ನಟ ‘ಹುಲಿ’ ಕಾರ್ತಿಕ್​ ಮೇಲೆ ದಾಖಲಾಯ್ತು ಎಫ್​ಐಆರ್: ಕಾರಣ ಏನು?

huli karthik
Spread the love

ನ್ಯೂಸ್ ಆ್ಯರೋ: ಮಾತಿನಲ್ಲೇ ಮೋಡಿ ಮಾಡಿದ್ದ ಹಾಸ್ಯ ನಟ ‘ಹುಲಿ’ ಕಾರ್ತಿಕ್ ಅವರು ಇತ್ತೀಚೆಗಷ್ಟೇ ‘ಗಿಚ್ಚಿ ಗಿಲಿಗಿಲಿ’ ಮೂರನೇ ಸೀಸನ್​ನ ವಿನ್​ ಆಗಿದ್ದರು. ಇದರಿಂದ ಅವರ ಜನಪ್ರಿಯತೆ ಹೆಚ್ಚಿತ್ತು. ಇತ್ತೀಚೆಗೆ ರಿಲೀಸ್ ಆದ ‘ಪೌಡರ್’ ಸೇರಿ ಕೆಲವು ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಆದರೆ ಈಗ ಅವರು ಮಾತನಾಡುವಾಗ ಎಡವಿದ್ದಾರೆ. ಈ ಕಾರಣಕ್ಕೆ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಹೌದು. . ಒಂದು ಸಮುದಾಯವನ್ನ ಹೀಗಳೆಯುವ ರೀತಿಯಲ್ಲಿ ಹುಲಿ ಕಾರ್ತಿಕ್ ಮಾತನಾಡಿದ್ದರು. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು. ಈ ಕಾರಣದಿಂದಲೇ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ ಎಂದು ಹೇಳಲಾಗಿದೆ.

ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ ಅವಾರ್ಡ್’ ಕಾರ್ಯಕ್ರಮದಲ್ಲಿ ಬಳಕೆ ಮಾಡಿದ ಪದವು ಬೋವಿ ಜನಾಂಗಕ್ಕೆ ನೋವುಂಟು ಮಾಡಿದೆ. ಹೀಗಾಗಿ ಜಾತಿ ನಿಂದಿಸಿ ಮಾತನಾಡಿದ ನಟನ ಮೇಲೆ ಕ್ರಮ ಕೈಗೊಳ್ಳಲು ದೂರು ನೀಡಲಾಗಿದೆ.

ಹುಲಿ ಕಾರ್ತಿಕ್ ಅಲ್ಲದೆ ‘ಅನುಬಂಧ’ ಅವಾರ್ಡ್ಸ್​ನ ಸಂಭಾಷಣೆಕಾರ, ಕಾರ್ಯಕ್ರಮದ ನಿರ್ಮಾಪಕ, ನಿರ್ದೇಶಕರ ಮೇಲೂ ಕೇಸ್ ದಾಖಲಾಗಿದೆ ಎಂದು ತಿಳಿದು ಬಂದಿದೆ.

Leave a Comment

Leave a Reply

Your email address will not be published. Required fields are marked *

error: Content is protected !!