Spandana Death : ಸ್ಪಂದನ.. ಹೆಸರಿಗೆ ತಕ್ಕ ಜೀವ.. ಉಸಿರಿಗೆ ತಕ್ಕ ಭಾವ – ಮುದ್ದಿನ ಪತ್ನಿಗೆ ಚಿನ್ನಾರಿ ಮುತ್ತಾನ ವಿಡಿಯೋ ನುಡಿನಮನ

Spandana Death : ಸ್ಪಂದನ.. ಹೆಸರಿಗೆ ತಕ್ಕ ಜೀವ.. ಉಸಿರಿಗೆ ತಕ್ಕ ಭಾವ – ಮುದ್ದಿನ ಪತ್ನಿಗೆ ಚಿನ್ನಾರಿ ಮುತ್ತಾನ ವಿಡಿಯೋ ನುಡಿನಮನ

ನ್ಯೂಸ್‌ ಆ್ಯರೋ : ಸ್ಯಾಂಡಲ್‌ವುಡ್‌ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಅಗಲಿ ಇಂದಿಗೆ ಎರಡು ವಾರಗಳಾಗಿದ್ದು, ತಮ್ಮ ಮುದ್ದಿನ ಪತ್ನಿ ಚಿನ್ನಾ… ಬಗ್ಗೆ ಅವರು ಭಾವನೆಗಳನ್ನು ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೋದಲ್ಲಿ ಏನಿದೆ:

ಸ್ಪಂದನ.. ಹೆಸರಿಗೆ ತಕ್ಕ ಜೀವ.. ಉಸಿರಿಗೆ ತಕ್ಕ ಭಾವ
ಅಳತೆಗೆ ತಕ್ಕ ನುಡಿ.. ಬದುಕಿಗೆ ತಕ್ಕ ನಡೆ
ನಮಗೆಂದೇ ಮಿಡಿದ ನಿನ್ನ ಹೃದಯವ.. ನಿಲ್ಲದು ನಿನ್ನೊಂದಿಗಿನ ಕಲರವ
ನಾನೆಂದೂ ನಿನ್ನವ.. ಕೇವಲ ನಿನ್ನವ..

ಎಂದು ವಿಜಯ ರಾಘವೇಂದ್ರ ಅವರ ಧ್ವನಿಯಲ್ಲಿ ಕೆಲ ಸೆಕೆಂಡುಗಳ ವಿಡಿಯೋವನ್ನು ಹಂಚಿಕೊಂಡಿದ್ದಾರೆ. Breathing you…chinna ಎಂಬ ಅಡಿಬರವನ್ನು ಕೊಟ್ಟು ಭಾವನೆಯನ್ನು ಹಂಚಿಕೊಂಡಿದ್ದಾರೆ.

ಈ ವಿಡಿಯೋವನ್ನು ಹಂಚಿಕೊಂಡ ಮೂರೇ ಗಂಟೆಯಲ್ಲಿ 2.60ಲಕ್ಷ ಮಂದಿ ವೀಕ್ಷಿಸಿದ್ದು, 87 ಸಾವಿರಕ್ಕೂ ಅಧಿಕ ಲೈಕ್ಸ್ ಜತೆಗೆ 8 ಸಾವಿರಕ್ಕೂ ಅಧಿಕ ಮಂದಿ ಈ ವಿಡಿಯೋವನ್ನು ಶೇರ್ ಮಾಡಿದ್ದಾರೆ.

ನಟಿ ರಾಧಿಕಾ ಯಶ್ ಅವರು ಕಮೆಂಟ್ ಮಾಡಿ, ಧೈರ್ಯವಾಗಿರಿ ವಿಜಯ್ ಸರ್, ನಾವೆಂದೂ ನಿಮ್ಮೊಂದಿಗೆ ಇದ್ದೇವೆ. ದೇವರು ನಿಮಗೆ ಇನ್ನಷ್ಟು ಶಕ್ತಿ ಕೊಡಲಿ ಎಂದು ಪ್ರತಿಕ್ರಿಯಿಸಿದ್ದಾರೆ.

ನಟಿ ಆಶಿಕಾ ರಂಗನಾಥ್, ನಿರೂಪಕಿ ಅಯ್ಯೋ ಶ್ರದ್ಧಾ, ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ, ನಟಿ ರಶ್ಮಿ ಪ್ರಭಾಕರ್, ಸಾನ್ಯಾ ಅಯ್ಯರ್ ಸೇರಿದಂತೆ ಅನೇಕಾ ಮಂದಿ ವಿಜಯ್ ಅವರಿಗೆ ಕಮೆಂಟ್ಸ್ ಮುಲಕ ಧೈರ್ಯ ತುಂಬಿದ್ದಾರೆ.

ಬ್ಯಾಂಕಾಕ್‌ ಪ್ರವಾಸದಲ್ಲಿದ್ದ ಸ್ಪಂದನಾ ಅವರಿಗೆ ಹೃದಯಾಘಾತವಾಗಿ ಆಗಸ್ಟ್ 7ರಂದು ನಿಧನರಾಗಿದ್ದರು. ನಿವೃತ್ತ ಎಸಿಪಿ ಬಿ.ಕೆ.ಶಿವರಾಂ ಪುತ್ರಿಯಾಗಿರುವ ಸ್ಪಂದನಾ 2007ರಲ್ಲಿ ನಟ ವಿಜಯ ರಾಘವೇಂದ್ರ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಈ ದಂಪತಿಗೆ 14ವರ್ಷದ ಶೌರ್ಯ ಎಂಬ ಮಗನಿದ್ದಾನೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *