Gruha lakshmi Scheme : ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥ ಪುರುಷರಾಗಿದ್ದರೆ ₹.2000 ಸಿಗಲ್ಲ – ಏನು ಮಾಡಬೇಕು? ಮಾಹಿತಿ ಇಲ್ಲಿದೆ..

Gruha lakshmi Scheme : ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥ ಪುರುಷರಾಗಿದ್ದರೆ ₹.2000 ಸಿಗಲ್ಲ – ಏನು ಮಾಡಬೇಕು? ಮಾಹಿತಿ ಇಲ್ಲಿದೆ..

Gruha lakshmi Scheme : ಗೃಹಲಕ್ಷ್ಮೀ ಯೋಜನೆ ನೋಂದಣಿಗೆ ಇಂದು ರಾಜ್ಯ ಸರಕಾರ ಚಾಲನೆ ನೀಡಿದೆ. ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ. ಪಾವತಿಸುವ ಯೋಜನೆ ಇದಾಗಿದೆ. ಒಂದು ವೇಳೆ ರೇಷನ್ ಕಾರ್ಡ್ ನಲ್ಲಿ ಮನೆಯ ಕುಟುಂಬಸ್ಥರಾಗಿ ಪುರುಷರ ಹೆಸರಿದ್ದರೆ ಈ ಸೌಲಭ್ಯ ದೊರೆಯುವುದಿಲ್ಲ.

ಏನು ಮಾಡಬೇಕು?

ಈ ಸಂದರ್ಭದಲ್ಲಿ ಪುರುಷರ ಹೆಸರು ತೆಗೆದು ಮಹಿಳೆಯ ಹೆಸರನ್ನು ಕುಟುಂಬದ ಮುಖ್ಯಸ್ಥರನ್ನಾಗಿಸಬೇಕು. ಹೆಸರನ್ನು ಸುಲಭವಾಗಿ ಬದಲಾಯಿಸಬಹುದಾಗಿದೆ. ಆನ್ ಲೈನ್ ಮೂಲಕವೂ ಬದಲಾಯಿಸಲು ಅವಕಾಶವಿದೆ.

ರೇಷನ್ ಕಾರ್ಡ್ ನಲ್ಲಿ ಹೆಸರು ಬದಲಾಯಿಸುವ ವಿಧಾನ

ನಿಮ್ಮ ಹತ್ತಿರದ ಪಡಿತರ ಚೀಟಿ ಸೇವಾಕೇಂದ್ರಕ್ಕೆ ಭೇಟಿ ನೀಡಿ. ಬಳಿಕ ಮುಖ್ಯಸ್ಥರ ಹೆಸರು ಬದಲಾಯಿಸುವುದಕ್ಕೆ ಇರುವ ಅರ್ಜಿ ನಮೂನೆ ತುಂಬಿ ಅದರ ಜೊತೆಗೆ ಅಗತ್ಯವಿರುವ ದಾಖಲೆ ಸಲ್ಲಿಸಿ. ಬಳಿಕ ಬಯೋಮೆಟ್ರಿಕ್ ದೃಢೀಕರಣದ ಮೂಲಕ ದಾಖಲೆ ದೃಢೀಕರಿಸಿ.

ಬಳಿಕ ಸೇವಾ ಕೇಂದ್ರದವರು ಅಗತ್ಯವಿರುವ ಮಾರ್ಪಾಡುಗಳನ್ನು ಮಾಡಿ ಆನ್ ಲೈನ್ ನಲ್ಲಿ ಅಪ್ ಲೋಡ್ ಮಾಡುತ್ತಾರೆ. ಅವರು ನೀಡುವ ಸ್ವೀಕೃತಿ ಪ್ರತಿಯನ್ನು ತೆಗೆದಿರಿಸಿ. ಕೆಲವೇ ದಿನಗಳಲ್ಲಿ ಆಹಾರ ಇಲಾಖೆಯಿಂದ ಮೆಸೇಜ್ ಬರಲಿದೆ. ಬಳಿಕ ನಿಮ್ಮ ಪಡಿತರ ಚೀಟಿ ಪ್ರಿಂಟ್ ತೆಗೆದುಕೊಳ್ಳಿ.

ಆನ್ ಲೈನ್ ಮೂಲಕ ಹೆಸರು ಬದಲಾಯಿಸುವ ವಿಧಾನ
ಮೊದಲು https://ahara.kar.nic.in/ಗೆ ಲಾಗಿನ್ ಆಗಿ. ಬಳಿಕ ಮೇನ್ ಪೇಜ್ ನಲ್ಲಿರುವ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಿ. ಆಗ ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆ ಕಾಣಿಸಲಿದೆ. ಅದನ್ನು ಕ್ಲಿಕ್ ಮಾಡಿದರೆ ಹೊಸ ಪುಟ ತೆರೆದುಕೊಳ್ಳುತ್ತದೆ.

ಅದರಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿ. ಹೊಸ ಸೇರ್ಪಡೆ/ತಿದ್ದುಪಡಿ ಫಾರ್ಮ್ ನಲ್ಲಿ ಅಗತ್ಯ ಮಾಹಿತಿ ತುಂಬಿ. ತಿದ್ದುಪಡಿಗೆ ಬೇಕಾದ ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನು ಅಪ್ ಲೋಡ್ ಮಾಡಿ. ನಂತರ ಫಾರ್ಮ್ ಅನ್ನು ಸಬ್ ಮಿಟ್ ಮಾಡಿ. ಆಗ ಅರ್ಜಿ ಸಲ್ಲಿಕೆಯ ರಿಜಿಸ್ಟರ್ ನಂಬರ್ ಸಿಗಲಿದೆ. ಈ ನಂಬರ್ ಮೂಲಕ ಅರ್ಜಿಯ ಸ್ಟೇಟಸ್ ಟ್ರ್ಯಾಕ್ ಮಾಡಬಹುದು.

ಅಗತ್ಯ ದಾಖಲೆಗಳು

  • ಕುಟುಂಬದ ಮುಖ್ಯಸ್ಥರು ಮರಣ ಹೊಂದಿದ್ದರೆ ಅವರ ಮರಣ ಪ್ರಮಾಣ ಪತ್ರ
  • ಅರ್ಜಿದಾರರ ಆಧಾರ್ ಕಾರ್ಡ್‍ಪ್ರತಿ ಅಥವಾ ಪೂರಕ ದಾಖಲೆ
  • ಸ್ವಯಂ ಘೋಷಣೆ
  • ಹೊಸ ಹೆಸರು ಸೇರ್ಪಡೆಗೊಳಿಸುವವರ ಪಾಸ್ ಪೋರ್ಟ್ ಗಾತ್ರದ ಫೋಟೋ, ಅವರ ಆಧಾರ್ ಕಾರ್ಡ್

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *