ಉದ್ಯಮಿಗೆ ಬೆದರಿಕೆ ಆರೋಪ: ಹೆಚ್​ಡಿಕೆ ವಿರುದ್ಧ ಎಫ್‌ಐಆರ್ ದಾಖಲು

union minister hd kumaraswamy
Spread the love

ನ್ಯೂಸ್ ಆ್ಯರೋ: 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಉದ್ಯಮಿ ವಿಜಯ್ ಟಾಟಾ ನೀಡಿದ್ದ ದೂರಿನ ಮೇರೆಗೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. BNS U/s3(5)308,(2)351(2) ಅಡಿಯಲ್ಲಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬವರು ಬೆಂಗಳೂರಿನಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಕುಮಾರಸ್ವಾಮಿ ಹಾಗೂ ರಮೇಶ್ ​ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಲಾಗಿತ್ತು. ನಂತರ ಆ ಬಗ್ಗೆ ಹೇಳಿಕೆ ನೀಡಿ, 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು. ಈ ದೂರಿನ ಮೇರೆಗೆ ಇದೀಗ ಕುಮಾರಸ್ವಾಮಿ ಮತ್ತು ಎಂಎಲ್‌ಸಿ ರಮೇಶ್ ಗೌಡ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

Leave a Comment

Leave a Reply

Your email address will not be published. Required fields are marked *

error: Content is protected !!