ಕಿಡ್ನಿ ವೈಫಲ್ಯದಿಂದ ಹಾಸ್ಯ ನಟ ಗಂಡಸಿ ನಾಗರಾಜ್ ನಿಧನ – 100 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕಲಾವಿದ ಇನ್ನಿಲ್ಲ

ಕಿಡ್ನಿ ವೈಫಲ್ಯದಿಂದ ಹಾಸ್ಯ ನಟ ಗಂಡಸಿ ನಾಗರಾಜ್ ನಿಧನ – 100 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕಲಾವಿದ ಇನ್ನಿಲ್ಲ

ನ್ಯೂಸ್ ಆ್ಯರೋ : ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ವಸ್ತ್ರಾಲಂಕಾರ ಕಲಾವಿದನಾಗಿ ಹಾಗೂ ನಟನಾಗಿ ಕೆಲಸ ಮಾಡಿದ್ದ ಗಂಡಸಿ ನಾಗರಾಜ್​ (Gandasi Nagaraj) ಅವರು ಕಿಡ್ನಿ ವೈಫಲ್ಯದಿಂದ ಕಳೆದ ರಾತ್ರಿ 10:30 ಕ್ಕೆ ನಿಧನ ಹೊಂದಿದ್ದಾರೆ.

ಸುಮಾರು 40 ವರ್ಷಗಳ ಕಾಲ ನಟನಾಗಿ, ವಸ್ತ್ರ ವಿನ್ಯಾಸಕನಾಗಿ ಕನ್ನಡ ಚಿತ್ರರಂಗದ ಕಲಾ ಸೇವೆ ಮಾಡಿದ ಇವರು ಕಳೆದ 5 ತಿಂಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಕಳೆದ 4 ದಿನಗಳಿಂದ ದೇವೇಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಗಂಡಸಿ ನಾಗರಾಜ್ ಅವರಿಗೆ ಇಬ್ಬರು ಮಕ್ಕಳಿದ್ದು, ಮಗಳು ಕೊರೊನಾದಿಂದ ನಿಧನರಾಗಿದ್ದರು. ಇದೀಗ ಒಬ್ಬ ಮಗ ಮತ್ತು ಸೊಸೆಯನ್ನು ಅಗಲಿದ್ದಾರೆ.

ಗಂಡಸಿ ನಾಗರಾಜ್‌ ಅವರು ʻಸರ್ವರ್ ಸೋಮಣ್ಣʼ , ʻಸೂಪರ್ ನನ್ನ ಮಗʼ, ʻಭಂಡ ನನ್ನ ಗಂಡʼ , ʻಗುಂಡನ ಮದುವೆʼ ʻರಾಯರ ಮಗʼ , ʻಹಬ್ಬʼ , ʻಶ್ರೀ ಮಂಜುನಾಥʼ , ʻಮದುವೆʼ , ʻಮಾತಾಡು ಮಾತಾಡು ಮಲ್ಲಿಗೆʼ , ʻಪರ್ವʼ , ʻರಾಜಹುಲಿʼ, ʻಶಿಕಾರಿʼ ಹೀಗೆ ಹಲವು ಚಿತ್ರಗಳಲ್ಲಿ ಹಾಸ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ʻಕೋಟಿಗೊಬ್ಬ 3ʼ ಇವರ ಕೊನೆಯ ಚಿತ್ರವಾಗಿತ್ತು.

ನವರಸ ನಾಯಕ ಜಗ್ಗೇಶ್ ಅವರ ಆಪ್ತ ವಸ್ತ್ರಾಲಂಕಾರ ಕಲಾವಿದರಾಗಿದ್ದ ಗಂಡಸಿ ನಾಗರಾಜ್ ಅವರು, ಸರ್ವರ್ ಸೋಮಣ್ಣ, ಸೂಪರ್ ನನ್ ಮಗ, ಬಂಡ ನನ್ನ ಗಂಡ ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *