ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ ಉಚಿತ ಹೊಲಿಗೆ ಯಂತ್ರ; ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ

Free Sewing Machine Scheme 2024
Spread the love

ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಬೇಕು, ಆರ್ಥಿಕವಾಗಿ ಸಬಲರನ್ನಾಗಿ ಮಾಡಬೇಕು ಎನ್ನುವ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಪ್ರಾರಂಭಿಸಿವೆ. ಅಂತಹ ಯೋಜನೆಗಳಲ್ಲಿ ಒಂದು ಉಚಿತ ಹೊಲಿಗೆ ಯಂತ್ರ ಸ್ಕೀಮ್.‌ ಭಾರತ ಸರ್ಕಾರವು ದೇಶದ ಬಡ ಕುಟುಂಬಗಳ ಮಹಿಳೆಯರಿಗಾಗಿ ಪ್ರಾರಂಭಿಸಿದ ಯೋಜನೆ ಇದಾಗಿದ್ದು, ಇದು ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ಮಹಿಳೆಯರ ಸಬಲೀಕರಣ ಮತ್ತು ಆರ್ಥಿಕ ನೆರವು ನೀಡುವ ಮೂಲಕ ಅವರ ಸ್ವಾವಲಂಬಿ ಬದುಕಿಗೆ ಸಹಾಯ ಮಾಡುವ ಉದ್ದೇಶವನ್ನು ಹೊಂದಿದೆ.

ಬಡ ಮತ್ತು ಆರ್ಥಿಕವಾಗಿ ದುರ್ಬಲವಿರುವ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸ್ವ ಉದ್ಯೋಗದ ಅವಕಾಶವನ್ನು ಕಲ್ಪಿಸಿಕೊಡಲು ಪ್ರಧಾನಿ ನರೇಂದ್ರ ಮೋದಿಯವರು ಪ್ರಾರಂಭಿಸಿದ ಯೋಜನೆ ಇದಾಗಿದೆ. ಈ ಯೋಜನೆಯು ಟೈಲರಿಂಗ್‌ ಕೆಲಸದ ಮೂಲಕ ಮಹಿಳೆಯರು ಮನೆಯಿಂದಲೇ ಹಣವನ್ನು ಗಳಿಸಲು ಅನುವು ಮಾಡಿಕೊಡುತ್ತದೆ. ಈ ಯೋಜನೆಯಡಿ ಉಚಿತವಾಗಿ ಹೊಲಿಗೆಯಂತ್ರವನ್ನು ಪಡೆಯುವ ಮೂಲಕ ಮಹಿಳೆಯರು ಸ್ವ-ಉದ್ಯೋಗವನ್ನು ಪಡೆಯುವುದರ ಜೊತೆಗೆ ಅವರು ಆರ್ಥಿಕವಾಗಿ ಸ್ವತಂತ್ರರಾಗಬಹುದು.

ಸುಮಾರು 50 ಸಾವಿರ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಸಿಗಲಿದ್ದು, ಕರ್ನಾಟಕ ಸೇರಿದಂತೆ ರಾಜಸ್ಥಾನ, ಗುಜರಾತ್‌, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ ಈ ರಾಜ್ಯಗಳ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:

  • ವಯೋಮಿತಿ : ಅರ್ಜಿದಾರರು 18 ರಿಂದ 45 ವರ್ಷ ವಯಸ್ಸಿನವರಾಗಿರಬೇಕು.
  • ಆದಾಯ ಮಿತಿ : ಅರ್ಜಿ ಸಲ್ಲಿಸುವ ಮಹಿಳೆಯ ಕುಟುಂಬದ ವಾರ್ಷಿಕ ಆದಾಯವು ರೂ 2.5 ಲಕ್ಷಕ್ಕಿಂತ ಕಡಿಮೆಯಿರಬೇಕು.
  • ಸರ್ಕಾರಿ ನೌಕರಿ ಇಲ್ಲ: ಕುಟುಂಬದ ಸದಸ್ಯರು ಸರ್ಕಾರಿ ಉದ್ಯೋಗದಲ್ಲಿದ್ದರೆ ಅಂತಹ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಲ್ಲ.
  • ಭಾರತೀಯ ಪೌರತ್ವ : ಭಾರತೀಯ ಪೌರತ್ವವನ್ನು ಹೊಂದಿರುವ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು.

ಅರ್ಜಿ ಸಲ್ಲಿಸುವುದು ಹೇಗೆ:

ಆನ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆ:

  1. ಮೊದಲಿಗೆ, ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
  2. ಒಮ್ಮೆ ವೆಬ್‌ಸೈಟ್‌ನಲ್ಲಿ, ಉಚಿತ ಹೊಲಿಗೆ ಮೆಷಿನ್ ಯೋಜನೆ 2024 (Free Sewing Machine Scheme 2024) ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ.
  3. ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿ.

ಆಫ್‌ಲೈನ್ ಅಪ್ಲಿಕೇಶನ್ ಪ್ರಕ್ರಿಯೆ:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದ ಮಹಿಳೆಯರು ತಮ್ಮ ಹತ್ತಿರದ ಮಹಿಳಾ ಸಬಲೀಕರಣ ಕೇಂದ್ರ ಅಥವಾ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್
  • ಆದಾಯ ಪ್ರಮಾಣಪತ್ರ
  • ಜನನ ಪ್ರಮಾಣಪತ್ರ, ಆಧಾರ್ ಕಾರ್ಡ್
  • ಪಾಸ್ಪೋರ್ಟ್ ಸೈಜ್ ಫೋಟೋ
  • ವಾಸಸ್ಥಳ ದೃಢೀಕರಣ ಪತ್ರ

Leave a Comment

Leave a Reply

Your email address will not be published. Required fields are marked *

error: Content is protected !!