Gruha Jyothi Scheme : ಅರ್ಜಿ ಸಲ್ಲಿಸಲು ಈ ತಿಂಗಳ 27 ತಾರೀಕು ಕೊನೆಯ ದಿನ – ವಿಧಾನಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿಕೆ

Gruha Jyothi Scheme : ಅರ್ಜಿ ಸಲ್ಲಿಸಲು ಈ ತಿಂಗಳ 27 ತಾರೀಕು ಕೊನೆಯ ದಿನ – ವಿಧಾನಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿಕೆ

ನ್ಯೂಸ್ ಆ್ಯರೋ‌ : ಕರ್ನಾಟಕ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಒಂದು ‘ಗೃಹಜ್ಯೋತಿ’ ಯೋಜನೆ (Gruha Jyothi Scheme). ಜನರು ಈಗಾಗಲೇ ಯೋಜನೆಗೆ ಫಲಾನುಭವಿಯಾಗಲು ಅರ್ಜಿಗಳನ್ನು ಸಲ್ಲಿಕೆ ಮಾಡುತ್ತಿದ್ದಾರೆ. ಸರ್ಕಾರ ಯೋಜನೆ ಫಲಾನುಭವಿಯಾಗಲು ನೋಂದಣಿ ಮಾಡಲು ಗಡುವು ನೀಡಿದೆ.

ಹೌದು.. ಇಂಧನ ಸಚಿವ ಕೆ. ಜೆ. ಜಾರ್ಜ್ ವಿಧಾನಸಭೆ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ‘ಗೃಹಜ್ಯೋತಿ’ ಯೋಜನೆ ಕುರಿತಂತೆ ನಡೆದ ಚರ್ಚೆಯ ವೇಳೆ ಸಚಿವರು ಈ ಬಗ್ಗೆ ಮಾತನಾಡಿದ್ದಾರೆ.

“ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ಮೊದಲು ಕಡೆಯ ದಿನಾಂಕವನ್ನು ನಿಗದಿಪಡಿಸಿರಲಿಲ್ಲ. ಈಗ, ಕಡೆಯ ದಿನಾಂಕವನ್ನು ನಿಗದಿಪಡಿಸಲು ನಿರ್ಧರಿಸಿದ್ದೇವೆ. ಅದರಂತೆ, ಜುಲೈ 27ರಂದು ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿರುತ್ತದೆ” ಎಂದು ಹೇಳಿದ್ದಾರೆ.

ಈಗಾಗಲೇ ಗೃಹಜ್ಯೋತಿ ಯೋಜನೆ ಫಲಾನುಭವಿಯಾಗಲು ಜೂ.18ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು , ಸುಮಾರು 1 ಕೋಟಿಗೂ ಅಧಿಕ ಜನರು ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಈ ಯೋಜನೆ ಆಗಸ್ಟ್‌ನಲ್ಲಿ ಜಾರಿಗೆ ಬರಲಿದ್ದು, ಯೋಜನೆ ಫಲಾನುಭವಿಯಾಗಲು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ಜನರು ಯೋಜನೆಯ ಫಲಾನುಭವಿಯಾಗಲು ಆನ್‌ಲೈನ್‌ ಮೂಲಕ ಸೇವಾ ಸಿಂಧು ಪೋರ್ಟಲ್‌ಗೆ ಭೇಟಿ ನೀಡಿ (https://sevasindhugs.karnataka.gov.in/) ವಿವಿರಗಳನ್ನು ನೀಡಿ ಸುಲಭವಾಗಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಇಂಧನ ಇಲಾಖೆ ಹತ್ತಿರದ ನಿಮ್ಮ ಹತ್ತಿರದ ವಿದ್ಯುತ್ ಕಚೇರಿ, ಬೆಂಗಳೂರು ಒನ್, ಗ್ರಾಮ್ ಒನ್ ಮತ್ತು ಕರ್ನಾಟಕ ಒನ್ ಕೇಂದ್ರದಲ್ಲಿಯೂ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ಮೊದಲು ಯೋಜನೆಗೆ ನೋಂದಣಿಯಾಗಲು ಡೆಡ್‌ಲೈನ್ ಇಲ್ಲ ಎಂದು ಹೇಳಿತ್ತು. ಆದರೆ ಈ ತಿಂಗಳ ಬಿಲ್ ಪಾವತಿಗಾಗಿ ಜು.27ರ ಅಂತಿಮ ದಿನಾಂಕ ನಿಗದಿ ಮಾಡಿದೆ.

ಇನ್ನು ಅರ್ಜಿ ಸಂಖ್ಯೆ, ವಿದ್ಯುತ್‌ ಖಾತೆ ಸಂಖ್ಯೆ ಹಾಗೂ ಅರ್ಜಿ ಸಲ್ಲಿಕೆ ದಿನಾಂಕ, ಸಮಯವನ್ನು ತೋರಿಸಿ ಆ ನಂತರ ಅರ್ಜಿ ಸ್ಥಿತಿ ತಿಳಿಸಲಾಗುತ್ತಿದೆ. ಬಹುತೇಕರಿಗೆ ನಿಮ್ಮ ಅರ್ಜಿಯನ್ನು ಸ್ವೀಕರಿಸಿದ್ದೇವೆ ಮತ್ತು ಅದನ್ನು ಸಂಬಂಧ ಪಟ್ಟ ವಿದ್ಯುತ್‌ ಸರಬರಾಜು ಕಂಪನಿಗೆ (ಎಸ್ಕಾಂ) ಮುಂದಿನ ಕ್ರಮಕ್ಕೆ ಕಳುಹಿಸಲಾಗಿದೆ ಎಂಬ ಮಾಹಿತಿ ನೀಡಲಾಗುತ್ತಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *