ನಟಿ ಅಭಿನಯ ಕೇಸಲ್ಲಿ ಕೇಳಿಬಂದ ಲುಕ್ ಔಟ್ ನೋಟೀಸ್ ಎಂದರೇನು? – ಯಾವೆಲ್ಲ ಸಂದರ್ಭಗಳಲ್ಲಿ ಇದನ್ನು ಬಳಸುತ್ತಾರೆ ಗೊತ್ತಾ..!? ವಿವರ ಇಲ್ಲಿದೆ..‌

ನಟಿ ಅಭಿನಯ ಕೇಸಲ್ಲಿ ಕೇಳಿಬಂದ ಲುಕ್ ಔಟ್ ನೋಟೀಸ್ ಎಂದರೇನು? – ಯಾವೆಲ್ಲ ಸಂದರ್ಭಗಳಲ್ಲಿ ಇದನ್ನು ಬಳಸುತ್ತಾರೆ ಗೊತ್ತಾ..!? ವಿವರ ಇಲ್ಲಿದೆ..‌

ನ್ಯೂಸ್‌ ಆ್ಯರೋ: ಅತ್ತಿಗೆ ಕಿರುಕುಳ ಕೊಟ್ಟ ಪ್ರಕರಣ ಸಾಬೀತಾದ ಬಳಿಕ ನಟಿ ಅಭಿನಯ ಹಾಗೂ ಅವರ ತಾಯಿ ಮತ್ತು ಅಣ್ಣ ನಾಪತ್ತೆಯಾಗಿದ್ದು, ಇದೀಗ ಅವರ ವಿರುದ್ಧ ಬೆಂಗಳೂರು ಪೊಲೀಸರು ಲುಕ್‌ ಔಟ್ ನೋಟಿಸ್‌ ಜಾರಿ ಮಾಡಿದ್ದಾರೆ. ಆದರೆ ಈಗಾಗಲೇ ಅಭಿನಯಗೆ ಕೋರ್ಟ್ ಜಾಮೀನು ನೀಡಿದೆ.

ಅಣ್ಣನ ಹೆಂಡತಿಗೆ ಕಿರುಕುಳ ನೀಡಿದ ಆರೋಪ ಸಾಬೀತಾಗಿ ಕೋರ್ಟ್‌ನಿಂದ ಜೈಲು ಶಿಕ್ಷೆಗೆ ಗುರಿಯಾಗಿದ್ದು, ಬಂಧನದ ಭೀತಿಯಿಂದ ಈ ಮೂವರು ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಅವರ ಪತ್ತೆಗೆ ಲುಕ್‌ ಔಟ್ ನೋಟಿಸ್ ಹೊರಡಿಸಿದ್ದರು.

ಅಂದಹಾಗೆ ಈ ‘ಲುಕ್ ಔಟ್’ ನೋಟಿಸ್ ಎಂದರೇನು? ಇದರ ಕಾರ್ಯ ಹೇಗಿರುತ್ತದೆ ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

ಏನಿದು ಲುಕ್‌ಔಟ್ ನೋಟಿಸ್? ಕಾನೂನಿನಲ್ಲಿ ಪೊಲೀಸರಿಗೆ ಹಾಗೂ ಸಂಬಂಧಿಸಿದ ಅಧಿಕಾರಿಗೆ ಮಾತ್ರ ಇದನ್ನು ಬಳಸುವ ಅಧಿಕಾರವಿರುವುದು. ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾದ ಅಪರಾಧಿಗಳನ್ನು ಗುರುತಿಸಲು ಇದನ್ನು ಬಳಸುತ್ತಾರೆ. ಅಂತರಾಷ್ಟ್ರೀಯ ಗಡಿಗಳು, ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳು, ಕಡಲ ಪ್ರದೇಶಗಳು, ಬಂದರುಗಳು ಇತ್ಯಾದಿಗಳಲ್ಲಿ ಅಪರಾಧಿಗಳನ್ನು ಬಂಧಿಸಲು ಇದನ್ನು ಬಳಸಲಾಗುತ್ತದೆ. ಅವುಗಳನ್ನು ದೇಶದ ಎಲ್ಲಾ ವಲಸೆ ಚೆಕ್‌ಪೋಸ್ಟ್‌ಗಳಿಗೆ ಕಳುಹಿಸಲಾಗುತ್ತದೆ.

ಬಂಧನದ ಅಧಿಕಾರವಿದೆ:

ಕಾನೂನು ಜಾರಿ ಅಧಿಕಾರಿಗಳಿಂದ ಅಗತ್ಯವಿರುವ ವ್ಯಕ್ತಿಗಳ ಪ್ರವೇಶ ಮತ್ತು ನಿರ್ಗಮನವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಮತ್ತು ಮೇಲ್ವಿಚಾರಣೆ ಮಾಡಲು ಇದನ್ನು ಬಳಸುತ್ತಾರೆ. ಒಂದು ದೇಶದ ವಲಸೆ ಅಧಿಕಾರಿಗಳು ತಲೆಮರೆಸಿಕೊಂಡಿರುವ ಯಾವುದೇ ಅಪರಾಧಿಯ ವಿರುದ್ಧ ಲುಕ್‌ಔಟ್ ಸುತ್ತೋಲೆಯನ್ನು ಹೊಂದಿದ್ದರೆ, ಪರಾರಿಯಾಗಿರುವ ವ್ಯಕ್ತಿಯನ್ನು ಅಧಿಕಾರಿಯು ಬಂಧಿಸಬಹುದು. ನಿರ್ದಿಷ್ಟ ಅಪರಾಧಿಯು ನಿರ್ದಿಷ್ಟ ವಿಮಾನ ನಿಲ್ದಾಣ ಅಥವಾ ಬಂದರಿನಲ್ಲಿ ಸಿಕ್ಕಿಬಿದ್ದಿರುವ ಸುದ್ದಿಯನ್ನು ಅಧಿಕಾರಿಗಳು ದೃಢಪಡಿಸುತ್ತಾರೆ.

ಯಾವ ಆಧಾರದಲ್ಲಿ ಲುಕ್‌ ಔಟ್‌ ನೋಟಿಸ್ ಜಾರಿಯಾಗುತ್ತದೆ?

ಲುಕ್ ಔಟ್ ಜಾರಿ ಮತ್ತು ಅನುಷ್ಠಾನಕ್ಕೆ ಕೇಂದ್ರ ಗೃಹ ಇಲಾಖೆಯು ಕೆಲವೊಂದು ಸೂಚನೆಗಳನ್ನು ನೀಡಿದೆ. ಭಾರತೀಯ ನಾಗರಿಕರಿಗೆ ಸಂಬಂಧಿಸಿದಂತೆ ಲುಕ್‌ ಔಟ್ ನೋಟಿಸ್ ಪ್ರಕಟಣೆಗೆ ಸಂಬಂಧಿಸಿದಂತೆ 4 ಮೂಲಭೂತ ಮಾರ್ಗಸೂಚಿಗಳನ್ನು ನೀಡಲಾಗಿದೆ. ಅದರಂತೆ ಲುಕ್ ಔಟ್ ಸರ್ಕ್ಯೂಲರ್ ನೀಡುವ ವಿನಂತಿಯನ್ನು ಅಧಿಕಾರಿಯ ಅನುಮೋದನೆಯೊಂದಿಗೆ ನೀಡಬೇಕು. ಆ ಅಧಿಕಾರಿಯು ಭಾರತ ಸರ್ಕಾರದ ಉಪ ಕಾರ್ಯದರ್ಶಿ ಅಥವಾ ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ ಅಥವಾ ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಪೊಲೀಸ್ ವರಿಷ್ಠಾಧಿಕಾರಿಗಳ ಶ್ರೇಣಿಗಿಂತ ಕಡಿಮೆಯಲ್ಲದ ಅಧಿಕಾರಿಯಾಗಿರಬೇಕು.

