Rakshith Shetty : ಬ್ಯಾಚುಲರ್ ಪಾರ್ಟಿ ಸಿನೆಮಾದಲ್ಲಿ ಅನುಮತಿ ಇಲ್ಲದೆ ಹಾಡು ಬಳಕೆ -ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ವಿರುದ್ದ ಎಫ್ಐಆರ್

20240715 114832
Spread the love

ನ್ಯೂಸ್ ಆ್ಯರೋ : ಕನ್ನಡದ ಖ್ಯಾತ ನಟ ರಕ್ಷಿತ್ ಶೆಟ್ಟಿಗೂ ಕಾಪಿರೈಟ್ ಉಲ್ಲಂಘನೆ ವಿವಾದಕ್ಕೂ ನಂಟು ಜಾಸ್ತಿ ಇದೆ. ಈ ಮೊದಲು ಕಿರಿಕ್ ಪಾರ್ಟಿ ಸಿನೆಮಾದಲ್ಲಿ ಹಾಡು ಬಳಕೆ ವಿರುದ್ದ ಕೇಸ್ ದಾಖಲಾಗಿತ್ತು, ಇದೀಗ ಮತ್ತೆ ಬ್ಯಾಚುಲರ್ ಪಾರ್ಟಿ ಸಿನೆಮಾದಲ್ಲಿ ಅನುಮತಿ ಇಲ್ಲದೆ ಹಳೆ ಹಾಡು ಬಳಕೆ ಮಾಡಿದ್ದಕ್ಕೆ ಎಫ್ಐಆರ್ ದಾಖಲಾಗಿದೆ.

ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ನವೀನ್ ಕುಮಾರ್ ಎಂಬುವವರು ರಕ್ಷಿತ್ ಶೆಟ್ಟಿ ದೂರು ದಾಖಲು ಮಾಡಿದ್ದಾರೆ. ನವೀನ್ ಕುಮಾರ್ ಅವರು ಎಂಆರ್ಟಿ ಮ್ಯೂಸಿಕ್ ನ ಪಾಲುದಾರಿಕೆ ಹೊಂದಿದ್ದಾರೆ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಆದ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು..’ ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

2024ರ ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜೊತೆ ಮಾತುಕತೆ ಆಗಿತ್ತಂತೆ. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ.

2024ರ ಮಾರ್ಚ್ ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಗಮನಿಸಿದಾಗ 2 ಚಿತ್ರಗಳ ಹಾಡು ಬಳಕೆ ಆಗಿತ್ತು. ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ.

ಪರಮ್ವಾ ಸ್ಟುಡಿಯೋಸ್ ಹಾಗೂ ನಟ ರಕ್ಷಿತ್ ಶೆಟ್ಟಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ನಟ ರಕ್ಷಿತ್ ಶೆಟ್ಟಿಗೆ ಯಶವಂತಪುರ ಪೊಲೀಸರಿಂದ ನೋಟಿಸ್ ನೀಡಲಾಗಿದೆ. ಮೌಖಿಕವಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

Leave a Comment

Leave a Reply

Your email address will not be published. Required fields are marked *