
ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳೇ, ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿ – ಬರೋಬ್ಬರಿ 35,000/- ರೂಪಾಯಿ ಪಡೆಯಿರಿ
- ಸರ್ಕಾರಿ ಸೇವೆಗಳು
- February 20, 2023
- No Comment
- 16808
ನ್ಯೂಸ್ ಆ್ಯರೋ : 2022-23ನೇ ಸಾಲಿನಲ್ಲಿ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ವಿದ್ಯಾರ್ಥಿಗಳು ಸರ್ಕಾರದ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
2021ನೇ ಸಾಲಿನಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಸಮಾಜ ಕಲ್ಯಾಣ ಇಲಾಖೆಯು ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
2022-23ನೇ ಸಾಲಿನಲ್ಲಿ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಸರ್ಕಾರದ ವೆಬ್‌ಸೈಟ್ sw.kar.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಫೆ.28 ರಂದು ನಿಗದಿಪಡಿಸಲಾಗಿದೆ.
ವಿದ್ಯಾರ್ಥಿ ವೇತನದ ವಿವರ:
ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ₹20,000, ಪದವಿ ವಿದ್ಯಾರ್ಥಿಗಳಿಗೆ ₹25,000, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ₹30,000, ಅಗ್ರಿಕಲ್ಚರ್, ಎಂಜಿನಿಯರ್, ಪಶುವೈದ್ಯಕೀಯ, ವೈದ್ಯಕೀಯ ವಿದ್ಯಾರ್ಥಿಗಳಿಗೆ ₹ 35,000 ವಿದ್ಯಾರ್ಥಿವೇತನ ನಿಗದಿಯಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್ sw.kar.nic.in ಗೆ ಭೇಟಿ ನೀಡಬೇಕು
- ಮುಖಪುಟದಲ್ಲಿ ಮೆಟ್ರಿಕ್ ನಂತರದ ಪದವಿ/ ಸ್ನಾತಕೋತ್ತರ ಪದವಿ ಪ್ರೋತ್ಸಾಹಧನ ಎನ್ನುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು
- ನಂತರ ಮತ್ತೊಂದು ಪುಟ ತೆರೆದುಕೊಳ್ಳುತ್ತದೆ. ಆ ಪುಟದಲ್ಲಿ ಆನ್‌ಲೈನ್ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ ಇನ್ನೊಂದು ಪುಟ ತೆರೆಯುತ್ತದೆ
- ಆ ಪುಟದಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಬೇಕು
- ನಂತರ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ.
ಅಗತ್ಯ ದಾಖಲೆಗಳು:
ಹಿಂದಿನ ವರ್ಷದ ಅಂಕಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ, ಫೋಟೋ – ಇವಿಷ್ಟನ್ನು ನೀವು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು.
ಅರ್ಜಿ ಸಲ್ಲಿಸಿದ ಮೇಲೆ ಒಂದು ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು, ಪ್ರಿಂಟ್ ತೆಗೆದುಕೊಳ್ಳಬೇಕು. ಆನ್‌ಲೈನ್ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ ಕಾಲೇಜಿನ ಹೆಸರನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.