ಗೃಹ ಸಚಿವಾಲಯದ ಸೂಚನೆಯಂತೆ ಲುಕ್‌ಔಟ್ ನೋಟಿಸ್:

ಭಾರತದ ಯಾವುದೇ ವ್ಯಕ್ತಿಯ ವಿರುದ್ಧ ಎಲ್ಲಾ ವಲಸೆ ಚೆಕ್ ಪೋಸ್ಟ್‌ಗಳಿಗೆ ಲುಕ್‌ಔಟ್ ನೋಟೀಸ್ ಅನ್ನು ಗೃಹ ಸಚಿವಾಲಯ ಸಿದ್ಧಪಡಿಸಿದ ಸ್ವರೂಪದಲ್ಲಿ ಮಾತ್ರ ನೀಡಬಹುದು. ಸಂಪೂರ್ಣ ಗುರುತಿನ ವಿವರಗಳೊಂದಿಗೆ ನಿಗದಿತ ನಮೂನೆಯಲ್ಲಿ ನೀಡಬೇಕು. ಆರೋಪಿಯ ಹೆಸರನ್ನು ಹೊರತುಪಡಿಸಿ ಮೂರಕ್ಕಿಂತ ಕಡಿಮೆ ಗುರುತಿನ ನಿಯತಾಂಕಗಳಿಗೆ ಲುಕ್ ಜೌಟ್ ಸರ್ಕ್ಯೂಲರ್ ನೀಡಲಾಗುವುದಿಲ್ಲ. ಸಾಮಾನ್ಯವಾಗಿ ಲುಕ್‌ಔಟ್ ನೋಟಿಸ್ ವಿತರಣೆಯ ದಿನಾಂಕದಿಂದ ಒಂದು ವರ್ಷದವರೆಗೆ ಮಾನ್ಯವಾಗಿರುತ್ತದೆ. ಆದಾಗ್ಯೂ, ಮೂಲದ ಏಜೆನ್ಸಿಯು ಈ ಸೂಚನೆಯ ಅವಧಿಯನ್ನು ಹೆಚ್ಚಿಸಲು ಬಯಸಿದರೆ, ಅದು ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಅದನ್ನು ಮಾಡಬಹುದು.

ಇಂಟರ್‌ಪೋಲ್‌ನಿಂದ ನೋಟಿಸ್ ಬಂದರೆ ಕಷ್ಟ:

2011ರಿಂದ ಇದಕ್ಕೆ ಹೊಸ ನಿಯಮ ತರಲಾಗಿದೆ. ಒಂದು ವರ್ಷದ ನಿಗದಿತ ಅವಧಿಯೊಳಗೆ ಲುಕ್ ಔಟ್ ಸರ್ಕ್ಯೂಲರ್ ಅನ್ನು ವಿಸ್ತರಿಸಲು ಯಾವುದೇ ವಿನಂತಿಯನ್ನು ಮಾಡದಿದ್ದರೆ, LOC ಅನ್ನು ಅಮಾನತುಗೊಳಿಸಲು ಸಂಬಂಧಿಸಿದ ವಲಸೆ ಅಧಿಕಾರಿಗೆ ಅಧಿದಾರ ನೀಡಲಾಗಿದೆ. ಆದರೆ ಕೋರ್ಟ್ ಮತ್ತು ಇಂಟರ್‌ಪೋಲ್‌ನಿಂದ ಲುಕ್‌ಔಟ್ ನೋಟಿಸ್‌ಗಳನ್ನು ನೀಡಿದರೆ, ಲುಕ್‌ಔಟ್ ನೋಟೀಸ್‌ಗಳು ಒಂದು ವರ್ಷದೊಳಗೆ ಮುಕ್ತಾಯಗೊಳ್ಳುವುದಿಲ್ಲ.

ಲುಕ್ ಔಟ್ ನೋಟಿಸ್ ಕಾರ್ಯ ಹೇಗಿರುತ್ತದೆ?

ವ್ಯಕ್ತಿ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರೆ ಆತನನ್ನು ಬಂಧಿಸಬಹುದು. ವಿಚಾರಣೆ ಮಾಡಲು ಪೊಲೀಸ್ ಠಾಣೆಗೆ ಭೇಟಿ ನೀಡುವಂತೆ ಆತನ ಕುಟುಂಬದ ಸದಸ್ಯರನ್ನು ಕೇಳಬಹುದು. ಆತನ ವಿರುದ್ಧ ನೀಡಿರುವ ಲುಕ್‌ ಅಟ್ ಸರ್ಕ್ಯೂಲರ್ ರದ್ದತಿಗಾಗಿ ಆತ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಬಹುದು.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *