ಮಯೋಸೈಟಿಸ್ ಚಿಕಿತ್ಸೆಗೆ ಸಮಂತಾ 25 ಕೋಟಿ ರೂ. ಸಾಲ ಮಾಡಿದ್ದಾರಾ? – ಟಾಲಿವುಡ್ ಬ್ಯೂಟಿ ಹೇಳಿದ್ದೇನು?

ಮಯೋಸೈಟಿಸ್ ಚಿಕಿತ್ಸೆಗೆ ಸಮಂತಾ 25 ಕೋಟಿ ರೂ. ಸಾಲ ಮಾಡಿದ್ದಾರಾ? – ಟಾಲಿವುಡ್ ಬ್ಯೂಟಿ ಹೇಳಿದ್ದೇನು?

ನ್ಯೂಸ್ ಆ್ಯರೋ‌ : ದಕ್ಷಿಣ ಭಾರತದ ಜನಪ್ರಿಯ ನಟಿ ಸಮಂತಾ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಇವರು ಅತೀ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಒಬ್ಬರು. ಕೆಲವು ದಿನಗಳ ಹಿಂದೆ ಅವರು ಮಯೋಸೈಟಿಸ್ ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ತಿಳಿಸಿದ್ದರು. ಸಮಂತಾ ಈ ಕಾಯಿಲೆಯ ಚಿಕಿತ್ಸೆಗಾಗಿ ಸ್ಟಾರ್ ನಟರೊಬ್ಬರ ಬಳಿಯಿಂದ 25 ಕೋಟಿ ರೂ. ಸಾಲ ಪಡೆದಿದ್ದಾರೆ ಎನ್ನುವ ಸುದ್ದಿ ಹಬ್ಬಿತ್ತು. ಇದೀಗ ಸ್ವತಃ ಅವರೇ ಈ ಬಗ್ಗೆ ಮಾತನಾಡಿದ್ದಾರೆ.

ಸಮಂತಾ ಹೇಳಿದ್ದೇನು?

ಮಯೋಸೈಟಿಸ್ ಚಿಕಿತ್ಸೆಗಾಗಿ 25 ಕೋಟಿ ರೂ.? ಯಾರೋ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಈ ಚಿಕಿತ್ಸೆಗಾಗಿ ನನ್ನ ಆದಾಯದ ಕೊಂಚ ಹಣ ಮಾತ್ರ ಖರ್ಚಾಗುತ್ತದೆ. ನಾನು ದುಡಿದಿದ್ದನ್ನೆಲ್ಲಾ ಇದಕ್ಕೆ ವ್ಯಯಿಸಿದೆ ಎನ್ನುವುದು ಶುದ್ಧ ಸುಳ್ಳು. ನನ್ನ ಜಾಗ್ರತೆ ನಾನು ನೋಡಿಕೊಳ್ಳಬಲ್ಲೆ. ಸಾವಿರಾರು ಮಂದಿ ಇಂತಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸುಳ್ಳು ಸುದ್ದಿ ಹರಡುವ ಮುನ್ನ ಸಾಕಷ್ಟು ಆಲೋಚನೆ ಮಾಡಿ ಎಂದು ಸಮಂತಾ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಸಮಂತಾ 13 ವರ್ಷಗಳಿಂದ ಚಿತ್ರರಂಗದಲ್ಲಿದ್ದಾರೆ. ಜೊತೆಗೆ ಹಲವು ಜಾಹೀರಾತುಗಳಲ್ಲಿ ನಟಿಸಿದ್ದಾರೆ. ಕೋಟಿ ಕೋಟಿ ಸಂಪಾದಿಸಿದ್ದಾರೆ. ಅವರಿಗೆ ಸಾಲ ಮಾಡುವ ಪ್ರಮೇಯ ಬಂದಿಲ್ಲ ಎಂದು ಅಭಿಮಾನಿಗಳು ವಾದಿಸಿದ್ದರು.

ಮಯೋಸೈಟಿಸ್ ಎನ್ನುವುದು ಸ್ನಾಯುಗಳಲ್ಲಿ ಉರಿಯೂತದ ಸ್ಥಿತಿ. ಮೈಯೋ ಎಂದರೆ ಸ್ನಾಯು, ಸಿಟಿಸ್ ಎಂದರೆ ಉರಿಯೂತ ಎಂದರ್ಥ. ನಾಗಚೈತನ್ಯ ಅವರೊಂದಿಗೆ ವಿಚ್ಛೇದನ ಪಡೆದ ಸಮಯದಲ್ಲಿ ಸಮಂತಾ ಇಂತಹ ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ತಿಳಿಸಿದ್ದರು.

ಸದ್ಯ ಸಮಂತಾ ಐಸ್ ಬಾತ್ ಸೇರಿದಂತೆ ವಿವಿಧ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಅವರು ನಟನೆಗೆ ಸ್ವಲ್ಪ ದಿನದ ಬ್ರೇಕ್ ಪಡೆದುಕೊಂಡಿದ್ದು ಬಾಲಿ ಪ್ರವಾಸದಲ್ಲಿದ್ದಾರೆ.

ಪ್ರಸ್ತುತ ಸಮಂತಾ ವಿಜಯ್ ದೇವರಕೊಂಡ ಜೊತೆಗೆ ಅಭಿನಯಿಸಿದ ‘ಖುಷಿ’ ತೆಲುಗು ಚಿತ್ರ ಬಿಡುಗಡೆಗೆ ತಯಾರಾಗಿದ್ದು, ಶೀಘ್ರದಲ್ಲಿಯೇ ಪ್ರಮೋಷನ್ ಕಾರ್ಯ ನಡೆಯಲಿದೆ. ಮುಂದೆ ‘ಚೆನ್ನೈ ಸ್ಟೋರಿ’ ಎನ್ನುವ ತಮಿಳು, ಇಂಗ್ಲಿಷ್ ಚಿತ್ರಗಳಲ್ಲಿ ನಟಿಸಲಿದ್ದಾರೆ. ಜೊತೆಗೆ ಹಿಂದಿಯ ‘ಸಿಟಾಡೆಲ್’ ಹಿಂದಿ ವೆಬ್ ಸರಣಿಯಲ್ಲಿ ಅಭಿನಯಿಸಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *