SBI, PNB ಯ ಎಲ್ಲಾ ಸರ್ಕಾರಿ ಖಾತೆ ಮುಚ್ಚುವಂತೆ ಸರ್ಕಾರದ ಆದೇಶ – ಠೇವಣಿಯೂ ಇಡುವಂತಿಲ್ಲ, ರಾಜ್ಯ ಸರ್ಕಾರದ ಖಡಕ್ ಸೂಚನೆ
ನ್ಯೂಸ್ ಆ್ಯರೋ : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿನ ಸರ್ಕಾರಕ್ಕೆ ಒಳಪಟ್ಟ ಎಲ್ಲಾ ಖಾತೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲು ಕರ್ನಾಟಕ ಸರ್ಕಾರ ರಾಜ್ಯ ಇಲಾಖೆಗಳಿಗೆ ಆದೇಶಿಸಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಖಾತೆಗಳನ್ನು ಮುಚ್ಚಲು ಮತ್ತು ಠೇವಣಿಗಳನ್ನು ವಸೂಲಿ ಮಾಡಲು ಎಲ್ಲಾ ರಾಜ್ಯ ಇಲಾಖೆಗಳಿಗೆ ನಿರ್ದೇಶಿಸಲಾಗಿದೆ.
ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಮತ್ತಿತರ ಸಂಸ್ಥೆಗಳು, ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸುವುದು ಮತ್ತು ಠೇವಣಿಗಳನ್ನು ತಕ್ಷಣದಿಂದ ಹಿಂದಕ್ಕೆ ಪಡೆಯುವುದು ಹಾಗೂ ಇನ್ನು ಮುಂದೆ ಸದರಿ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಬ್ಯಾಂಕ್ ಖಾತೆಗಳನ್ನು ಚಾಲ್ತಿಯಲ್ಲಿಡುವುದು, ಠೇವಣಿಗಳ ಹೂಡಿಕೆಗಳನ್ನು ಮಾಡದಿರುವ ಬಗ್ಗೆ ಈ ಆದೇಶ ಹೊರಬಿದ್ದಿದೆ.
ಈ ಬ್ಯಾಂಕುಗಳಲ್ಲಿ ಯಾವುದೇ ಠೇವಣಿ ಅಥವಾ ಹೂಡಿಕೆಗಳನ್ನು ಅನುಮತಿಸಲಾಗುವುದಿಲ್ಲ. ಕೆಲ ಮೂಲಗಳ ಪ್ರಕಾರ ಠೇವಣಿಗಳ ವಿಚಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಆರೋಪದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
Leave a Comment