ಎರಡನೇ ಮದುವೆಗೆ ತಯಾರಾದ ನಿಹಾರಿಕಾ ಕೊನಿಡೆಲಾ? – ಸ್ಟಾರ್ ನಟನ ಜೊತೆ ಮೆಗಾ ಕುಟುಂಬದ ಕುಡಿ ಮದುವೆ..!?

ಎರಡನೇ ಮದುವೆಗೆ ತಯಾರಾದ ನಿಹಾರಿಕಾ ಕೊನಿಡೆಲಾ? – ಸ್ಟಾರ್ ನಟನ ಜೊತೆ ಮೆಗಾ ಕುಟುಂಬದ ಕುಡಿ ಮದುವೆ..!?

ನ್ಯೂಸ್ ಆ್ಯರೋ‌ : ತೆಲುಗು ಮೆಗಾಸ್ಟಾರ್ ಚಿರಂಜೀವಿ ಕುಟುಂಬದ ಕುಡಿ, ನಟಿ ನಿಹಾರಿಕಾ ಕೊನಿಡೆಲಾ ಇತ್ತೀಚೆಗೆ ಪತಿ ಚೈತನ್ಯ ಜೊತೆಗಿನ ಮೂರು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ಇದೀಗ ಅವರು ಎರಡನೇ ವಿವಾಹಕ್ಕೆ ತಯಾರಾಗುತ್ತಿದ್ದಾರೆ ಎನ್ನುವ ಸುದ್ದಿ ಹರಡಿದೆ.

ಸ್ಟಾರ್ ನಟನ ಜೊತೆ ವಿವಾಹ?

ಬಾಲನಟನಾಗಿ ಬಳಿಕ ಇದೀಗ ಹೀರೋ ಆಗಿ ಮಿಂಚುತ್ತಿರುವ ನಟನೊಂದಿಗೆ ನಿಹಾರಿಕಾ ಎರಡನೇ ಬಾರಿ ಸಪ್ತಪದಿ ತುಳಿಯಲಿದ್ದಾರೆ ಎನ್ನುವ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಡಿದೆ.

ಯಾರು ಆ ನಟ?

ತರುಣ್ ಜೊತೆ ನಿಹಾರಿಕಾ ಮದುವೆಯಾಗಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಈಗಾಗಲೇ ನಿಹಾರಿಕಾ ಅವರ ಕುಟುಂಬ ತರುಣ್ ಜೊತೆ ಈ ಕುರಿತು ಚರ್ಚೆ ನಡೆಸಿದೆ ಎನ್ನಲಾಗಿದೆ. ಆದರೆ ಇದನ್ನು ತರುಣ್ ನಿರಾಕರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಗಿರುವ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದಿದ್ದಾರೆ. ನಿಹಾರಿಕಾ ಮತ್ತು ಚೈತನ್ಯ ಅವರ ವಿವಾಹ 2020ರಲ್ಲಿ ನಡೆದಿತ್ತು.

ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿದ ತರುಣ್ ಸದ್ಯ ನಾಯಕನಾಗಿ ನಟಿಸುತ್ತಿದ್ದಾರೆ. ‘ಪ್ರಿಯಮೈನ ನೀಕು’, ‘ನುವ್ವು ಲೆಕ ನೇನು ಲೆನು’, ‘ಪುನ್ನಗಿ ದೇಸಮ್’, ‘ನುವ್ವೇ ನುವ್ವೇ’ ಮುಂತಾದ ಚಿತ್ರಗಳಲ್ಲಿ ಮಿಂಚಿದ್ದಾರೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *