ಮಹಿಳೆಯ ಪ್ರಜ್ಞೆ ತಪ್ಪಿಸಿ ಗೆಳೆಯರ ಜೊತೆ ಸೇರಿ ಸಾಮೂಹಿಕ ಅತ್ಯಾಚಾರ – ಸ್ಯಾಂಡಲ್ ವುಡ್ ನ ನಟ, ನಿರ್ಮಾಪಕನ ಬಂಧನ

ಮಹಿಳೆಯ ಪ್ರಜ್ಞೆ ತಪ್ಪಿಸಿ ಗೆಳೆಯರ ಜೊತೆ ಸೇರಿ ಸಾಮೂಹಿಕ ಅತ್ಯಾಚಾರ – ಸ್ಯಾಂಡಲ್ ವುಡ್ ನ ನಟ, ನಿರ್ಮಾಪಕನ ಬಂಧನ

ನ್ಯೂಸ್ ಆ್ಯರೋ : ಕನ್ನಡ ಸಿನಿಮಾ ನಟ, ನಿರ್ಮಾಪಕ ವೀರೇಂದ್ರ ಬಾಬು ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ರೇಪ್​ ಕೇಸ್​ ಹಿನ್ನೆಲೆಯಲ್ಲಿ ವೀರೇಂದ್ರ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.

ಕಳೆದ ಜುಲೈ​ 30ರಂದು ಮಹಿಳೆಗೆ ಫೋನ್​ ಮಾಡಿ ಮಹಿಳೆಯನ್ನು ಕರೆಸಿಕೊಂಡಿದ್ದ ವೀರೇಂದ್ರ ಬಾಬು ಅತ್ಯಾಚಾರವೆಸಗಿದ್ದಾರೆ. ಸ್ನೇಹಿತರ ಜೊತೆ ಸೇರಿ ನಟ ವೀರೇಂದ್ರ ಬಾಬು ಈ ಕೃತ್ಯವೆಸಗಿದ್ದಾರೆ ಎನ್ನಲಾಗ್ತಿದೆ. ಅಲ್ಲದೆ ವಿಡಿಯೋ ಮಾಡಿ ಮಹಿಳೆಯನ್ನು ಬೆದರಿಸಿದ ಆರೋಪ ಕೇಳಿ ಬಂದಿದೆ.

ಕನ್ನಡ ಸ್ವಯಂ ಕೃಷಿ ಚಿತ್ರದಲ್ಲಿ ನಟಿಸಿದ್ದ ವೀರೇಂದ್ರ ಬಾಬು ಹಾಗೂ ಸ್ನೇಹಿತರ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಅತ್ಯಾಚಾರ ಮಾಡಿ ಅದನ್ನ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದಾರೆ. ಬೆದರಿಕೆವೊಡ್ಡಿ 15 ಲಕ್ಷ ಹಣ ವಸೂಲಿ ಮಾಡಿದ್ದಾರೆ ಎನ್ನಲಾಗ್ತಿದೆ. ಹಣ ನೀಡದಿದ್ದರೆ ವಿಡಿಯೋ ರಿಲೀಸ್ ಮಾಡೋದಾಗಿ ಬೆದರಿಕೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎನ್ನಲಾಗಿದೆ‌. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಕೊಡಿಗೆಹಳ್ಳಿ ಪೊಲೀಸರು ಕೇಸ್​ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

ಕಳೆದ 2021 ರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಅಂದು ಒಡವೆ ಮಾರಿ ಹಣ ಕೊಟ್ಟು ಸುಮ್ಮನಾಗಿದ್ದ ಮಹಿಳೆ ಯಾವುದೇ ದೂರು ನೀಡಿರಲಿಲ್ಲ. ಜುಲೈ 30 2023 ರಂದು ಮತ್ತೆ ಮಹಿಳೆಯನ್ನು ಕರೆಯಿಸಿ ಬೆದರಿಕೆ‌‌ ಹಾಕಿದ್ದರಂತೆ. ಮಹಿಳೆಯನ್ನ ಕಾರಿನಲ್ಲಿ ಸುತ್ತಾಡಿಸಿ ಮೈಮೇಲಿದ್ದ ಚಿನ್ನಾಭರಣ ಕಿತ್ತುಕೊಂಡಿದ್ದಾರೆ ಎನ್ನಲಾಗ್ತಿದೆ. ಜೊತೆ ಮಹಿಳೆಗೆ ಗನ್ ತೋರಿಸಿ ಬೆದರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಹಾಗೂ ಆತನ ಗೆಳೆಯರನ್ನು ಬಂಧಿಸಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *