5 ಗ್ಯಾರಂಟಿ ಯೋಜನೆಗಳಿಗೆ  ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ – ಏನೇನಿವೆ ನಿಯಮಗಳು? ಅರ್ಜಿ ಹಾಕೋದು ಹೇಗೆ?

5 ಗ್ಯಾರಂಟಿ ಯೋಜನೆಗಳಿಗೆ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ – ಏನೇನಿವೆ ನಿಯಮಗಳು? ಅರ್ಜಿ ಹಾಕೋದು ಹೇಗೆ?

ನ್ಯೂಸ್ ಆ್ಯರೋ‌ : ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ಘೋಷಿಸಿದ 5 ಗ್ಯಾರಂಟಿ ಯೋಜನೆಗಳ ಜಾರಿಗೆ ಮುಂದಾಗಿದೆ. ಅದಕ್ಕಾಗಿ ಮಾರ್ಗಸೂಚಿಗಳನ್ನೂ ಪ್ರಕಟಿಸಿದೆ. ಈ ಯೋಜನೆಗಳ ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬೇಕು. ಈ ಯೋಜನೆಗಳಿಗೆ ಸಂಬಂಧಿಸಿದ ಮಾರ್ಗ ಸೂಚಿಗಳ ವಿವರ ಇಲ್ಲಿದೆ.

ಗೃಹ ಜ್ಯೋತಿ ಯೋಜನೆ


ಈ ಯೋಜನೆ ಆಗಸ್ಟ್ ನಲ್ಲಿ ಜಾರಿಗೆ ಬರಲಿದೆ. ಅಂದರೆ ಫಲಾನುಭವಿಗಳು ಜುಲೈ ತಿಂಗಳ ವಿದ್ಯುತ್ ಬಿಲ್ ಕಟ್ಟಬೇಕಾಗಿಲ್ಲ. ಆದರೆ ಜುಲೈಯಲ್ಲಿ ಬರುವ ಜೂನ್ ನ ಬಿಲ್ ಪಾವತಿಸಬೇಕು. 12 ತಿಂಗಳ ವಿದ್ಯುತ್ ಬಳಕೆಯ ಸರಾಸರಿಯನ್ನು ತೆಗೆದುಕೊಂಡು ಅದರ ಮೇಲೆ ಶೇ. 10ರಷ್ಟು ವಿದ್ಯುತ್ ಉಚಿತವಾಗಿ ನೀಡಲಾಗುತ್ತದೆ. ಉದಾಹರಣೆಗೆ ಪ್ರತೀ ತಿಂಗಳು ಸರಾಸರಿ 120 ಯೂನಿಟ್ ವಿದ್ಯುತ್ ಬಳಸುವ ಕುಟುಂಬಕ್ಕೆ 132 ಯೂನಿಟ್ ವರೆಗೆ ಉಚಿತವಿದ್ಯುತ್ ದೊರೆಯಲಿದೆ.

ಗೃಹ ಲಕ್ಷ್ಮಿ ಯೋಜನೆ


ಪ್ರತೀ ಮನೆಯ ಯಜಮಾನಿಗೆ ಪ್ರತೀ ತಿಂಗಳು 2,000 ರೂ. ನೀಡುವ ಈ ಯೋಜನೆಗೆ ಆ. 15ರಂದು ಚಾಲನೆ ನೀಡಲಾಗುವುದು. ಫಲಾನುಭವಿಯಾಗಲು ಬ್ಯಾಂಕ್ ಖಾತೆ, ಆಧಾರ್ ಕಾರ್ಡ್ ಒದಗಿಸಬೇಕು. ಯಜಮಾನಿ ಯಾರೆಂದು ಮನೆಯವರೇ ತೀರ್ಮಾನಿಸಿ ಜೂ. 15ರಿಂದ ಅರ್ಜಿ ಸಲ್ಲಿಸಬೇಕು. ಬಿಪಿಎಲ್, ಎಪಿಎಲ್ ಕಾರ್ಡ್ ಬೇಧವಿಲ್ಲದೆ ಈ ಯೋಜನೆ ಎಲ್ಲರಿಗೂ ಅನ್ವಯವಾಗಲಿದೆ. ಆನ್ ಲೈನ್, ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ಪಿಂಚಣಿ ಪಡೆಯುವವರೂ ಯೋಜನೆ ವ್ಯಾಪ್ತಿಗೆ ಬರುತ್ತಾರೆ.

ಅನ್ನಭಾಗ್ಯ ಯೋಜನೆ


ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿದ ಕುಟುಂಬದ ಪ್ರತಿಯೊಬ್ಬರಿಗೂ ಪ್ರತೀ ತಿಂಗಳು 10 ಕೆ.ಜಿ. ಅಕ್ಕಿ ಉಚಿತವಾಗಿ ವಿತರಿಸುವ ಈ ಯೋಜನೆ ಜು. 1ರಿಂದ ಜಾರಿಗೆ ಬರಲಿದೆ. ಕೆಲವು ಸಂದರ್ಭಗಳಲ್ಲಿ 5 ಕೆ.ಜಿ. ಅಕ್ಕಿ ಮತ್ತು 5 ಕೆ.ಜಿ. ರಾಗಿ, ಗೋಧಿ ಮುಂತಾದ ಆಹಾರ ಧ್ಯಾನ ವಿತರಿಸುವ ಉದ್ದೇಶ ಸರಕಾರದ ಮುಂದಿದೆ.

ಶಕ್ತಿ ಯೋಜನೆ


ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡುವ ಯೋಜನೆ ಇದಾಗಿದ್ದು, ಜೂ. 11ರಿಂದ ಅನ್ವಯವಾಗಲಿದೆ. ಹವಾನಿಯಂತ್ರಿತ, ಐಷರಾಮಿ ಬಸ್ ಹೊರತು ಪಡಿಸಿ ಕೆಎಸ್ಸಾರ್ಟಿಸಿ, ಬಿಎಂಟಿಸಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ರಾಜ್ಯಾದ್ಯಂತ ಓಡಾಡಬಹುದು. ಈ ಮಧ್ಯೆ ಪುರುಷರಿಗೆ ಕೆಎಸ್ಸಾರ್ಟಿಸಿ ಬಸ್ ಗಳಲ್ಲಿ ಶೇ. 50ರಷ್ಟು ಸೀಟ್ ಮೀಸಲಾತಿ ಘೋಷಿಸಲಾಗಿದೆ.

ಯುವನಿಧಿ ಯೋಜನೆ


2022-23ರಲ್ಲಿ ವ್ಯಾಸಂಗ ಮಾಡಿ ಉತ್ತೀರ್ಣರಾದ ಪದವೀಧರ ನಿರುದ್ಯೋಗಿಗಳಿಗೆ 24 ತಿಂಗಳವರೆಗೆ ಪ್ರತೀ ತಿಂಗಳು 3 ಸಾವಿರ ರೂ. ಸಿಗಲಿದೆ. ಡಿಪ್ಲೋಮಾ ಪೂರೈಸಿದ ನಿರುದ್ಯೋಗಿಗಳಿಗೆ 1,500 ರೂ. ದೊರೆಯಲಿದೆ. ಇದು ಮಂಗಳಮುಖಿಯರಿಗೂ ಅನ್ವಯವಾಗಲಿದೆ. ಕೆಲಸ ಸಿಕ್ಕಿದ ತಕ್ಷಣ ಬರುತ್ತಿದ್ದ ಹಣ ನಿಲ್ಲಲಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *