Gruha Jyothi Scheme : ನಾಳೆಯಿಂದ ಬರುವ ವಿದ್ಯುತ್ ಬಿಲ್ ಬರೀ ಶೂನ್ಯ – ಇನ್ನೂ ಅರ್ಜಿ ಹಾಕದವರು ಏನು ಮಾಡಬೇಕು?

Gruha Jyothi Scheme : ನಾಳೆಯಿಂದ ಬರುವ ವಿದ್ಯುತ್ ಬಿಲ್ ಬರೀ ಶೂನ್ಯ – ಇನ್ನೂ ಅರ್ಜಿ ಹಾಕದವರು ಏನು ಮಾಡಬೇಕು?

ನ್ಯೂಸ್ ಆ್ಯರೋ : ಆಗಸ್ಟ್ 1ರಿಂದ ಅಂದರೆ ನಾಳೆಯಿಂದ ಮನೆಗೆ ಬರುವ ವಿದ್ಯುತ್ ಬಿಲ್ ಶೂನ್ಯವಾಗಿರಲಿದೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆ ನಾಳೆಯಿಂದ ಅಧಿಕೃತವಾಗಿ ಜಾರಿಗೆ ಬರಲಿದೆ.

ಹೌದು.. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ಒದಗಿಸಲು ಸಚಿವ ಸಂಪುಟ ಈಗಾಗಲೇ ತೀರ್ಮಾನಿಸಿದ್ದು, ಈ ಯೋಜನೆಯಡಿ ಬಳಕೆದಾರರ ಕಳೆದ 12 ತಿಂಗಳ ವಿದ್ಯುತ್‌ ಬಳಕೆಯ ಸರಾಸರಿಯ ಮೇಲಿನ ಶೇ. 10 ರಷ್ಟು ಉಚಿತ ವಿದ್ಯುತ್‌ ಒದಗಿಸಲಾಗುವುದು. ಆಗಸ್ಟ್ ತಿಂಗಳಿನಿಂದ ಈ ಯೋಜನೆಯ ಫಲಾನುಭವಿಗಳು ವಿದ್ಯುತ್ ಬಿಲ್ ಕಟ್ಟಬೇಕಿಲ್ಲ ಎಂದು ಸರ್ಕಾರ ಈಗಾಗಲೇ ಘೋಷಿಸಿದೆ.

ಗೃಹಜ್ಯೋತಿ ಯೋಜನೆ ಜಾರಿಯಾಗುವ ಘೋಷಣೆಯಾದಂದಿನಿಂದ ಯಾವಾಗ ಉಚಿತ ಬಿಲ್ ಬರುತ್ತದೆ ಎಂದು ಈಗಾಗಲೇ ಅರ್ಜಿ ಸಲ್ಲಿಸಿರುವವರು ಕಾಯುತ್ತಿದ್ದು, ಇದೀಗ ಅದಕ್ಕೆ ಕಾಲ ಕೂಡಿ ಬಂದಿದೆ. ಜುಲೈ ತಿಂಗಳ 200 ಯುನಿಟ್ ಉಚಿತ ವಿದ್ಯುತ್ ಬಿಲ್ ಆಗಸ್ಟ್ ತಿಂಗಳಲ್ಲಿ ಬರಲಿದ್ದು, 200 ಯುನಿಟ್ ಬಳಸಿದ ಗ್ರಾಹಕರಿಗೆ ಶೂನ್ಯ ಬಿಲ್ ಬರಲಿದೆ.

ಇದು ಜುಲೈ 25 ರವರೆಗೆ ಅರ್ಜಿ ಸಲ್ಲಿಕೆ ಮಾಡಿರುವ ಫಲಾನುಭವಿಗಳಿಗೆ ಮಾತ್ರ ಆಗಸ್ಟ್ ತಿಂಗಳಲ್ಲಿ ಗೃಹಜ್ಯೋತಿಯ ಉಚಿತ ವಿದ್ಯುತ್ ಸಿಗಲಿದ್ದು, 25 ರ ಅನಂತರ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಸೆಪ್ಟೆಂಬರ್ ತಿಂಗಳಲ್ಲಿ ಇದರ ಪ್ರಯೋಜನ ಪಡೆಯಲಿದ್ದಾರೆ.

ಪ್ರಸ್ತುತ ಗೃಹಜ್ಯೋತಿಗೆ 1,18,50,474 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದು ಎರಡೂವರೆ ಕೋಟಿ ಫಲಾನುಭವಿಗಳ ಪೈಕಿ ಶೇ.60 ರಷ್ಟು ಮಂದಿ ಮಾತ್ರ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಲು ಸಾಕಷ್ಟು ಮಂದಿ ಮುಂದೆ ಬರುತ್ತಿದ್ದು, ತಾಂತ್ರಿಕ ಸಮಸ್ಯೆಗಳ ಕಾರಣದಿಂದ ಇನ್ನು ಶೇ.40 ರಷ್ಟು ಮಂದಿ ಅರ್ಜಿ ಸಲ್ಲಿಸುವುದು ಬಾಕಿ ಇದೆ.

ಇನ್ನು ‘ಗೃಹಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್‌ ಪಡೆಯಲು ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇಲ್ಲ. ಆದರೆ, ಫಲಾನುಭವಿಗಳು ಆಗಸ್ಟ್ 1 ರಿಂದ ಶೂನ್ಯ ಬಿಲ್ ಪಡೆಯಲು ನೋಂದಣಿ ಮಾಡುವುದು ಕಡ್ಡಾಯ ಎಂದು ಇಂಧನ ಸಚಿವ ಕೆ ಜೆ ಜಾರ್ಚ್‌ ಇತ್ತೀಚೆಗೆ ಸ್ಪಷ್ಟನೆ ನೀಡಿದ್ದರು.

ನೋಂದಣಿಗೆ ಏನೇನು ಬೇಕು? ಮತ್ತು ನೋಂದಣಿ ಮಾಡುವುದು ಹೇಗೆ?

‘ಗೃಹಜ್ಯೋತಿ’ ಯೋಜನೆಗೆ ನೋಂದಣಿ ಮಾಡುವಾಗ ಫಲಾನುಭವಿಗಳು ಆಧಾರ್ ಕಾರ್ಡ್, ಗ್ರಾಹಕರ ಐಡಿ ಮಾಹಿತಿ (ವಿದ್ಯುಚ್ಛಕ್ತಿ ಬಿಲ್‌ನಲ್ಲಿ ಇರುವಂತೆ) ಮತ್ತು ಮೊಬೈಲ್‌ ನಂಬರ್‌ ಬೇಕು. ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ವೆಬ್​ಸೈಟ್​ ವಿಳಾಸ https://sevasindhugs.karnataka.gov.in. ಸಂಪರ್ಕಿಸಬಹುದು.

ಮೊಬೈಲ್, ಕಂಪ್ಯೂಟರ್, ಲ್ಯಾಪ್​ಟಾಪ್​ನಲ್ಲೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಿ ಎಂದು ಇಂಧನ ಇಲಾಖೆ ಹೇಳಿದೆ.

ಈ ವಿವರಗಳನ್ನು ಭರ್ತಿ ಮಾಡಬೇಕಿದೆ.

  • ಎಸ್ಕಾಂ ಹೆಸರುಖಾತೆ ಸಂಖ್ಯೆ
  • ಖಾತೆದಾರರ ಹೆಸರು ಎಸ್ಕಾಂ ನಲ್ಲಿರುವಂತೆ
  • ಖಾತೆದಾರರ ವಿಳಾಸ ಎಸ್ಕಾಂ ನಲ್ಲಿರುವಂತೆ
  • ಎಸ್ಕಾಂ ಹೆಸರು1
  • ಬಳಕೆದಾರರ ವಿಧ (ಇಲ್ಲಿ ಎರಡು ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು) ಎಂದಿದೆ
  • ಆಧಾರ್ ಸಂಖ್ಯೆ
  • ಅರ್ಜಿದಾರರ ಹೆಸರು
  • ಸಂವಹನಕ್ಕಾಗಿ ದೂರವಾಣಿ ಸಂಖ್ಯೆ

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *