ಗಳಿಕೆಯಲ್ಲಿ ಇತಿಹಾಸ ನಿರ್ಮಿಸಿದ ‘ದಿ ಕೇರಳ ಸ್ಟೋರಿ’ – ಪ್ಯಾನ್ ಇಂಡಿಯಾ ಚಿತ್ರ ಗಳಿಸಿದ್ದೆಷ್ಟು?

ಗಳಿಕೆಯಲ್ಲಿ ಇತಿಹಾಸ ನಿರ್ಮಿಸಿದ ‘ದಿ ಕೇರಳ ಸ್ಟೋರಿ’ – ಪ್ಯಾನ್ ಇಂಡಿಯಾ ಚಿತ್ರ ಗಳಿಸಿದ್ದೆಷ್ಟು?

ನ್ಯೂಸ್ ಆ್ಯರೋ‌ : ‘ದಿ ಕೇರಳ ಸ್ಟೋರಿ’ ಚಿತ್ರ ಬಿಡುಗಡೆಗೆ ಮುನ್ನವೇ ವಿವಾದ ಹುಟ್ಟು ಹಾಕಿತ್ತು. ಕೇರಳದಲ್ಲಿ ನಡೆದಿದ ಎನ್ನಲಾದ ಮತಾಂತರ, ಉಗ್ರರ ತಂಡಕ್ಕೆ ಸೇರಿದ ಮಹಿಳೆಯ ಕಥೆ ಹೊಂದಿರುವ ಈ ಚಿತ್ರಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಪ್ಯಾನ್ ಇಂಡಿಯಾ ಚಿತ್ರ ಕೊನೆಗೂ ಎಲ್ಲಾ ಅಡೆ ತಡೆ ಮೀರಿ ತೆರೆಕಂಡು ಈಗ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಮೇ 5ರಂದು ದೇಶಾದ್ಯಂತ ಬಿಡುಗಡೆಗೊಂಡ ಈ ಚಿತ್ರ 10 ದಿನಗಳಲ್ಲಿ ಮೈಲುಗಲ್ಲೊಂದನ್ನು ನೆಟ್ಟಿದೆ. ಸುದೀಪ್ತೋ ಸೇನ್ ನಿರ್ದೇಶನದ ‘ದಿ ಕೇರಳ ಸ್ಟೋರಿ’ ಸಿನಿಮಾ 135 ಕೋಟಿ ರೂ. ಗಳಿಸಿದೆ. ಈ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಯಶಸ್ವಿ ಪ್ರದರ್ಶನ ಮುಂದುವರಿಸಿದೆ. ಈ ಮೂಲಕ 2023ರಲ್ಲಿ ಬಾಲಿವುಡ್‌ ನಲ್ಲಿ ಅತೀ ಹೆಚ್ಚು ಕಲೆಕ್ಷನ್‌ ಮಾಡಿದ ಸಿನಿಮಾಗಳಲ್ಲಿ ಎರಡನೇ ಸಿನಿಮಾವಾಗಿ ʼದಿ ಕೇರಳ ಸ್ಟೋರಿʼ ಹೊರಹೊಮ್ಮಿದೆ.

ಅದಾ ಶರ್ಮಾ, ಯೋಗಿತಾ ಬಿಹಾನಿ ,ಸೋನಿಯಾ ಬಲಾನಿ, ಸಿದ್ಧಿ ಇದ್ನಾನಿ ಮುಂತಾದ ಕಲಾವಿದರು ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಚಿತ್ರವನ್ನು ತೆರಿಗೆ ಮುಕ್ತವಾಗಿಸುವ ಜೊತೆಗೆ ಹಲವು ಕೊಡುಗೆಗಳನ್ನು ಘೋಷಿಸಿದ್ದರು.

ಕತ್ತರಿ ಪ್ರಯೋಗ

ಆರಂಭದಲ್ಲಿ 32 ಸಾವಿರ ಭಾರತೀಯ ಮಹಿಳೆಯರು ಈ ರೀತಿ ಐಸಿಸ್‌ ಸೇರಿದ್ದಾರೆ ಎಂದು ಚಿತ್ರತಂಡ ಟೀಸರ್‌ ನಲ್ಲಿ ಹೇಳಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿ 32 ಸಾವಿರ ಮಹಿಳೆಯರು ಎನ್ನುವ ದೃಶ್ಯ ಸೇರಿ ಅನೇಕ ದೃಶ್ಯವನ್ನು ತೆಗೆದು ಹಾಕಿ ಚಿತ್ರ ತೆರೆ ಕಂಡಿದೆ.

Related post

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…
ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…
Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…

Leave a Reply

Your email address will not be published. Required fields are marked *