ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಕೌಶಲ್ಯಾಭಿವೃದ್ಧಿ ತರಬೇತಿ, ಉದ್ಯೋಗ, ಉನ್ನತ ವಿದ್ಯಾಭ್ಯಾಸಕ್ಕೆ ಇಲ್ಲಿದೆ ಅವಕಾಶ

Job
Spread the love

ನ್ಯೂಸ್ ಆ್ಯರೋ: ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲವು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ನಿಟ್ಟಿನಲ್ಲಿ 2023-2024 ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇಕಡ 70ಕ್ಕಿಂತ ಹೆಚ್ಚು ಅಂಕ ಪಡೆದು ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ.

ದೇಶದ ಅತಿ ದೊಡ್ಡ ಸಾಫ್ಟ್‌ವೇರ್‌ ಸಂಸ್ಥೆಗಳಲ್ಲಿ ಒಂದಾಗಿರುವ ಎಚ್‌.ಸಿ.ಎಲ್‌-ಟೆಕ್ ಬೀ ಸಂಸ್ಥೆಯು ವಿದ್ಯಾರ್ಥಿಗಳಿಗೆ ತರಬೇತಿ, ಉದ್ಯೋಗಾವಕಾಶ ಮತ್ತು ಹಣಕಾಸಿನ ನೆರವಿನೊಂದಿಗೆ ಉನ್ನತ ಪದವಿ ಶಿಕ್ಷಣ ಪಡೆಯಲು ಅವಕಾಶವನ್ನು ಕಲ್ಪಿಸಿದೆ.

ಈ ಕುರಿತು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದೊಂದಿಗೆ (KSDC) ಎಚ್‌ಸಿಎಲ್‌-ಟೆಕ್ ಬೀ ಸಂಸ್ಥೆಯು ತಿಳುವಳಿಕಾ ಒಪ್ಪಂದಕ್ಕೆ ಸಹಿ ಹಾಕಿದೆ. ಕೆಎಸ್‌ಡಿಸಿ ವ್ಯವಸ್ಥಾಪಕ ನಿರ್ದೇಶಕರಾದ ಎಂ. ಕನಗವಲ್ಲಿ ಮತ್ತು ಎಚ್‌ಸಿಎಲ್‌-ಟೆಕ್ ಬೀ ರಾಜ್ಯ ಮುಖ್ಯಸ್ಥರಾದ ಆರ್. ಪಾಪಿರೆಡ್ಡಿ ಅವರು ಇತ್ತೀಚಿಗೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು. ಈ ಮೂಲಕ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ಕ್ಷೇತ್ರದಲ್ಲಿ ವೃತ್ತಿ ಜೀವನ ಆರಂಭಿಸಲು ಬಯಸುವ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಿದೆ.

ಎಚ್‌ಸಿಎಲ್‌-ಟೆಕ್ ಬೀನಲ್ಲಿ ಇಂಟರ್ನ್‌ಶಿಪ್‌ಗಾಗಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಹತ್ತು ಸಾವಿರ ರೂಪಾಯಿ ನೀಡಲಾಗುತ್ತಿದೆ. ನಂತರ ಅದೇ ಸಂಸ್ಥೆಯಲ್ಲಿ ಉದ್ಯೋಗಿಗಳಾದರೆ ವಾರ್ಷಿಕ ₹1.7 ಲಕ್ಷದಿಂದ ₹ 2.2 ಲಕ್ಷ ರೂಪಾಯಿ ವೇತನ ನೀಡಲಾಗುತ್ತದೆ. ಇದರ ಜೊತೆಗೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಪದವಿ ಶಿಕ್ಷಣ ಪಡೆಯುವ ಅವಕಾಶವನ್ನೂ ಒದಗಿಸಲಾಗುತ್ತದೆ. ತರಬೇತಿ ಪಡೆಯಲು ಶುಲ್ಕ ನಿಗದಿಪಡಿಸಲಾಗಿದೆ.

2017ರಲ್ಲಿ ಎಚ್‌.ಸಿ.ಎಲ್‌-ಟೆಕ್‌ ಬೀ ಸಂಸ್ಥೆಯು ಈ ಯೋಜನೆ ಆರಂಭಿಸಿದೆ. 2023-2024 ಶೈಕ್ಷಣಿಕ ಸಾಲಿನಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ 2025ರಲ್ಲಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಕೂಡಲೇ https://bit.ly/TechBeeKSDC ವೆಬ್‌ಸೈಟ್‌ಗೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು.

ಹೆಚ್ಚಿನ ವಿವರಗಳಿಗೆ ಸಂಪರ್ಕಿಸಬಹುದಾದ ಮೊಬೈಲ್‌ ಸಂಖ್ಯೆಗಳು: 9845454471/ 8722790340

Leave a Comment

Leave a Reply

Your email address will not be published. Required fields are marked *

error: Content is protected !!