ದೀಪಾವಳಿ ವೇಳೆಗೆ ಗೃಹಲಕ್ಷ್ಮಿ ಯೋಜನೆ ಶೇ.100ರಷ್ಟು ಪೂರ್ಣಗೊಳಿಸುವ ಗುರಿ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

ದೀಪಾವಳಿ ವೇಳೆಗೆ ಗೃಹಲಕ್ಷ್ಮಿ ಯೋಜನೆ ಶೇ.100ರಷ್ಟು ಪೂರ್ಣಗೊಳಿಸುವ ಗುರಿ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

ನ್ಯೂಸ್ ಆ್ಯರೋ : ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಶೇಕಡ 95ರಷ್ಟು ಮನೆಯ ಒಡತಿಯರಿಗೆ ತಲುಪಿದ್ದು, ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರಿನ ಬಿಡಬ್ಲ್ಯುಎಸ್ಎಸ್ ಬಿ ಕಚೇರಿಯಲ್ಲಿರುವ ಬೆಂಗಳೂರು ಒನ್ ಕೇಂದ್ರದಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ತರಬೇತಿ ಕುರಿತು ಸಚಿವರು ಮಾಹಿತಿ ಪಡೆದುಕೊಂಡರು. ಗೃಹಲಕ್ಷ್ಮಿ ಯೋಜನೆ ಕುರಿತು ಆಗಿರುವ ತಾಂತ್ರಿಕ ದೋಷಗಳನ್ನು ಶೀಘ್ರವೇ ಬಗೆಹರಿಸಬೇಕೆಂದು ಸಿಡಿಪಿಒಗಳಿಗೆ ಸೂಚನೆ ನೀಡಿದರು. ತಾಂತ್ರಿಕ ‌ದೋಷ, ಸಿಬ್ಬಂದಿಗಳ ತೊಡಕಿನ ಕುರಿತು ಪರಿಶೀಲನೆ ನಡೆಸಿದರು.

ಶೇಕಡ 95 ರಷ್ಟು ಯಶಸ್ವಿ

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆ ಇದುವರೆಗೂ ಶೇಕಡ 95 ರಷ್ಟು ಯಶಸ್ವಿಯಾಗಿದ್ದು, ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಪ್ರತಿದಿನ ಮೂರು ಜಿಲ್ಲೆಗಳ ಸಿಡಿಪಿಒಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದರು. ಗೃಹಲಕ್ಷ್ಮಿ ಯೋಜನೆಗೆ ಇದುವರೆಗೂ 1 ಕೋಟಿ 16 ಲಕ್ಷದ 65 ಸಾವಿರ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ. ಈ ಪೈಕಿ ಆಗಸ್ಟ್ ನಲ್ಲಿ ಗೃಹಲಕ್ಷ್ಮಿ ಯರ ಆಕೌಂಟ್ ಗೆ – 2 ಸಾವಿರದ 119 ಕೋಟಿ ಹಣ ಹಾಕಲಾಗಿದ್ದು, ಈ ಮೂಲಕ ಶೇಕಡ 97ರಷ್ಟು ಡಿಬಿಟಿ ಮುಖಾಂತರ ಹಣ ಹಾಕಲಾಗಿದೆ ಎಂದು ಸಚಿವರು ವಿವರಿಸಿದರು.

ಆಗಸ್ಟ್ ತಿಂಗಳಲ್ಲಿ ಐದು ಲಕ್ಷ ಕುಟುಂಬಗಳಿಗೆ ತಾಂತ್ರಿಕ ದೋಷದಿಂದ ಹಣ ಹೋಗಿಲ್ಲ. ಸೆಪ್ಟೆಂಬರ್ ನಲ್ಲಿ 82% ಕುಟುಂಬಗಳಿಗೆ ಹಣ ಹಾಕಲಾಗಿದ್ದು 12 ಲಕ್ಷ ಕುಟುಂಬಗಳಿಗೆ ತಾಂತ್ರಿಕ ದೋಷದಿಂದ ಅಥವಾ ಕೆವೈಸಿ ಸಮಸ್ಯೆಯಿಂದ ಹಣ ಬ್ಯಾಂಕ್ ಆಕೌಂಟ್ ನಲ್ಲಿ ಉಳಿದಿದೆ. ಇನ್ನು
ಅಕ್ಟೋಬರ್ ನಲ್ಲಿ 2400 ಕೋಟಿ ರೂ ಬಿಡುಗಡೆಯಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ದೀಪಾವಳಿ ವೇಳೆ ಶೇಕಡಾ 100ರಷ್ಟು ಗುರಿ

ಆಗಸ್ಟ್ 15 ರೊಳಗೆ ನೋಂದಣಿ ಮಾಡಿಕೊಂಡವರಿಗೆ ಇದುವರೆಗೆ ದುಡ್ಡು ಬಾರದೇ ಇದ್ರೆ, ಒಟ್ಟಿಗೆ ಮೂರು ತಿಂಗಳ ಹಣ ಹಾಕಲಾಗುತ್ತದೆ. ಇದುವರೆಗೆ ಹಣ ಬಾರದೇ ಇದ್ರೂ ಪೂರ್ಣ ಬಾಕಿ ಹಣ ಹಾಕಲಾಗುವುದು ಎಂದರು. ದೀಪಾವಳಿ ಹಬ್ಬದ ವೇಳೆಗೆ ಎಲ್ಲಾ ಫಲಾನುಭವಿಗಳಿಗೆ ಹಣ ಹೋಗುವಂತೆ ನೋಡಿಕೊಳ್ಳಲಾಗುವುದು ಎಂದರು. ಹೀಗಾಗಿ ಅಧಿಕಾರಿಗಳಿಗೆ ಟ್ರೈನಿಂಗ್ ನೀಡಲಾಗುತ್ತಿದ್ದು, ಇನ್ನು ಹತ್ತು ದಿನದಲ್ಲಿ ಗೃಹಲಕ್ಷ್ಮಿ ಗೊಂದಲ ಕ್ಲಿಯರ್ ಆಗಲಿದೆ ಎಂದರು.

ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ನಿರ್ದೇಶಕರಾದ ಎಂ.ಎಸ್.ಅರ್ಚನಾ, ಇ-ಗವರ್ನೆನ್ಸ್ ಇಲಾಖೆಯ ನಿರ್ದೇಶಕ ದಿಲೀಶ್ ಉಪಸ್ಥಿತರಿದ್ದರು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *