
Rashmika Viral Video : ರಶ್ಮಿಕಾ ಮಂದಣ್ಣ ಅರ್ಧ ತೆರೆದೆದೆಯ ವಿಡಿಯೋ ವೈರಲ್ – ರಶ್ಮಿಕಾ, ಬಿಗ್ ಬಿ ಅಮಿತಾಭ್ ಬಚ್ಚನ್ ಏನ್ ಹೇಳಿದ್ರು?
- ಮನರಂಜನೆ
- November 6, 2023
- No Comment
- 94
ನ್ಯೂಸ್ ಆ್ಯರೋ : ಆರ್ಟಿಪಿಶಿಯಲ್ ಇಂಟಲಿಜೆನ್ಸಿ ಎಷ್ಟು ಮುಂದುವರೆದಿದೆ ಅಂದರೆ ಇದೀಗ ವಿಡಿಯೋಗಳನ್ನು ಡೀಫ್ ಫೇಕ್ ಮೂಲಕ ಪರಿವರ್ತಿಸಿ ಇನ್ನೊಬ್ಬರ ಮುಖವನ್ನು ಹಾಕಿ ಕ್ರಿಯೆಟ್ ಮಾಡಲಾಗುತ್ತಿದೆ. ಇದೇ ರೀತಿಯ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದು ಕನ್ನಡದ ಹೆಸರಾಂತ ನಟಿ ರಶ್ಮಿಕಾ ಮಂದಣ್ಣ ಅವರ ಹಾಟ್ ವಿಡಿಯೋ ವೈರಲ್ ಆಗಿದೆ.
ನಟಿ ರಶ್ಮಿಕಾ ಮಂದಣ್ಣ ಅವರ ಮುಖವನ್ನು ವಿಡಿಯೋದಲ್ಲಿ ಬಳಸಲಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಯಿತು. ಎದೆಭಾಗ ಕಾಣಿಸುವಂತೆ ಬಟ್ಟೆ ಹಾಕಿರುವ ವಿಡಿಯೋವನ್ನು ಹಲವರು ಹಂಚಿಕೊಂಡಿದ್ದರು. ರಶ್ಮಿಕಾ ಮಂದಣ್ಣ ಯಾಕೆ ಹೀಗೆ ಎಂದು ಹಲವರು ಪ್ರಶ್ನಿಸಿದ್ದರು. ಆದರೆ, ಅದು ರಶ್ಮಿಕಾ ಅವರ ವಿಡಿಯೋ ಅಲ್ಲವೆಂದು ಗೊತ್ತಾಗಿದೆ. ಅಭಿಷೇಕ್ ಅನ್ನುವವರು ಮೂಲ ವಿಡಿಯೋವನ್ನು ಪತ್ತೆ ಮಾಡಿ ಎರಡೂ ವಿಡಿಯೋವನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.
ವೈರಲ್ ಆಗಿರುವ ವಿಡಿಯೋ ಝರಾ ಪಟೀಲ್ (Zara Patel) ಎನ್ನುವವರದ್ದು ಎಂದು ಅಭಿಷೇಕ್ ಬರೆದುಕೊಂಡಿದ್ದಾರೆ. ಝರಾ ಪಟೇಲ್ ಅವರು ಆ ವಿಡಿಯೋವನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದರು. ಆ ವಿಡಿಯೋಗೆ ರಶ್ಮಿಕಾ ತಲೆಯನ್ನು ಮಾಸ್ಕ್ ಮಾಡಿ ಹರಿಬಿಟ್ಟಿದ್ದರು ಕಿಡಿಕೇಡಿಗಳು. ಈ ವಿಡಿಯೋ ಕೂಡ ಸಾಕಷ್ಟು ವೈರಲ್ ಆಗಿತ್ತು.
ಅಭಿಷೇಕ್ ಅವರು ಹಂಚಿಕೊಂಡ ಪೋಸ್ಟ್ ಅನ್ನು ಹೆಸರಾಂತ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಕೂಡ ಶೇರ್ ಮಾಡಿದ್ದರು. ಇದು ಮಹಾಪರಾಧ. ತಕ್ಷಣವೇ ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಅಮಿತಾಭ್ ಹೇಳಿದ್ದಾರೆ. ಈ ರೀತಿ ಯಾರಿಗೂ ಅಪಮಾನ ಮಾಡಬಾರದು ಎಂದು ಅವರು ತಿಳುವಳಿಕೆ ನೀಡಿದ್ದಾರೆ.
ರಶ್ಮಿಕಾ ಏನ್ ಹೇಳಿದ್ರು?
ವಿಡಿಯೋ ವೈರಲ್ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಅವರು ಪ್ರತಿಕ್ರಿಯೆ ನೀಡಿದ್ದಾರೆ.
‘ಆನ್ಲೈನ್ನಲ್ಲಿ ನನ್ನ ಡೀಪ್ಫೇಕ್ ವಿಡಿಯೋ ಹರಿದಾಡಿದ ಬಗ್ಗೆ ಮಾತನಾಡಲು ನನಗೆ ನಿಜಕ್ಕೂ ನೋವಾಗುತ್ತಿದೆ. ತಂತ್ರಜ್ಞಾನದ ದುರ್ಬಳಕೆಯಿಂದಾಗಿ ನನಗೆ ಮಾತ್ರವಲ್ಲದೇ ಎಲ್ಲರಿಗೂ ಭಯವಾಗುತ್ತಿದೆ’ ಎಂದು ರಶ್ಮಿಕಾ ಮಂದಣ್ಣ ಅವರು ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಮ್ಮ ಬರಹ ಆರಂಭಿಸಿದ್ದಾರೆ. ಸಣ್ಣ ಪುಟ್ಟ ಟ್ರೋಲ್ ಆಗಿದ್ದರೆ ರಶ್ಮಿಕಾ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಆದರೆ ಈ ಬಾರಿ ಅವರ ಫೇಕ್ ವಿಡಿಯೋ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿರುವುದರಿಂದ ಪ್ರತಿಕ್ರಿಯಿಸುವ ಸಂದರ್ಭ ಎದುರಾಗಿದೆ.
ಇಂದು ನನಗೆ ಬೆಂಬಲ ಮತ್ತು ರಕ್ಷಣೆ ನೀಡಿರುವ ನನ್ನ ಕುಟುಂಬ ಮತ್ತು ಸ್ನೇಹಿತರಿಗೆ ಓರ್ವ ಮಹಿಳೆಯಾಗಿ, ನಟಿಯಾಗಿ ನಾನು ಋಣಿ ಆಗಿದ್ದೇನೆ. ಆದರೆ ಇದು ಶಾಲೆ ಅಥವಾ ಕಾಲೇಜಿನಲ್ಲಿ ಇದ್ದಾಗ ಆಗಿದ್ದರೆ ಇದನ್ನು ನಾನು ಹೇಗೆ ಸರಿಪಡಿಸುತ್ತಿದ್ದೆನೋ ಗೊತ್ತಿಲ್ಲ. ಇಂಥ ಘಟನೆಗಳಿಂದ ನಮ್ಮಂತಹ ಹೆಚ್ಚಿನ ಜನರು ತೊಂದರೆಗೆ ಒಳಗಾಗುವುದಕ್ಕೂ ಮುನ್ನವೇ ಈ ಸಮಸ್ಯೆಯ ಬಗ್ಗೆ ನಾವು ಗಮನ ಹರಿಸಬೇಕಿದೆ’ ಎಂದು ರಶ್ಮಿಕಾ ಮಂದಣ್ಣ ಅವರು ಬರೆದುಕೊಂಡಿದ್ದಾರೆ. ‘ಅನಿಮಲ್’ ಸಿನಿಮಾದ ಬಿಡುಗಡೆಗೆ ಎದುರು ನೋಡುತ್ತಿರುವ ಅವರಿಗೆ ಡೀಪ್ಫೇಕ್ ವಿಡಿಯೋ ತಲೆನೋವು ತಂದಿದೆ.