ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಉಪೇಂದ್ರ ಸರಣಿ ಪೋಸ್ಟ್‌: ನೆಟ್ಟಿಗರ ಟೀಕೆಯ ಬೆನ್ನಲ್ಲೆ ಮತ್ತೆ ಸವಾಲೆಸೆದ ಪ್ರಜಾಕೀಯ ಪಕ್ಷದ ಸ್ಥಾಪಕ

ಚುನಾವಣಾ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಉಪೇಂದ್ರ ಸರಣಿ ಪೋಸ್ಟ್‌: ನೆಟ್ಟಿಗರ ಟೀಕೆಯ ಬೆನ್ನಲ್ಲೆ ಮತ್ತೆ ಸವಾಲೆಸೆದ ಪ್ರಜಾಕೀಯ ಪಕ್ಷದ ಸ್ಥಾಪಕ

ನ್ಯೂಸ್‌ ಆ್ಯರೋ : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಚುನಾವಣೆ ಒಂದೇ ಹಂತದಲ್ಲಿ ನಡೆಯಲಿದೆ. ಮೇ 13ರಂದು ಮತಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ದಿನಾಂಕ ಘೋಷಣೆಯಾದ ಬೆನ್ನಲ್ಲೇ ಪ್ರಜಾಕೀಯ ಪಕ್ಷದ ಮುಖಂಡ, ನಟ ಉಪೇಂದ್ರ ಹಾಕಿದ ಸರಣಿ ಪೋಸ್ಟ್‌ ಭಾರೀ ಸದ್ದು ಮಾಡುತ್ತಿವೆ.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಜತೆಗೆ ನಟ ಉಪೇಂದ್ರ ನೇತೃತ್ವದ ಉತ್ತಮ ಪ್ರಜಾಕೀಯ ಪಕ್ಷವೂ ಅಖಾಡಕ್ಕೆ ಇಳಿಯುತ್ತಿದೆ. ಉಪೇಂದ್ರ ಸ್ಥಾಪಿಸಿರುವ ಈ ಪಕ್ಷದಿಂದ ಉಪೇಂದ್ರ ಅವರು ಸ್ಪರ್ಧಿಸುತ್ತಿಲ್ಲ. ಹೊರತಾಗಿ ಪಕ್ಷ ಸೇರ್ಪಡೆಗೊಂಡಿರುವ ಇತರೆ ಕಾರ್ಯಕರ್ತರು ಸ್ಪರ್ಧೆಗೆ ಇಳಿಯಲಿದ್ದಾರೆ.

ರಾಜಕೀಯದ ವಿರುದ್ಧ ಸದಾ ವಾದ ಮಾಡುವ ಉಪೇಂದ್ರ ಅವರು ಆಡಳಿತದ ವೈಖರಿ ಬದಲಾಗಬೇಕು, ರಾಜಕೀಯ ವ್ಯವಸ್ಥೆ ಬದಲಾಗಬೇಕು ಎಂದು ಹಲವಾರು ಬಾರಿ ವಾದಿಸಿದ್ದಾರೆ. ಅದರಂತೆ ಇದೀಗ ಚುನಾವಣಾ ಆಯೋಗ ಪ್ರಕಟಿಸಿದ ಚುನಾವಣಾ ಹಾಗೂ ಮತ ಎಣಿಕೆಯ ದಿನಾಂಕಗಳ ಬಗ್ಗೆಯೂ ಸಹ ಉಪೇಂದ್ರ ಪೋಸ್ಟ್ ಹಂಚಿಕೊಳ್ಳುವುದರ ಮೂಲಕ ಪ್ರಶ್ನೆಯೊಂದನ್ನು ಎಸೆದಿದ್ದಾರೆ.

ಉಪೇಂದ್ರ ಅವರ ಈ ಪೋಸ್ಟ್‌ಗೆ ಪಾಸಿಟಿವ್ ಕಾಮೆಂಟ್‌ಗಳಿಗಿಂತ ನೆಗೆಟಿವ್ ಕಾಮೆಂಟ್‌ಗಳೇ ಹೆಚ್ಚಾಗಿ ಬಂದಿವೆ. ‘ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದ ಮತದಾನ ಮತ್ತು ಮೇ 13, ಶನಿವಾರ ಫಲಿತಾಂಶ ಪ್ರಕಟ. ಮತ ಎಣಿಕೆಗೆ ಎರಡು ದಿನ ಬೇಕೆ ?! ಏಕೆಂದು ಬಲ್ಲವರು ತಿಳಿಸುತ್ತೀರಾ?’ ಎಂದು ಫೇಸ್‌ಬುಕ್‌ನಲ್ಲಿ ಉಪ್ಪೇಂದ್ರ ಬರೆದುಕೊಂಡಿದ್ದಾರೆ.

ಉಪೇಂದ್ರ ಅವರ ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ನೆಟ್ಟಿಗನೊಬ್ಬ ‘ನಿಮ್ಮ ಸಿನಿಮಾ ಶೂಟಿಂಗ್ ಮುಗಿದ ದಿನವೇ ರಿಲೀಸ್‌ ಮಾಡ್ತೀರಾ? ಏಕೆಂದು ತಿಳಿಸುವಿರಾ ಸ್ವಾಮಿ?’ ಎಂದು ಕಾಮೆಂಟ್ ಮಾಡುವ ಮೂಲಕ ಕೌಂಟರ್ ನೀಡಿದ್ದಾರೆ.

ಮತ್ತೊಬ್ಬ ನೆಟ್ಟಿಗ ಈ ಕುರಿತು ಪ್ರತಿಕ್ರಿಯಿಸಿದ್ದು ‘ಹೌದು. ಏಕೆಂದರೆ ಮತ ಎಣಿಕೆ ಮಷಿನ್‌ ಗಳನ್ನು ಎಲ್ಲಾ ಮತ ಕ್ಷೇತ್ರ ಗಳಿಂದ ಒಂದು ಕಡೆ ಕೇಂದ್ರೀಕರಿಸಲು ಮತ್ತು. ಮತ ಎಣಿಕೆ ಅಧಿಕಾರಿಗಳು ಮತ್ತು ಜಿಲ್ಲಾಡಳಿತ ಅಧಿಕಾರಿಗಳು ಒಟ್ಟುಗೂಡಿಸಲು ಮತ್ತು ಸೆಕ್ಯೂರಿಟಿ ನಿಯೋಜನೆಗೆ ಸಮಯಬೇಕು. ಮತ್ತು ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ನೋಡಬೇಕು’ ಎಂದು ಕಾಮೆಂಟ್ ಮಾಡಿದ್ದು ಎರಡು ದಿನಗಳ ಸಮಯ ಏತಕ್ಕಾಗಿ ಬೇಕು ಎಂಬುದನ್ನು ಸ್ಪಷ್ಟವಾಗಿ ತಿಳಿಹೇಳಿದ್ದಾರೆ.

‘ಚುನಾವಣೆ ಸಿನೆಮಾ ಅಲ್ಲ. ಮದ್ವೆ ಆದ ದೃಶ್ಯದ ನಂತರ ಮಗು ಆಗೋಕೆ, ಕಾಮನ್ ಸೆನ್ಸ್ ಬೇಕು ಗುರು’ ಹಾಗೂ ‘ಅಲ್ಲ ಗುರು ಚುನಾವಣೆ ಆಯೋಗದವರಿಗೆ ಅಷ್ಟು ಜ್ಞಾನವಿಲ್ಲದೆ ಎರಡು ದಿನ ನಿಗದಿಪಡಿಸಿಕೊಳ್ಳುತ್ತಾರಾ, ನಿಮ್ಮ ಬುದ್ಧಿವಂತಿಕೆ ಇಷ್ಟ ಆಗುತ್ತೆ ಅತಿ ಬುದ್ಧಿವಂತಿಕೆ ಇಷ್ಟ ಆಗಲ್ಲ ’ ಎಂದು ಮುಗಿಬಿದ್ದಿದ್ದರು.

‘ನೀವು ಶೂಟಿಂಗ್ ಮುಗಿದ ಕುಂಬಳಕಾಯಿ ಹೊಡೆದ ತಕ್ಷಣ ನಿಮ್ಮ ಚಿತ್ರ ಬಿಡುಗಡೆ ಮಾಡ್ತೀರಾ ಉತ್ತರ ಕೊಡಿ’ ಎಂದು ಕಾಮೆಂಟ್ ಮಾಡಿರುವ ನೆಟ್ಟಿಗರು ಯೋಚಿಸಿ ಪ್ರಶ್ನೆಗಳನ್ನು ಕೇಳಿ, ಯೋಚಿಸದೇ ಬಾಯಿಗೆ ಬಂದ ಪ್ರಶ್ನೆಗಳನ್ನು ಕೇಳಬೇಡಿ ಎಂದು ಉಪ್ಪಿಗೆ ಕೌಂಟರ್ ಕೊಟ್ಟಿದ್ದರು.

ಇಷ್ಟೆಲ್ಲ ಟೀಕೆಗಳ ಮಧ್ಯೆ ಮತ್ತೆ ಪೋಸ್ಟ್‌ ಮಾಡಿರುವ ಉಪ್ಪೇಂದ್ರ ಅವರು ‘ಡಿಜಿಟಲ್ ವೋಟಿಂಗ್ ಅಲ್ವಾ? ಮತ ಎಣಿಕೆಗೆ 2 ದಿನಾ ಬೇಕಾ? ನನಗೆ ಗೊತ್ತಿಲ್ಲಾ, ಗೊತ್ತಿದ್ದರೆ ತಿಳಿಸಿ ಅಂದೆ ಅಷ್ಟೇ…. ಅಬ್ಬಬ್ಬಾ ಏನು ಕಾಮೆಂಟ್ಸ್ ಗಳು?. ವಾರೆ ವಾಹ್… ವ್ಯಾಪಾರೀ ರಾಜಕೀಯ, ಭ್ರಷ್ಟಾಚಾರ, ಕುದುರೆ ವ್ಯಾಪಾರ ಇದರ ಬಗ್ಗೆ ಕಾಮೆಂಟ್ ಮಾಡಿ ನೋಡೋಣ ಅತಿ ಬುದ್ವಂತ್ರು, ದೇಶ ಪ್ರೇಮಿಗಳು, ರಾಜಕೀಯ ಪಕ್ಷಗಳ ಹಿಂಬಾಲಕರು..’ಎಂದು ತಿರುಗೇಟು ನೀಡಿದ್ದಾರೆ.

ಮತ್ತೊಂದು ಪೋಸ್ಟ್‌ ಹಾಕಿರುವ ಅವರು, ‘ಅನಕ್ಷರಸ್ಥ ರಸ್ತೆ ವ್ಯಾಪಾರಿಗಳು ಫೋನ್ ಮೂಲಕ ಡಿಜಿಟಲ್‌ನಲ್ಲಿ ಹಣದ ವ್ಯವಹಾರ ಮಾಡುತ್ತಾರೆ. ವ್ಯಾಪಾರಸ್ಥರು ಕೋಟ್ಯಾಂತರ ಹಣ ಸುರಕ್ಷಿತವಾಗಿ ಆನ್‌ಲೈನ್‌ನಲ್ಲಿ ಟ್ರಾನ್ಸ್‌ಫರ್ ಮಾಡುತ್ತಾರೆ. ಬಹುಮುಖ್ಯ ದಾಖಲೆಗಳೊಂದಿಗೆ ವ್ಯವಹಾರ ಮಾಡುವ ದೊಡ್ಡ ದೊಡ್ಡ ಅಂತಾರಾಷ್ಟ್ರೀಯ ಕಂಪನಿಗಳು ಡಿಜಿಟಲ್ ಮೂಲಕ ವ್ಯವಹರಿಸುತ್ತಾರೆ. ಪ್ರಧಾನ ಮಂತ್ರಿಗಳು ತಮ್ಮ ಬೆರಳಿಂದಲೇ ಲಕ್ಷಾಂತರ ಬ್ಯಾಂಕ್ ಖಾತೆಗೆ ಏಕಕಾಲಕ್ಕೆ ಹಣ ವರ್ಗಾಯಿಸುತ್ತಾರೆ!. ಇಷ್ಟೆಲ್ಲಾ ಬದಲಾವಣೆ ಆದರೂ ಚುನಾವಣೆಯಲ್ಲಿ ಮತದಾರರು ಅವರಿರುವ ಜಾಗದಿಂದಲೇ ಮತದಾನ ಮಾಡುವ ತಂತ್ರಜ್ಞಾನ ಏಕೆ ಬರುತ್ತಿಲ್ಲ? ಯೋಚಿಸಿ… ಇದು ಪ್ರಶ್ನೆ ಅಷ್ಟೇ. ಟೀಕೆ ಅಲ್ಲ.. ಎಂದಿದ್ದಾರೆ ಉಪೇಂದ್ರ.

ಒಟ್ಟಾರೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಪ್ರಜಾಕೀಯ ಪಕ್ಷದ ಸ್ಥಾಪಕ ಉಪೇಂದ್ರ ಅವರು ಮಾಡಿರುವ ಸರಣಿ ಪೋಸ್ಟ್‌ಗಳು ಭಾರೀ ಸದ್ದು ಮಾಡುತ್ತಿವೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *