Chandan Shetty : ಮತ್ತೊಂದು ಚಿತ್ರ ನಾಯಕನಾಗಲಿದ್ದಾರೆ ರ್‍ಯಾಪರ್ ಚಂದನ್ ಶೆಟ್ಟಿ – ಸಿನಿಮಾ ಯಾವುದು? ನಿರ್ದೇಶಕ ಯಾರು ಗೊತ್ತಾ?

Chandan Shetty : ಮತ್ತೊಂದು ಚಿತ್ರ ನಾಯಕನಾಗಲಿದ್ದಾರೆ ರ್‍ಯಾಪರ್ ಚಂದನ್ ಶೆಟ್ಟಿ – ಸಿನಿಮಾ ಯಾವುದು? ನಿರ್ದೇಶಕ ಯಾರು ಗೊತ್ತಾ?

ನ್ಯೂಸ್ ಆ್ಯರೋ‌ : ಗಾಯಕ, ಬಿಗ್ ಬಾಸ್ ಕನ್ನಡ ಸೀಸನ್-5ರ ವಿಜೇತ ಚಂದನ್ ಶೆಟ್ಟಿ ಸದ್ಯ ಗಾಯನದ ಜೊತೆಗೆ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಚಂದನ್ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಒಂದೆರಡು ಚಿತ್ರಗಳ ಕೆಲಸ ನಡೆಯುತ್ತಿರುವ ಮಧ್ಯೆ ಅವರು ಇನ್ನೊಂದು ಸಿನಿಮಾಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರದ ಶೀರ್ಷಿಕೆ ಆಗಸ್ಟ್ 25ರ ವರಮಹಾಲಕ್ಷ್ಮೀ ಹಬ್ಬದಂದು ಅನಾವರಣಗೊಳ್ಳಲಿದೆ.

ಯುವ ನಿರ್ದೇಶಕ ಆ್ಯಕ್ಷನ್ ಕಟ್

ಈ ಚಿತ್ರಕ್ಕೆ ಯುವ ನಿರ್ದೇಶಕ ಅರುಣ್ ಅಮುಕ್ತ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಈ ಹಿಂದೆ ಇವರು ಶ್ರೀಮುರಳಿ ನಾಯಕನಾಗಿ ಅಭಿನಯಿಸಿದ್ದ ‘ಲೂಸ್ ಗಳು’ ಚಿತ್ರ ನಿರ್ದೇಶಿಸಿದ್ದರು. ಈ ಹೊಸ ಚಿತ್ರ ಟೀನೇಜ್ ಡ್ರಾಮ ಆಗಿರಲಿದೆ ಎನ್ನುವ ಸುಳಿವು ಸಿಕ್ಕಿದೆ.

ಇತ್ತೀಚೆಗೆ ಈ ಚಿತ್ರತಂಡ ಟೈಟಲ್ ಪ್ರೋಮೋ ಬಿಡುಗಡೆ ಮಾಡಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಸದ್ಯ ಈ ಪ್ರೋಮೋಗೆ ಉತ್ತಮ ಪ್ರತಿಕ್ರಿಯೆ ಲಭಿಸಿದ್ದು ಚಿತ್ರತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಒಂದೊಳ್ಳೆ ಕಥೆಯನ್ನು ತೆರೆ ಮೇಲೆ ತರಲಿದ್ದೇವೆ ಎಂದು ಅರುಣ್ ಭರವಸೆ ನೀಡಿದ್ದಾರೆ.

ಚಂದನ್ ಜೊತೆಗೆ ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯಾ, ಸುನಿಲ್ ಪುರಾಣಿಕ್, ಅರವಿಂದ್ ರಾವ್, ಸಿಂಚನಾ, ಪ್ರಶಾಂತ್ ಸಂಬರ್ಗಿ ಮತ್ತಿತರರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *