ನಾಪತ್ತೆಯಾಗಿದ್ದಾರೆ ಸ್ಯಾಂಡಲ್ ವುಡ್ ನಟ ನವೀನ್ ಕೃಷ್ಣ ಪತ್ನಿಯ ಅಕ್ಕ – ಪತ್ತೆಗೆ ಸಹಕರಿಸುವಂತೆ ನವೀನ್ ಮನವಿ

ನಾಪತ್ತೆಯಾಗಿದ್ದಾರೆ ಸ್ಯಾಂಡಲ್ ವುಡ್ ನಟ ನವೀನ್ ಕೃಷ್ಣ ಪತ್ನಿಯ ಅಕ್ಕ – ಪತ್ತೆಗೆ ಸಹಕರಿಸುವಂತೆ ನವೀನ್ ಮನವಿ

ನ್ಯೂಸ್ ಆ್ಯರೋ : ಕನ್ನಡ ಚಿತ್ರರಂಗದಲ್ಲಿ ನಟ ಹಾಗೂ ನಿರ್ದೇಶಕನಾಗಿ ಕೆಲಸ ಮಾಡಿರುವ ನವೀನ್ ಕೃಷ್ಣ ಅವರ ಪತ್ನಿ ಅಕ್ಕ ಇತ್ತೀಚೆಗೆ ನಾಪತ್ತೆಯಾಗಿದ್ದು, ಈ ಬಗ್ಗೆ ನವೀನ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ಸಹೋದರಿ ನೀತಾ ಪವರ್ ಅವರ ವಿಳಾಸ ಮತ್ತು ಪೋಟೋವನ್ನು ಪೋಸ್ಟ್ ಮಾಡಿರುವ ಅವರು ‘ನನ್ನ ಅಕ್ಕ ಕಾಣೆಯಾಗಿದ್ದಾರೆ, ಕಂಡರೆ ಕೂಡಲೇ ತಿಳಿಸಿ’ ಎಂದು ಬರೆದುಕೊಂಡಿದ್ದಾರೆ.

ನವೀನ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಸುಬ್ರಹ್ಮಣ್ಯ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದ ನೀತಾ ಪಾವರ್ ಜನವರಿ 17ರಂದು‌ ಮನೆಯಿಂದ ಹೊರಗೆ ಹೋದವರು ಮರಳಿ ಬಾರದೆ ಕಾಣೆಯಾಗಿದ್ದಾರಂತೆ. ಆದ್ದರಿಂದ ‘ಈ ಮಾಹಿತಿಯನ್ನು ಆದಷ್ಟು ಹಂಚಿಕೊಳ್ಳಿ, ಮಾಹಿತಿ ಸಿಕ್ಕರೆ ದಯವಿಟ್ಟು ತಿಳಿಸಿ’ ಎಂದು ಫೋನ್‌ ನಂಬರ್ ನೀಡಿದ್ದಾರೆ. ಆದರೆ‌ ಸದ್ಯ ಈ ಪೋಸ್ಟ್ ಟ್ವಿಟರ್ ಖಾತೆಯಿಂದ ಡಿಲೀಟ್ ಆಗಿದೆ.

ಹಿರಿಯ ನಟ ಶ್ರೀನಿವಾಸ್ ಮೂರ್ತಿ ಅವರ ಪುತ್ರನಾದ ನವೀನ್ ಕೃಷ್ಣ ನಾಯಕ ನಟರಾಗುವ ಮೊದಲು ಚಿತ್ರರಂಗದಲ್ಲಿ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದರು. ಧಿಮಾಕು ಅವರಿಗೆ ಹೆಸರು ತಂದು ಕೊಟ್ಟ ಸಿನಿಮಾಗಳಲ್ಲೊಂದು.

ಸ್ಟಾರ್ ನಟರ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ವತಃ ನಿರ್ದೇಶಕರಾಗಿ ಹಲವು ಧಾರಾವಾಹಿಗಳನ್ನು ನಿರ್ದೇಶನ ಮಾಡಿದ್ದಾರೆ. ಕಿರುತೆರೆಯಲ್ಲಿ ಕಿರಿಜಾ ಕಲ್ಯಾಣ, ಪತ್ತೆದಾರಿ ಪ್ರತಿಭಾ, ಕಮಲಿ, ಉಘೇ ಉಘೆ ಮಾದೇಶ್ವರ, ರಾಧಾಕೃಷ್ಣ ಮತ್ತು ಯಡಿಯೂರು ಶ್ರೀ ಸಿದ್ದಲಿಂಗೇಶ್ವರದಲ್ಲಿ ಬಣ್ಣ ಹಚ್ಚಿದ್ದರು.

Related post

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…
Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…

Leave a Reply

Your email address will not be published. Required fields are marked *