ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಅಪಘಾತ: ತಂದೆ ಜತೆಗೆ ಮೂವರು ಮಕ್ಕಳು ಸಾವು
ಉಡುಪಿ: ಕಾರ್ಕಳ-ಧರ್ಮಸ್ಥಳ ಹೆದ್ದಾರಿಯಲ್ಲಿ ಇಂದು (ಸೆಪ್ಟೆಂಬರ್ 30) ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳ ತಾ| ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್ಗೆ ಲಾರಿ ಡಿಕ್ಕಿಯಾಗಿದೆ.
ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಸುರೇಶ್ ಆಚಾರ್ಯ(36), ಸಮೀಕ್ಷಾ(7), ಸುಶ್ಮಿತಾ(5) ಸುಶಾಂತ್(2) ಮೃತರು. ಇನ್ನು ಸುರೇಶ್ ಆಚಾರ್ಯ ಪತ್ನಿ ಮೀನಾಕ್ಷಿ ಆಚಾರ್ಯ(32) ಸ್ಥಿತಿ ಗಂಭೀರವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Leave a Comment