ಶಾರದೆ ಪ್ರತಿಷ್ಠಾಪನೆ; ಮಾಜಿ ಸಚಿವ ಜನಾರ್ದನ ಪೂಜಾರಿ ಅವರಿಂದ ಕುದ್ರೋಳಿ ದಸರಾ ಉದ್ಘಾಟನೆ

inaugurates kudroli dasara
Spread the love

ಮಂಗಳೂರು: ದಸರಾ ಎಂಬ ಜನಪ್ರೀತಿಗಳಿಸಿದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಇಂದು(ಅ.3) ರಿಂದ ಆರಂಭವಾಗಿದೆ.

ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ದಸರಾ ಮಹೋತ್ಸವ ಉದ್ಘಾಟಿಸಿದರು.

Sharade Kudroli

ಮಂಗಳೂರು ದಸರಾದ ವಿಶೇಷ ಆಕರ್ಷಣೆಯಾದ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ದೇವಳದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಮಾಡಿಸಿ ದರ್ಬಾರ್ ಹಾಲ್ ನಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಇದೇ ವೇಳೆ ಶ್ರೀ ಮಹಾ ಗಣಪತಿ ಸಹಿತ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು.

ಅ.13 ರವರೆಗೆ ವಿಶೇಷ ಪೂಜೆ ಹಾಗೂ ಅಲಂಕಾರ ಸಹಿತ ಪೂಜಿಸಲಾಗುತ್ತದೆ. ಕುದ್ರೋಳಿ ಕ್ಷೇತ್ರವು ವಿಶೇಷ ಅಲಂಕಾರದೊಂದಿಗೆ ಕಂಗೊಳಿಸುತ್ತಿದ್ದು, ಮಂಗಳೂರು ನಗರವು ವಿದ್ಯುತ್ ದೀಪಗಳ ಅಲಂಕಾರದೊಂದಿಗೆ ಕಂಗೊಳಿಸುತ್ತಿದೆ. ಇನ್ನು ಇಂದು ದಸರಾ ಉದ್ಘಾಟನೆಗೆ ದರ್ಬಾರ್‌ ಹಾಲ್‌ನಲ್ಲಿ ನಡೆದುಕೊಂಡೇ ಬಂದ ಪೂಜಾರಿಯವರು ಗಮನ ಸೆಳೆದಿದ್ದರು. ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಗಣ್ಯ ಅತಿಥಿಗಳು ದಸರಾ ಉದ್ಘಾಟನೆಯ ಸಂದರ್ಭದಲ್ಲಿ ಭಾಗವಹಿಸಿ, ಶಾರದೆ ಹಾಗೂ ನವದುರ್ಗೆಯರ ಆಶೀರ್ವಾದ ಪಡೆದುಕೊಂಡಿದ್ದಾರೆ.

Leave a Comment

Leave a Reply

Your email address will not be published. Required fields are marked *