ರಾಜ್ಯದ 9ನೇ, 10 ತರಗತಿಯ ಮಕ್ಕಳಿಗೆ ಗುಡ್ ನ್ಯೂಸ್ – ಮುಂದಿನ ಸಾಲಿನಲ್ಲಿ ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ‌ನಿರ್ಧಾರ

ರಾಜ್ಯದ 9ನೇ, 10 ತರಗತಿಯ ಮಕ್ಕಳಿಗೆ ಗುಡ್ ನ್ಯೂಸ್ – ಮುಂದಿನ ಸಾಲಿನಲ್ಲಿ ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ‌ನಿರ್ಧಾರ

ನ್ಯೂಸ್ ಆ್ಯರೋ : ರಾಜ್ಯದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷದಿಂದ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸಲು ನಿರ್ಧರಿಸಿದೆ.

ರಾಜ್ಯದಲ್ಲಿ ಈವರೆಗೆ 1 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಮಾತ್ರವೇ ಮೊಟ್ಟೆ ವಿತರಿಸಲಾಗುತ್ತಿದ್ದು, ಈ ಯೋಜನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೂ ವಾರಕ್ಕೆ ಎರಡು ಬಾರಿ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ಈಗಾಗಲೇ ಮೊಟ್ಟೆ ನೀಡಲು ಶಿಕ್ಷಣ ಇಲಾಖೆಗೆ 300 ಕೋಟಿ ರೂ ಅವಶ್ಯಕತೆ ಇದೆ ಎಂದು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೊಟ್ಟೆ ನೀಡುವ ಪ್ರಸ್ತಾವನೆಗೆ ಸಿಎಂ ಬೊಮ್ಮಾಯಿ ಕೂಡ ಮೌಖಿಕವಾಗಿ ಸಹಮತ ವ್ಯಕ್ತಪಡಿಸಿದ್ದು, ಆದೇಶ ಹೊರಬಿದ್ದರೆ 2023-24 ನೇ ಶೈಕ್ಷಣಿಕ ಸಾಲಿನಿಂದಲೇ ವಿದ್ಯಾರ್ಥಿಗಳಿಗೆ ಮೊಟ್ಟೆ ಸಿಗಲಿದೆ. ಈ ಬಗ್ಗೆ ಅಧಿಕೃತ ಸುತ್ತೋಲೆ ಸದ್ಯದಲ್ಲೇ ಹೊರಬೀಳಲಿದೆ.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *