ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ₹13.53 ಲಕ್ಷ ಮೌಲ್ಯದ ಆಭರಣ ಜಪ್ತಿ

ನ್ಯೂಸ್‌ ಆ್ಯರೋ: ಸ್ಯಾಂಡಲ್‌ವುಡ್‌ನ ಹಿರಿಯನಟಿ ವಿನಯಾ ಪ್ರಸಾದ್ ಅವರ ಮನೆಯಲ್ಲಿ ಕಳವು ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಯ್ಯಪ್ಪ ಅಲಿಯಾಸ್ ಮುರುಗೇಶ್ (36) ಹಾಗೂ ರವಿ (26) ಬಂಧಿತ ಆರೋಪಿಗಳು. ಇವರಿಬ್ಬರು ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯ 5 ಕಡೆಗಳಲ್ಲಿ ಕಳ್ಳತನ ಎಸಗಿರುವುದು ಪೊಲೀಸ್‌ ತನಿಖೆಯಿಂದ ಗೊತ್ತಾಗಿದೆ. ಆರೋಪಿ ಗಳಿಂದ ₹13.53 ಲಕ್ಷ ಮೌಲ್ಯದ 261 ಗ್ರಾಂ ಚಿನ್ನಾಭರಣ ಹಾಗೂ 500 ಗ್ರಾಂ ಬೆಳ್ಳಿ ಸಾಮಗ್ರಿ ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನ ನಂದಿನಿ ಬಡಾವಣೆಯ 4ನೇ ಹಂತದ ರೈಲ್ವೆ ಮೆನ್ಸ್ ಕಾಲೊನಿಯಲ್ಲಿ ಪತಿ ಜ್ಯೋತಿ ಪ್ರಕಾಶ್ ಜೊತೆ ವಿನಯಾ ಪ್ರಸಾದ್ ವಾಸವಿದ್ದಾರೆ. ಕುಟುಂಬದವರೆಲ್ಲ ಅ. 22ರಂದು ಉಡುಪಿಗೆ ಹೋಗಿದ್ದರು. ಅ. 26ರಂದು ಸಂಜೆ ಮನೆಗೆ ವಾಪಸ್ ಬಂದು ನೋಡಿದಾಗ, ವಸ್ತುಗಳು ಚೆಲ್ಲಾಪಿಲ್ಲಿ ಆಗಿ ಬಿದ್ದಿದ್ದವು. ಪರಿಶೀಲಿಸಿದಾಗ ₹7ಸಾವಿರ ನಗದು ಕಳ್ಳತನವಾಗಿದ್ದು ಗೊತ್ತಾಗಿತ್ತು. ಠಾಣೆಗೆ ದೂರು ನೀಡಿದ್ದರು.

ಪ್ರಕರಣದ ಜಾಡು ಹಿಡಿದು ಪೊಲೀಸರು ತನಿಖೆ ಕೈಗೊಂಡಾಗ ಇಬ್ಬರೂ ಆರೋಪಿಗಳು ಸಿಕ್ಕಿಬಿದ್ದರು. ವಿನಯಾ ಪ್ರಸಾದ್ ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ್ದ ಆರೋಪಿಗಳು, ಬಾಗಿಲು ಮೀಟಿ ಒಳನುಗ್ಗಿ ಕಳ್ಳತನ ಮಾಡಿ ದ್ದರು. ಆದರೆ, ಅವರಿಗೆ ₹ 7 ಸಾವಿರ ಮಾತ್ರ ಸಿಕ್ಕಿತ್ತು.

ಬಂಧಿತ ಆರೋಪಿಗಳು, ಅಪರಾಧ ಹಿನ್ನೆಲೆಯುಳ್ಳವರು. ಆರೋಪಿ ಅಯ್ಯಪ್ಪ ವಿರುದ್ಧ 17 ಪ್ರಕರಣ ಹಾಗೂ ರವಿ ವಿರುದ್ಧ 9 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ಚನ್ನರಾಯಪಟ್ಟಣದಿಂದ ಆಗಾಗ ನಗರಕ್ಕೆ ಬರುತ್ತಿದ್ದ ಆರೋಪಿಗಳು, ಬೀಗ ಹಾಕಿರುತ್ತಿದ್ದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದರು. ಕದ್ದ ವಸ್ತುಗಳನ್ನು ಮಾರಾಟ ಮಾಡಿ, ಬಂದ ಹಣವನ್ನು ಹಂಚಿಕೊಳ್ಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *