ಹೊಸ ಸಾಹಸಕ್ಕೆ ಕೈ ಹಾಕಿ ತನ್ನದೇ ಊರಿನ ಹೆಸರಿಟ್ಟ ರಿಷಬ್ ಶೆಟ್ಟಿ – ಡಿವೈನ್ ಸ್ಟಾರ್ ಅವರ ಹೊಸ ಉದ್ಯಮ ಏನು ಗೊತ್ತಾ?

ಹೊಸ ಸಾಹಸಕ್ಕೆ ಕೈ ಹಾಕಿ ತನ್ನದೇ ಊರಿನ ಹೆಸರಿಟ್ಟ ರಿಷಬ್ ಶೆಟ್ಟಿ – ಡಿವೈನ್ ಸ್ಟಾರ್ ಅವರ ಹೊಸ ಉದ್ಯಮ ಏನು ಗೊತ್ತಾ?

ನ್ಯೂಸ್ ಆ್ಯರೋ‌ : ನಟನೆ, ನಿರ್ದೇಶನ, ನಿರ್ಮಾಣದಲ್ಲಿ ಯಶಸ್ಸು ಕಂಡಿರುವ ಕನ್ನಡದ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಇದೀಗ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ‘ಕೆರಾಡಿ ಸ್ಟುಡಿಯೋಸ್’ ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿರುವ ಅವರು, ”ಒಂದು ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ ತಂಡ ಹೊಸ ಹೆಜ್ಜೆ ಇರಿಸುತ್ತಿದೆ. ‘ಕೆರಾಡಿ ಸ್ಟುಡಿಯೋಸ್’ ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸಿದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯ” ಎಂದು ಬರೆದುಕೊಂಡಿದ್ದಾರೆ.

‘ಕೆರಾಡಿ’ ಹೆಸರಿಡಲು ಕಾರಣ ಏನು?

ಅಂದ ಹಾಗೆ ಕೆರಾಡಿ ನಾನು ಹುಟ್ಟಿ ಬೆಳೆದ, ನನ್ನ ಹೃದಯಕ್ಕೆ ಬಹಳ ಹತ್ತಿರವಾದ ಊರು. ಎಲ್ಲಕ್ಕಿಂತಲೂ ಹೆಚ್ಚಾಗಿ ನನ್ನೊಳಗೆ ಸಿನಿಮಾದ ಕನಸು ಹುಟ್ಟಿದ್ದು ಇಲ್ಲೇ..! ಈ ಪ್ರಯತ್ನವನ್ನು ನನ್ನ ಕೆರಾಡಿಗೆ ಅರ್ಪಿಸಿ, ಚಿತ್ರರಂಗಕ್ಕೆ ನಮ್ಮ ಅಳಿಲು ಸೇವೆಯನ್ನು ಮುಂದುವರಿಸಲಿದ್ದೇವೆ. ನಿಮ್ಮ ಸಹಕಾರವಿರಲಿ’ ಎಂದು ರಿಷಬ್ ‘ಕೆರಾಡಿ ಸ್ಟುಡಿಯೋಸ್’ ಹೆಸರು ಇಡಲು ಕಾರಣವನ್ನು ವಿವರಿಸಿದ್ದಾರೆ.

ಕಳೆದ ವರ್ಷ ‘ಕಾಂತಾರ’ ಚಿತ್ರ ನಿರ್ದೇಶಿಸಿ, ನಟಿಸಿ ಭಾರತದಾದ್ಯಂತ ಸಂಚಲನ ಮೂಡಿಸಿದ್ದ ರಿಷಬ್ ಸದ್ಯ ‘ಕಾಂತಾರ 2’ ಚಿತ್ರದ ಕೆಲಸದಲ್ಲಿ ನಿರತರಾಗಿದ್ದಾರೆ. ಇದು ‘ಕಾಂತಾರ’ದ ಪ್ರೀಕ್ವೆಲ್ ಎನ್ನಲಾಗಿದ್ದು, ರಾಜ್ಯ ಸೇರಿದಂತೆ ದೇಶಾದ್ಯಂತ ಇರುವ ಸಿನಿ ಪ್ರೇಮಿಗಳು ಹೊಸ ಅಪ್ ಡೇಟ್ ಗಾಗಿ ಕಾತುರದಿಂದ ಕಾಯುತ್ತಿದ್ದಾರೆ.

Related post

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ಪ್ರೇಯಸಿ ನಿಮ್ಮನ್ನು ನಿರ್ಲಕ್ಷಿಸುತ್ತಿದ್ದಾಳಾ? – ಈ ತಪ್ಪುಗಳು ನಿಮ್ಮಲ್ಲೂ ಇರಬಹುದು ಗಮನಿಸಿ…

ನ್ಯೂಸ್ ಆ್ಯರೋ‌ : ನಾವು ಪ್ರೀತಿಸುವ ಜೀವಗಳು ನಮ್ಮನ್ನು ದೂರ ಮಾಡಿದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಿದರೆ ಅದರಿಂದಾಗುವ ನೋವು ಅಪಾರ. ಅದರಲ್ಲೂ ಪ್ರೇಯಸಿ ದೂರ ಮಾಡುತ್ತಿದ್ದರೆ ಅದನ್ನು ಸಹಿಸಲು…
ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ – ಸಿಸಿಟಿವಿಯಲ್ಲಿ ಘೋರ ಕೃತ್ಯ ಸೆರೆ, ವಿಡಿಯೋ ವೈರಲ್…!!

ಮಲಗುವ ವಿಚಾರಕ್ಕೆ ಮಗಳಿಗೆ 25 ಬಾರಿ ಚೂರಿಯಿಂದ ಇರಿದು ಕೊಂದ ಅಪ್ಪ…

ನ್ಯೂಸ್ ಆ್ಯರೋ : ಮಲಗುವ ವಿಚಾರಕ್ಕೆ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸೂರತ್‌ನ ವ್ಯಕ್ತಿಯೊಬ್ಬ ತನ್ನ ಮಗಳಿಗೆ 25 ಬಾರಿ ಇರಿದು ಕೊಂದಿರುವ ಘಟನೆ ನಡೆದಿದೆ. ಇಡೀ ಕೃತ್ಯ ಸಿಸಿಟಿವಿಯಲ್ಲಿ…
ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ ಕಾರಣಿಕದಿಂದಾಗಿಯೇ ಇಲ್ಲಿಗೆ ಬಂದೆ ಎಂದ ಗುಳಿಕೆನ್ನೆ ಬೆಡಗಿ..

ಕೊರಗಜ್ಜ ಮೂಲಸ್ಥಾನ ಕುತ್ತಾರಿಗೆ ಭೇಟಿ ನೀಡಿದ ರಚಿತಾ ರಾಮ್ – ಕೊರಗಜ್ಜನ…

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ಬೆಡಗಿ, ಗುಳಿಕೆನ್ನೆ ಚೆಲುವೆ ರಚಿತಾ ರಾಮ್ ಅವರು ಬುಧವಾರ ಮಂಗಳೂರು ಸಮೀಪದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿ ಸ್ಥಳಕ್ಕೆ ಭೇಟಿ…

Leave a Reply

Your email address will not be published. Required fields are marked *