Yogi Babu : ಈ ಕಾಮಿಡಿ ನಟ ಸ್ಟಾರ್ ನಟರಷ್ಟೇ ದುಬಾರಿ – ಇವರು ದಿನವೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

Yogi Babu : ಈ ಕಾಮಿಡಿ ನಟ ಸ್ಟಾರ್ ನಟರಷ್ಟೇ ದುಬಾರಿ – ಇವರು ದಿನವೊಂದಕ್ಕೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ನ್ಯೂಸ್ ಆ್ಯರೋ‌ : ತಮಿಳು ಚಿತ್ರ ನೋಡುವವರಿಗೆ ಯೋಗಿ ಬಾಬು (Yogi Babu) ಪರಿಚಯ ಚೆನ್ನಾಗಿಯೇ ಇರುತ್ತದೆ. ತಮ್ಮ ಕಾಮಿಡಿ ಪಂಚಿಂಗ್ ಮೂಲಕ ಪ್ರೇಕ್ಷಕರ ಮನ ಗೆದ್ದ ಅವರು ಸದ್ಯ ಸ್ಟಾರ್ ಕಲಾವಿದ ಎನಿಸಿಕೊಂಡಿದ್ದಾರೆ. ಬಹುತೇಕ ಸ್ಟಾರ್ ಕಲಾವಿದರ ಚಿತ್ರಗಳಲ್ಲಿ ಇವರಿಗೊಂದು ಪಾತ್ರ ನಿಶ್ಚಿತ ಎನ್ನುವಷ್ಟರ ಮಟ್ಟಿಗೆ ಅವರು ಜನಪ್ರಿಯ. ಅಲ್ಲದೆ ಕೆಲವು ಚಿತ್ರಗಳಲ್ಲಿ ನಾಯಕರಾಗಿಯೂ ಕಾಣಿಸಿಕೊಂಡಿದ್ದಾರೆ.

ದುಬಾರಿ ಸಂಭಾವನೆ

2009ರಲ್ಲಿ ‘ಯೋಗಿ’ ತಮಿಳು ಚಿತ್ರದ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟ ಯೋಗಿ ಬಾಬು ಸದ್ಯ ಅತ್ಯಂತ ಬ್ಯುಸಿ ನಟರಲ್ಲಿ ಒಬ್ಬರು. ಕಳೆದ ವರ್ಷ ತೆರೆಕಂಡ ‘ಲವ್ ಟುಡೇ’ ಮತ್ತು ಈ ವರ್ಷಾರಂಭದಲ್ಲಿ ಬಿಡುಗಡೆಯಾದ ‘ವಾರಿಸು’ ಚಿತ್ರದಲ್ಲಿ ಗಮನ ಸೆಳೆದಿರುವ ಅವರು ಪ್ರತಿ ಚಿತ್ರಕ್ಕೆ ದುಬಾರಿ ಸಂಭಾವನೆ (Remuneration) ಪಡೆಯುತ್ತಾರೆ.

ದಿನಕ್ಕೆ 18 ಲಕ್ಷ ರೂ!

ಯೋಗಿ ಬಾಬು ದಿನದ ಲೆಕ್ಕದಲ್ಲಿ ಸಂಭಾವನೆ ಪಡೆಯುತ್ತಾರೆ. ಅವರು ಒಂದು ದಿನಕ್ಕೆ (Per day) ಬರೋಬ್ಬರಿ 18 ಲಕ್ಷ ರೂ. ಚಾರ್ಜ್ ಮಾಡುತ್ತಾರೆ ಎನ್ನಲಾಗಿದ್ದು, ಪ್ರತಿ ತಿಂಗಳು ಕೋಟಿ ರೂ. ಲೆಕ್ಕದಲ್ಲಿ ದುಡಿಯುತ್ತಾರೆ. ಇದು ಯಾವ ಸ್ಟಾರ್ ನಟನ ಸಂಭಾವನೆಗಿಂತ ಕಡಿಮೆ ಇಲ್ಲ.

ಕನ್ನಡ ಚಿತ್ರರಂಗಕ್ಕೆ ಎಂಟ್ರಿ

ಯೋಗಿ ಬಾಬು ಕನ್ನಡ ಚಿತ್ರದಲ್ಲೂ ಅಬಿನಯಿಸುತ್ತಿದ್ದಾರೆ. ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರ ಪುತ್ರ ಸುರಾಗ್ ಚೊಚ್ಚಲ ನಿರ್ದೇಶನದ ಚಿತ್ರಲ್ಲಿ ಯೋಗಿ ಬಾಬು ನಟಿಸುತ್ತಿದ್ದಾರೆ. ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಸಾಧು ಕೋಕಿಲ ನಿರ್ಮಿಸುತ್ತಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *