ಚಾಮರಾಜನಗರ : ರೀಲ್ಸ್ ಸ್ಟಾರ್, ಸ್ಟಂಟ್ ಮಾಸ್ಟರ್ ಮಹೇಶ್ ಇನ್ನಿಲ್ಲ – ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ದುರ್ದೈವಿ..!!

ಚಾಮರಾಜನಗರ : ರೀಲ್ಸ್ ಸ್ಟಾರ್, ಸ್ಟಂಟ್ ಮಾಸ್ಟರ್ ಮಹೇಶ್ ಇನ್ನಿಲ್ಲ – ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ದುರ್ದೈವಿ..!!

ನ್ಯೂಸ್ ಆ್ಯರೋ : ಸಾಮಾಜಿಕ‌ ಜಾಲತಾಣದಲ್ಲಿ ರೀಲ್ಸ್ ಮೂಲಕ ಗಮನ ಸೆಳೆಯುತ್ತಿದ್ದ ರೀಲ್ಸ್ ಪ್ರತಿಭೆ ಚಾಮರಾಜನಗರ ಮೂಲದ ಮಹೇಶ್ ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ದುರಂತ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ಬಳಿ ನಡೆದಿದ್ದು, ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಕೃಷ್ಣಾಪುರದ ಮಹೇಶ್(24) ಮೃತ ದುರ್ದೈವಿಯಾಗಿದ್ದಾರೆ.

ನಿಯಂತ್ರಣ ತಪ್ಪಿ ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದು, ಎಳನೀರು ಕೀಳುವ ಕೆಲಸ ಮಾಡುವ ಜೊತೆಗೆ ರೀಲ್ಸ್ ಮಾಡುವ ಹವ್ಯಾಸ ಬೆಳೆಸಿಕೊಂಡಿದ್ದ ಯುವಕ, ಡ್ಯಾನ್ಸ್, ಸ್ಟಂಟ್ ಗಳನ್ನು ರೀಲ್ಸ್ ಮಾಡಿ ಗಮನ ಸೆಳೆಯುತ್ತಿದ್ದು ಭಾರೀ ವೈರಲ್ ಆಗಿದ್ದ.

ಘಟನಾ ಸ್ಥಳಕ್ಕೆ ಯಳಂದೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಯಳಂದೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *