
ಮೋಹಕತಾರೆ ರಮ್ಯಾ ಹೃದಯಾಘಾತದಿಂದ ನಿಧನ – ವೈರಲ್ ಸುದ್ದಿಯ ಅಸಲಿಯತ್ತೇನು? ಸುದ್ದಿ ಹಬ್ಬಿದ್ದು ಯಾಕೆ?
- ಮನರಂಜನೆ
- September 6, 2023
- No Comment
- 64
ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ನಟಿ ರಮ್ಯಾ ‘ಹೃದಯಾಘಾತದಿಂದ ಮೃತಪಟ್ಟಿದ್ದಾರೆ’ ಎನ್ನುವ ಸುದ್ದಿ ಇಂದು (ಸೆಪ್ಟೆಂಬರ್ 6) ವೈರಲ್ ಆಗಿದ್ದು, ತಮಿಳು ಮಾಧ್ಯಮಗಳು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವರದಿ ಮಾಡಿದ್ದವು. ಆದರೆ, ಇದು ಸುಳ್ಳು ಸುದ್ದಿ ಅನ್ನೋ ಬಗ್ಗೆ ಸ್ಪಷ್ಟನೆ ಸಿಕ್ಕಿದೆ.
‘ರಮ್ಯಾ ಆರೋಗ್ಯವಾಗಿದ್ದಾರೆ’ ಎಂದು ಅವರ ಆಪ್ತರಾದ ಸುನೈನಾ ಸುರೇಶ್ ಮಾಹಿತಿ ನೀಡಿದ್ದಾರೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಮ್ಯಾ ಅವರು ಈ ಬಗ್ಗೆ ಇನ್ನೂ ಸ್ಪಷ್ಟನೆ ನೀಡಿಲ್ಲ.
ರಮ್ಯಾ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ರಾಜಕೀಯಕ್ಕೆ ತೆರಳಿದ ಬಳಿಕ ಅವರು ಸಿನಿಮಾ ರಂಗದಿಂದ ದೂರವೇ ಉಳಿದುಕೊಂಡರು. ರಾಜಕೀಯವನ್ನೂ ತೊರೆದ ಬಳಿಕ ಅವರು ಯಾರ ಕೈಗೂ ಸಿಕ್ಕಿರಲಿಲ್ಲ. ಈಗ ಅವರು ಸೋಶಿಯಲ್ ಮೀಡಿಯಾ ಹಾಗೂ ಚಿತ್ರರಂಗಕ್ಕೆ ಮರಳಿದ್ದಾರೆ. ಈ ಸಂದರ್ಭದಲ್ಲೇ ಅವರಿಗೆ ಹೃದಯಾಘಾತ ಆಗಿದೆ ಎನ್ನುವ ಸುಳ್ಳು ಸುದ್ದಿ ಹರಿದಾಡಿತ್ತು.
ರಮ್ಯಾ ಹೆಸರಿನ ತಮಿಳು ಕಿರುತೆರೆ ನಟಿ ಮೃತಪಟ್ಟಿದ್ದರು ಎನ್ನಲಾಗಿದೆ. ಈ ವಿಚಾರ ಹೇಳುವಾಗ ತಮಿಳುನಾಡಿನ ಕೆಲವರು ರಮ್ಯಾ ದಿವ್ಯಾ ಸ್ಪಂದನಾ ಫೋಟೋ ಹಂಚಿಕೊಂಡಿದ್ದಾರೆ. ಆ ಬಳಿಕ ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಈಗ ರಮ್ಯಾ ಅವರು ಆರಾಮಾಗಿದ್ದಾರೆ ಎನ್ನುವ ಸುದ್ದಿ ತಿಳಿದು ಅಭಿಮಾನಿಗಳು ಖುಷಿಪಟ್ಟಿದ್ದಾರೆ.