ಹಸೆಮಣೆ ಏರಲು ರೆಡಿಯಾದ ವಿಕ್ರಾಂತ್ ರೋಣ ನಟಿ ನೀತಾ ಅಶೋಕ್ – ಬಹುಕಾಲದ ಗೆಳೆಯನ ಜತೆ ಎಂಗೇಜ್‌ ಆದ ಕರಾವಳಿ ಬೆಡಗಿ

ಹಸೆಮಣೆ ಏರಲು ರೆಡಿಯಾದ ವಿಕ್ರಾಂತ್ ರೋಣ ನಟಿ ನೀತಾ ಅಶೋಕ್ – ಬಹುಕಾಲದ ಗೆಳೆಯನ ಜತೆ ಎಂಗೇಜ್‌ ಆದ ಕರಾವಳಿ ಬೆಡಗಿ

ನ್ಯೂಸ್ ಆ್ಯರೋ : ‘ವಿಕ್ರಾಂತ್ ರೋಣ’ ಸಿನಿಮಾದ ನಟಿ ನೀತಾ ಅಶೋಕ್ ಅವರು ತಮ್ಮ ಬಹುಕಾಲದ ಗೆಳೆಯ ಸತೀಶ್ ಜತೆ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ.

ಕ್ಲಾಸ್‌ಮೇಟ್ ಟು ಸೋಲ್‌ಮೇಟ್ ಎಂಬ ಪೋಸ್ಟ್ ಹಾಕುವ ಮೂಲಕ ತಾವು ಎಂಗೇಜ್ ಆಗಿರುವ ಬಗ್ಗೆ ನಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಜೋಡಿ ಶೀಘ್ರದಲ್ಲೇ ಹಸೆಮಣೆ ಏರಲು ಸಿದ್ಧತೆ ನಡೆಸುತ್ತಿದ್ದಾರೆ.

ಖಾಸಗಿ ವಾಹಿನಿಯ ‘ಯಶೋದೆ’ ಧಾರವಾಹಿ ಸೀರಿಯಲ್ ಮೂಲಕ ನಟನಾ ಕ್ಷೇತ್ರಕ್ಕೆ ಕಾಲಿಟ್ಟ ಕರಾವಳಿ ಚೆಲುವೆ ನೀತಾ ಅಶೋಕ್, ತುಳುವಿನ ‘ಜಬರ್‌ದಸ್ತ್ ಶಂಕರ’ ಸಿನಿಮಾಗೆ ನಾಯಕಿಯಾಗಿ ಅಭಿಯನಿಯಿಸಿದ್ದರು. ಅದೃಷ್ಟ ಎಂಬಂತೆ ಸುದೀಪ್ ನಟನೆಯ `ವಿಕ್ರಾಂತ್ ರೋಣ’ ಚಿತ್ರದಲ್ಲಿ ನಾಯಕಿಯಾಗಿ ಮಿಂಚಿದ್ದರು. ಈ ಮೂಲಕ ವರ್ಲ್ಡ್ ವೈಡ್ ನಾಯಕಿಯಾಗಿ ಎಲ್ಲರ ಮನಸ್ಸನ್ನು ಗೆದ್ದಿದ್ದರು.

ಈ ಚಿತ್ರದ ನಂತರ ಮುಂದೆ ಯಾವ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಕಾದು ಕೂತಿದ್ದ ಫ್ಯಾನ್ಸ್‌ಗೆ ಮದುವೆಯ ಸುದ್ದಿ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನಿಶ್ಚಿತಾರ್ಥ ಸಮಾರಂಭದಲ್ಲಿ ಕುಟುಂಬದವರು, ಆಪ್ತರಷ್ಟೇ ಭಾಗವಹಿಸಿದ್ದರು.

Related post

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 22-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷತುಂಬಾ ಚಿಂತೆ ಮಾನಸಿಕ ಶಾಂತಿಗೆ ಭಂಗ ತರಬಹುದು. ಆತಂಕ, ಉದ್ವೇಗದ ಪ್ರತೀ ತುಣುಕೂ ದೇಹದ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಇದನ್ನು ತಡೆಯಿರಿ. ಬಯಸದೆ ಇರುವ ಯಾವುದೇ ಅತಿಥಿ…
Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ – 102 ಕ್ಷೇತ್ರಗಳಲ್ಲಿ ಅದೃಷ್ಟ ಪರೀಕ್ಷೆಗಿಳಿದ 1625 ಅಭ್ಯರ್ಥಿಗಳು

Loksabha Election 2024 : ಇಂದು ಮೊದಲ ಹಂತದ ಮತದಾನ ಆರಂಭ…

ನ್ಯೂಸ್ ಆ್ಯರೋ : ದೇಶದ ಚುಕ್ಕಾಣಿ ಹಿಡಿಯಲು ಐದು ವರ್ಷಗಳಿಗೊಮ್ಮೆ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ 7 ಹಂತದ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಶುಕ್ರವಾರ ಚಾಲನೆ ಸಿಗಲಿದ್ದು,…
ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 19-04-2024 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಆಹಾರವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ ಮತ್ತು ಫಿಟ್ ಆಗಿ ಉಳಿಯಲು ವ್ಯಾಯಾಮ ಮಾಡಿ. ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಒಂದು ಒಳ್ಳೆಯ ಸುದ್ದಿ ಪಡೆಯುವ ಸಾಧ್ಯತೆಯಿದ್ದು ಇದು ನಿಮ್ಮನ್ನಷ್ಟೇ…

Leave a Reply

Your email address will not be published. Required fields are marked *