ಮಾರ್ಚ್‌ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭ – ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್‌

ಮಾರ್ಚ್‌ 9ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭ – ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್‌

ನ್ಯೂಸ್‌ ಆ್ಯರೋ : ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್‌ 9ರಿಂದ ಆರಂಭವಾಗಲಿದ್ದು, ಈ ನಿಟ್ಟಿನಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಗುಡ್‌ನ್ಯೂಸ್‌ ನೀಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆಯನ್ನು ಕೆಎಸ್‌ಆರ್‌ಟಿಸಿ ಒದಗಿಸಲಿದೆ.

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಸೇವೆ ನೀಡುವಂತೆ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್‌ಆರ್‌ಟಿಸಿ) ಮನವಿ ಮಾಡಿತ್ತು. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೆಎಸ್‌ಆರ್‌ಟಿಸಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಚಿತ ಬಸ್ ಸೇವೆ ಲಭ್ಯವಾಗಲಿದೆ.

ಈ ಸೇವೆ ಬಯಸುವ ವಿದ್ಯಾರ್ಥಿಗಳು ಪರೀಕ್ಷಾ ದಿನ ಸಂಚರಿಸುವಾಗಿ ಬಸ್ ನಿರ್ವಾಹಕರಿಗೆ ಪರೀಕ್ಷೆಯ ಪ್ರವೇಶ ಪತ್ರ ತೋರಿಸುವುದು ಕಡ್ಡಾಯ ಮಾಡಲಾಗಿದೆ. ಈ ಕುರಿತಂತೆ ಚಾಲಕ ಮತ್ತು ನಿರ್ವಾಹಕರಿಗೆ ಸೂಕ್ತ ತಿಳುವಳಿಕೆ ನೀಡುವಂತೆ ನಿಗಮ ಸಲಹೆ ಸೂಚನೆಯನ್ನು ನೀಡಲಾಗಿದೆ.

ಪರೀಕ್ಷಾ ವೇಳಾಪಟ್ಟಿ ಹೀಗಿದೆ..

  • ಫೆ.09 ಗುರುವಾರ ಕನ್ನಡ, ಅರೇಬಿಕ್
  • ಫೆ.11 ಶನಿವಾರ ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
  • ಫೆ.13 ಸೋಮವಾರ – ಅರ್ಥಶಾಸ್ತ್ರ
  • ಫೆ.14 ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
  • ಫೆ.15 ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
  • ಫೆ.16, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • ಫೆ.17, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
  • ಫೆ.18, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ
  • ಫೆ.20, ಸೋಮವಾರ – ಇತಿಹಾಸ, ಭೌತಶಾಸ್ತ್ರ
  • ಫೆ.21, ಮಂಗಳವಾರ – ಹಿಂದಿ
  • ಫೆ.23, ಗುರುವಾರ – ಇಂಗ್ಲೀಷ್
  • ಫೆ.25 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • ಫೆ.27, ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
  • ಫೆ.29, ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

Related post

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ ಸುತ್ತ ಭದ್ರತೆ ಹೆಚ್ಚಿಸಿದ ಮುಂಬೈ ಪೊಲೀಸರು

ಗ್ಯಾಂಗ್‌ಸ್ಟಾರ್‌ ಲಾರೆನ್ಸ್ ಬಿಷ್ಣೋಯಿಯಿಂದ ನಟ ಸಲ್ಮಾನ್‌ಗೆ ಜೀವಬೆದರಿಕೆ – ನಟನ ಮನೆ…

ನ್ಯೂಸ್‌ ಆ್ಯರೋ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ಗೆ ಇದೀಗ ಜೀವ ಬೆದರಿಕೆಯೊಡ್ಡಿ ಇ ಮೇಲ್‌ ಬಂದ ಹಿನ್ನೆಲೆಯಲ್ಲಿ ಮನೆಯ ಸುತ್ತಲೂ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಕಳೆದ ವರ್ಷ…
ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ ಉದ್ಘಾಟಿಸಿ ಪೋಷಕರಿಗೆ ಕಿವಿಮಾತು ಹೇಳಿದ್ದೇನು?

ಸಾಧಕರೆಲ್ಲ ಓದಿದ್ದು ಸರ್ಕಾರಿ ಶಾಲೆಯಲ್ಲಿ ಎಂದ ರಿಷಬ್ – ಸರ್ಕಾರಿ ಶಾಲೆ…

ನ್ಯೂಸ್‌ ಆ್ಯರೋ : ಸರ್ಕಾರಿ ಶಾಲೆ ಉಳಿವಿಗಾಗಿ ಮಕ್ಕಳು, ಗ್ರಾಮಸ್ಥರು ಹೋರಾಡುವ ಕಥೆಯನ್ನು ಸಿನಿಮಾ ಮಾಡಿ ಎಲ್ಲರ ಮನಸ್ಸನ್ನು ಗೆದ್ದಿದ್ದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ನಾನು…
ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ ಸಾಧ್ಯತೆ, ಪಕ್ಷಗಳಲ್ಲಿ ಚಟುವಟಿಕೆ ಬಿರುಸು

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೌಂಟ್‌ಡೌನ್‌ – ಇದೇ ತಿಂಗಳು ದಿನಾಂಕ ಘೋಷಣೆ…

ನ್ಯೂಸ್‌ ಆ್ಯರೋ : ಕರ್ನಾಟಕ ವಿಧಾನಸಭೆಯ ಚುನಾವಣೆಗೆ ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ ಆಯೋಗವು ಇದೇ ತಿಂಗಳ ಕೊನೆಯ ವಾರದಲ್ಲಿ ದಿನಾಂಕ ಘೋಷಣೆ ಮಾಡುವ ನಿರೀಕ್ಷೆ ಇದೆ. ಮೇ…

Leave a Reply

Your email address will not be published. Required fields are marked *