ ನಟಿಸುತ್ತಿದ್ದು ಈ ಬಗ್ಗೆ ಮಾದ್ಯಮದೊಂದಿಗೆ ಮಾತನಾಡಿದ್ದಾರೆ. ‘ಹತ್ತಾರು ವರ್ಷಗಳ ಹಿಂದೆ ವಿಜಯ್ ಜೊತೆ ತೆರೆ ಹಂಚಿಕೊಂಡಿದ್ದೆ. ಇದೀಗ ಮತ್ತೆ ಆ ಅವಕಾಶ ಲಭಿಸುತ್ತಿರುವುದು ಸಂತಸ ತಂದಿದೆ. ವಿಜಯ್ ಯಾವಾಗಲೂ ಯಂಗ್ ಅಂಡ್ ಎನರ್ಜಿಟಿಕ್ ಆಗಿರುತ್ತಾರೆ. ಸಿನಿಮಾದಲ್ಲಿ ನಮ್ಮಿಬ್ಬರ ಆಕ್ಷನ್ ದೃಶ್ಯಗಳಿದ್ದು, ಅದ್ಭುತವಾಗಿ ಮೂಡಿ ಬಂದಿದೆ‌. ಲೋಕೇಶ್ ಕನಕ ರಾಜ್ ಅವರ ನಿರ್ದೇಶನ ನನಗೆ ಬಹಳಾ ಇಷ್ಟ, ಅವರೆಂದಿಗೂ ನಟರಿಗೆ ನಟನೆ ಕಲಿಸುವುದಿಲ್ಲ ಬದಲಾಗಿ ನಮ್ಮೊಳಗಿನ‌ ಕಲಾವಿದನಿಗೆ ನಟಿಸಲು ಸ್ವಾತಂತ್ರ್ಯ ನೀಡುತ್ತಾರೆ’ ಎಂದಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *