ಸ್ಯಾಂಡಲ್ ವುಡ್ ನ ಪೋಷಕ ನಟ ಮಂದೀಪ್ ರಾಯ್ ನಿಧನ – 500ಕ್ಕೂ ಅಧಿಕ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದ ಹಿರಿಯ ನಟ ಇನ್ನಿಲ್ಲ..

ಸ್ಯಾಂಡಲ್ ವುಡ್ ನ ಪೋಷಕ ನಟ ಮಂದೀಪ್ ರಾಯ್ ನಿಧನ – 500ಕ್ಕೂ ಅಧಿಕ ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದ ಹಿರಿಯ ನಟ ಇನ್ನಿಲ್ಲ..

ನ್ಯೂಸ್ ಆ್ಯರೋ : ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರಾಯ್ (73) ಅವರು ತಡರಾತ್ರಿ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

senior kannada actor mandeep roy passed away

ಬೆಂಗಳೂರಿನ ಭೈರಸಂಧ್ರದ ನಿವಾಸದಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರಾಯ್ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇಂದು ಸಂಜೆ ಮಂದೀಪ್ ರಾಯ್ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷದ ಡಿಸೆಂಬರ್ ನಲ್ಲಿ ಮಂದೀಪ್ ರಾಯ್ ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ಕಂಪ್ಯೂಟರ್‌ ಸೈನ್ಸ್‌, ಆಟೋಮೊಬೈಲ್ಸ್‌ ಎಂಜಿನಿಯರಿಂಗ್‌ ಪದವಿ ಪಡೆದಿದ್ದ ಮಂದೀಪ್ ರಾಯ್, ನಂತರ ಐಬಿಎಂ ಹಾಗೂ ಟಿಸಿಎಸ್‌ ಕಂಪನಿಗಳಲ್ಲಿ ಕೆಲಸ ಮಾಡಿದ್ದರು. ಈ ವೇಳೆ ಶಂಕರ್ ನಾಗ್ ಅವರ ನಿರ್ದೇಶನದ ‘ಮಿಂಚಿನ ಓಟ’ ಚಿತ್ರದಲ್ಲಿ ಮಂದೀಪ್ ಬಣ್ಣ ಹಚ್ಚಿದ್ದರು. ಒಂಚೂರು ಕನ್ನಡ ಭಾಷೆ ಬಾರದ ಮಂದೀಪ್ ರಾಯ್ ‘ಮಿಂಚಿನ ಓಟ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದರು.

ಬಳಿಕ ಮಂದೀಪ್ ರಾಯ್ ಅವರು, ದೇವರ ಆಟ, ಬಾಡದ ಹೂ, ನನ್ನವರು, ಅಂತಿಮ ಘಟ್ಟ, ಏಳು ಸುತ್ತಿನ ಕೋಟೆ, ಆಕಸ್ಮಿಕ, ಅಗ್ನಿ ಐಪಿಎಸ್, ಅಯ್ಯ, ಹಠವಾದಿ, ಸಿಕ್ಸರ್, ಆಪ್ತರಕ್ಷಕ, ಅಲೆಮಾರಿ, ಪರಾರಿ, ಅಮಾನುಷ, ಪುಷ್ಪಕ ವಿಮಾನ, ರಾಜಕುಮಾರ, ಅಮೃತಧಾರೆ, ಕುರಿಗಳು ಸಾರ್ ಕುರಿಗಳು ಸೇರಿದಂತೆ 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

Related post

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…
Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…

Leave a Reply

Your email address will not be published. Required fields are marked *