Kannada Serial TRP List : ಈ ವಾರದ ಟಿಆರ್ಪಿ ಪಟ್ಟಿ ರಿಲೀಸ್ – ಯಾವ ಧಾರಾವಾಹಿಗೆ ಮೊದಲ ಸ್ಥಾನ? ಯಾವೆಲ್ಲ ಧಾರಾವಾಹಿ ಟಾಪ್ ಪಟ್ಟಿಯಲ್ಲಿವೆ?

Kannada Serial TRP List : ಈ ವಾರದ ಟಿಆರ್ಪಿ ಪಟ್ಟಿ ರಿಲೀಸ್ – ಯಾವ ಧಾರಾವಾಹಿಗೆ ಮೊದಲ ಸ್ಥಾನ? ಯಾವೆಲ್ಲ ಧಾರಾವಾಹಿ ಟಾಪ್ ಪಟ್ಟಿಯಲ್ಲಿವೆ?

ನ್ಯೂಸ್ ಆ್ಯರೋ : ಈ ವಾರದ ಟಿಆರ್​ಪಿ ಪಟ್ಟಿ ಹೊರ ಬಿದ್ದಿದ್ದು, ಎಂದಿನಂತೆ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿದೆ. ನಗರ ಭಾಗದಲ್ಲಿ ‘ಸೀತಾ ರಾಮ’ ಧಾರಾವಾಹಿಗೆ ಮೊದಲ ಸ್ಥಾನ ಸಿಕ್ಕಿದೆ.

ಉಮಾಶ್ರೀ ನಟನೆಯ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿ ಲಿಸ್ಟ್​ನಲ್ಲಿ ಮೊದಲ ಸ್ಥಾನದಲ್ಲಿದೆ. ಈ ಧಾರಾವಾಹಿ ಕಳೆದ ಹಲವು ತಿಂಗಳಿಂದ ಟಾಪ್​ನಲ್ಲಿದೆ. ಈ ಧಾರಾವಾಹಿಯ ಕಥೆ ಹಾಗೂ ನಿರೂಪಣೆ ಜನರಿಗೆ ಇಷ್ಟವಾಗುತ್ತಿದೆ. ಈ ಧಾರಾವಾಹಿಗೆ ಸ್ಪರ್ಧೆಯೇ ಇಲ್ಲದಂತೆ ಆಗಿದೆ.

ಸೀತಾ ರಾಮ ಧಾರಾವಾಹಿ ಸಾಕಷ್ಟು ಗಮನ ಸೆಳೆಯುತ್ತಿದೆ. ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ಈ ಧಾರಾವಾಹಿಯಲ್ಲಿ ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಧಾರಾವಾಹಿ ಎರಡನೇ ಸ್ಥಾನ ಅಲಂಕರಿಸಿದೆ. ನಗರ ವಿಭಾಗದಲ್ಲಿ ಈ ಧಾರಾವಾಹಿ ಮೊದಲ ಸ್ಥಾನದಲ್ಲಿದೆ ಅನ್ನೋದು ವಿಶೇಷ.

ಗಟ್ಟಿಮೇಳ ಧಾರಾವಾಹಿ ಮೂರನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಕೂಡ ಒಳ್ಳೆಯ ಟಿಆರ್​ಪಿ ಪಡೆದುಕೊಳ್ಳುತ್ತಿದೆ. ಈ ಧಾರಾವಾಹಿ ಸಾವಿರಾರು ಎಪಿಸೋಡ್ ಪೂರ್ಣಗೊಳಿಸಿದೆ. ಆದರೂ ಒಳ್ಳೆಯ ಟಿಆರ್​ಪಿ ಪಡೆದುಕೊಂಡು ಮುಂದೆ ಸಾಗುತ್ತಿದೆ. ‘ಸೀತಾ ರಾಮ’ ಹಾಗೂ ‘ಗಟ್ಟಿಮೇಳ’ ಧಾರಾವಾಹಿಗಳ ನಗರ ಹಾಗೂ ಗ್ರಾಮೀಣ ಭಾಗದ ಟಿಆರ್​ಪಿ ಒಂದೇ ಇದ್ದರೂ ನಗರದ ಟಿಆರ್​ಪಿ ಆಧಾರದಲ್ಲಿ ‘ಗಟ್ಟಿಮೇಳ’ಕ್ಕೆ ಮೂರನೇ ಸ್ಥಾನ ನೀಡಬಹುದು.

‘ಸತ್ಯ’ ಧಾರಾವಾಹಿ ಮೊದಲಿನಿಂದಲೂ ಒಳ್ಳೆಯ ಟಿಆರ್​ಪಿ ಪಡೆದುಕೊಂಡಿರುವ ಧಾರಾವಾಹಿ. ಈ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಈ ಸೀರಿಯಲ್ ಎಲ್ಲರ ಗಮನ ಸೆಳೆಯುತ್ತಿದೆ.

‘ಅಮೃತಧಾರೆ’ ಧಾರಾವಾಹಿಯಲ್ಲಿ ಸದ್ಯ ಮದುವೆ ವಿಚಾರ ಹೈಲೈಟ್ ಆಗುತ್ತಿದೆ. ಮಹಿಮಾ ಹಾಗೂ ಜೀವನ್ ಮತ್ತು ಭೂಮಿಕಾ ಹಾಗೂ ಗೌತಮ್ ಮದುವೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಧಾರಾವಾಹಿ ಟಿಆರ್​ಪಿ ಹೆಚ್ಚುವ ನಿರೀಕ್ಷೆ ಇದೆ.

Related post

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 21-05-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಸಂತೃಪ್ತಿಯ ಜೀವನಕ್ಕಾಗಿ ನಿಮ್ಮ ಮಾನಸಿಕ ದೃಢತೆಯನ್ನು ಸುಧಾರಿಸಿ. ನೀವು ಇಂದು ಗಣನೀಯ ಪ್ರಮಾಣದ ಹಣವನ್ನು ಸಹ ಹೊಂದಿರುತ್ತೀರಿ ಮತ್ತು ಅದರೊಂದಿಗೆ ಮನಸ್ಸಿನ ಶಾಂತಿ ಇರುತ್ತದೆ. ಸ್ನೇಹಿತರು ಸಂತೋಷದ ಸಂಜೆಗಾಗಿ…
ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…

Leave a Reply

Your email address will not be published. Required fields are marked *