ಭೂಮಿ ಖರೀದಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೆ 25 ಲಕ್ಷ ಸಬ್ಸಿಡಿ ಸಾಲ – ಮಹಿಳೆಯರಿಗಾಗಿ ಹೊಸ ಯೋಜನೆ ಜಾರಿ : ವಿವರ ಇಲ್ಲಿದೆ..

ಭೂಮಿ ಖರೀದಿಗೆ ಕೇಂದ್ರ ಸರ್ಕಾರದಿಂದ ಸಿಗಲಿದೆ 25 ಲಕ್ಷ ಸಬ್ಸಿಡಿ ಸಾಲ – ಮಹಿಳೆಯರಿಗಾಗಿ ಹೊಸ ಯೋಜನೆ ಜಾರಿ : ವಿವರ ಇಲ್ಲಿದೆ..

ನ್ಯೂಸ್ ಆ್ಯರೋ : ತಮ್ಮದೇ ಆದ ಸ್ವಂತ ಭೂಮಿ ಹೊಂದಬೇಕು ಎಂದು ಎಷ್ಟೋ ಜನ ಕನಸು ಕಾಣುತ್ತಾರೆ. ಆದರೆ ಹಣವಿಲ್ಲದೆ ಕನಸು ನನಸಾಗೋದು ತುಂಬಾ ಕಷ್ಟ. ಆದರೆ ಇನ್ನು ಮುಂದೆ ಆ ಬಗ್ಗೆ ಚಿಂತಿಸುವ, ಕೊರಗುವ ಅಗತ್ಯವಿಲ್ಲ. ಭೂಮಿರಹಿತರಿಗೆ ಸರ್ಕಾರ ಭೂಮಿ ಖರೀದಿಗೆ ಸಾಲ ನೀಡಲು ಮುಂದಾಗಿದೆ. ಜೊತೆಗೆ ಸಬ್ಸಿಡಿ ಕೂಡ ನೀಡಲಿದೆ.

ಸರ್ಕಾರ ಜಾರಿಗೆ ತಂದಿರುವ ಈ ಹೊಸ ಯೋಜನೆ ಯಾವುದು?, ಈ ಯೋಜನೆಗೆ ಯಾರೆಲ್ಲಾ ಅರ್ಹರು?, ಅರ್ಜಿ ಸಲ್ಲಿಸೋದು ಹೇಗೆ? ಎಂಬೆಲ್ಲ ಪ್ರಶ್ನೆಗಳು ನಿಮ್ಮಲ್ಲಿದ್ರೆ ಈ ವರದಿಯನ್ನು ಪೂರ್ತಿ ಓದಿ.

ಯಾವುದು ಈ ಯೋಜನೆ?

ಸರ್ಕಾರ ಜಾರಿಗೆ ತಂದಿರುವ ಭೂ ಒಡೆತನ ಯೋಜನೆ ಅಡಿಯಲ್ಲಿ ಭೂ ರಹಿತ ಮಹಿಳಾ ಕೃಷಿಕರು ತಾವು ವಾಸಿಸುವ ಸ್ಥಳದಿಂದ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 2 ಎಕರೆ ಖುಷ್ಕ ಅಥವಾ ಒಂದು ಎಕರೆ ತರಿ ಜಮೀನು ಖರೀದಿಸಲು ಸರ್ಕಾರ ಸಹಾಯಧನ ನೀಡುತ್ತದೆ.ಈ ಸಹಾಯಧನದ ಮೊತ್ತ 25 ಲಕ್ಷ ಹಾಗೂ 20 ಲಕ್ಷ ರೂಪಾಯಿ.

ಇದರಲ್ಲಿ 50% ನಷ್ಟು ಫಲಾನುಭವಿಗಳು ಪಾವತಿಸಿದರೆ ಇನ್ನು 50% ನಷ್ಟು ಸರ್ಕಾರ ಸಬ್ಸಿಡಿ ನೀಡುತ್ತದೆ. ಯೋಜನೆಯ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ 25 ಲಕ್ಷ ರೂಪಾಯಿಗಳ ಸಾಲ ಹಾಗೂ ಇನ್ನುಳಿದ ಜಿಲ್ಲೆಗಳಿಗೆ 20 ಲಕ್ಷ ರೂಪಾಯಿಗಳ ಸಾಲವನ್ನು ಸರ್ಕಾರ ಮಂಜೂರು ಮಾಡಲಿದೆ.

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು?

ಈ ಯೋಜನೆಗೆ ಅರ್ಜಿ ಸಲ್ಲಿಸಲು ಮುಖ್ಯವಾಗಿ,
ಆಧಾರ್ ಕಾರ್ಡ್
ಆದಾಯ ಪ್ರಮಾಣ ಪತ್ರ
ಜಾತಿ ಪ್ರಮಾಣ ಪತ್ರ
ಅರ್ಜಿದಾರರ ಫೋಟೋ
ಕೃಷಿ ಕಾರ್ಮಿಕರ ದೃಢೀಕರಣ ಪತ್ರ ದಾಖಲೆಗಳು ಬೇಕು. ಇನ್ನು ಹೆಚ್ಚಿನ ಮಾಹಿತಿಯನ್ನು ನೀವು ಆನ್ಲೈನ್ ಪೋರ್ಟಲ್ ಪರಿಶೀಲಿಸಬಹುದು.

ಅರ್ಜಿ ಸಲ್ಲಿಕೆ‌ ಹೇಗೆ?

ಈ ಯೋಜನೆಗೆ ನೀವು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬಹುದಾಗಿದ್ದು, ಅಧಿಕೃತ ವೆಬ್ಸೈಟ್ https://sevasindhu.karnataka.gov.in/Sevasindhu/Kannada?ReturnUrl=%2F ಗೆ ಭೇಟಿ ನೀಡಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಯಾರೆಲ್ಲ ಅರ್ಹರು?

2023-24ನೇ ಸಾಲಿನ ಭೂ ಒಡೆತನ‌ ಯೋಜನೆಗೆ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಪರಿಶಿಷ್ಟ ಜಾತಿ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮದ ಸಮುದಾಯದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ‌ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನಾಂಕವಾಗಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *