ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ?‌ – ಯಾವ ದಾಖಲೆಗಳು ಬೇಕು? ಇಲ್ಲಿದೆ ವಿವರ..

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ?‌ – ಯಾವ ದಾಖಲೆಗಳು ಬೇಕು? ಇಲ್ಲಿದೆ ವಿವರ..

ನ್ಯೂಸ್ ಆ್ಯರೋ ‌: ಮಹಿಳೆಯರ ಭಾರೀ ನಿರೀಕ್ಷೆಯ ಗೃಹ ಲಕ್ಷ್ಮಿ ಯೋಜನೆಯ ಮಾರ್ಗಸೂಚಿಗಳು ಬಿಡುಗಡೆಯಾದ ಬೆನ್ನಲ್ಲೇ ಆ ಯೋಜನೆಗೆ ಸಲ್ಲಿಸಬೇಕಾಗಿರುವ ಅರ್ಜಿಯ ನಮೂನೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಕುಟುಂಬ ಕಲ್ಯಾಣ ಇಲಾಖೆಯು ಈ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮನೆಯ ಯಜಮಾನಿ ಯಾರೆಂದು ಘೋಷಿಸುವ, ಆಧಾರ್ ಕಾರ್ಡ್, ಆಧಾರ್ ಕಾರ್ಡ್ ಜೊತೆಗೆ ಲಿಂಕ್ ಇರುವ ಫೋನ್ ನಂಬರ್, ರೇಷನ್ ಕಾರ್ಡ್, ವೋಟರ್ ಐಡಿ ಕಾರ್ಡ್ ನಂಬರ್ ಸೇರಿದಂತೆ ಹಲವಾರು ಮಾಹಿತಿಗಳನ್ನು ನೀಡುವಂತೆ ಸೂಚಿಸಲಾಗಿದೆ. ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ. ಈಗಾಗಲೇ ಜೂ.15ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಅರ್ಜಿ ಹಾಕೋದು ಹೇಗೆ?

ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವುದು ಹೇಗೆ..? ಏನೆಲ್ಲಾ ದಾಖಲೆ ಬೇಕು..? ನಿಯಮಗಳೇನು..? ಎಂಬಿತ್ಯಾದಿ ಮಾಹಿತಿ ಇಲ್ಲಿದೆ.

ಬಿಪಿಎಲ್ ಮತ್ತು ಅಂತ್ಯೋದಯ ಯೋಜನೆಯ ಫಲಾನುಭವಿಗಳು ‘ಗೃಹಲಕ್ಷ್ಮೀ’ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಪೋರ್ಟಲ್‌ಗಳ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವಿಲ್ಲ ಹಾಗೂ ಕೊನೆಯ ದಿನಾಂಕವನ್ನು ನಿಗದಿ ಪಡಿಸಿಲ್ಲ.

ʼಆನ್‌ಲೈನ್‌ ಆಫ್‌ಲೈನ್‌ ಎರಡರಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶವಿದ್ದು, ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕವನ್ನು ನಿಗದಿ ಪಡಿಸಿಲ್ಲ, ಅಲ್ಲದೇ ವರ್ಷವಿಡೀ ಅರ್ಜಿ ಸಲ್ಲಿಸಬಹುದುʼ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಆನ್‌ಲೈನ್‌ ಅರ್ಜಿ ಸಲ್ಲಿಕೆ ವಿಧಾನ

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಸೇವಾಸಿಂಧು ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದ್ದು, ಮೊದಲು ಸೇವಾಸಿಂಧು ಅಧಿಕೃತ ವೆಬ್‌ಸೈಟ್‌ https://sevasindhuservices.karnataka.gov.in/ ಗೆ ಭೇಟಿ ನೀಡಿ. ಮೊದಲ ಬಾರಿ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಬೇಕು. ಇದಕ್ಕಾಗಿ New user ? Register here ಇಲ್ಲಿ ಕ್ಲಿಕ್ ಮಾಡಿ. ನಿಮ್ಮ ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ಹಾಕಿ ಅಕೌಂಟ್‌ ಕ್ರಿಯೇಟ್ ಮಾಡಿಕೊಳ್ಳಿ. ಬಳಿಕ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್‌ವರ್ಡ್‌ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ.

ಅದರಲ್ಲಿ ಗೃಹಲಕ್ಷ್ಮೀ ಯೋಜನೆ ಆಯ್ಕೆ ಮಾಡಿ. ಗೃಹಲಕ್ಷ್ಮೀ ಯೋಜನೆಯ ಟ್ಯಾಬ್‌ನಲ್ಲಿ ಅರ್ಜಿ ಫಾರಂ ಅನ್ನು ಡೌನ್‌ಲೋಡ್‌ ಮಾಡಿಕೊಂಡು ಭರ್ತಿ ಮಾಡಿ. ಅರ್ಜಿಯಲ್ಲಿ ಅರ್ಜಿದಾರರ ಎಲ್ಲಾ ಮಾಹಿತಿಗಳನ್ನು ನೀಡಿ ಅರ್ಜಿ ಫಾರಂ ಹಾಗೂ ದಾಖಲೆಗಳನ್ನು ಸಲ್ಲಿಸಿ.

ಈ ದಾಖಲೆಗಳು ಅಗತ್ಯ

ಈ ಯೋಜನೆಯನ್ನು ಪಡೆಯಲು ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಪುಸ್ತಕ ಅಥವಾ ಖಾಯಂ ವಿಳಾಸ ದಾಖಲಾಗಿರುವ ಗುರುತಿನ ಚೀಟಿ. ಜೊತೆಗೆ ಅರ್ಜಿದಾರರ ಬ್ಯಾಂಕ್ ಖಾತೆ ಸಂಖ್ಯೆ ಹಾಗೂ ಆ ಖಾತೆಯು ಇರುವ ಬ್ರಾಂಚ್ ನ ಐಎಫ್ಎಸ್ ಸಿ ಕೋಡ್ ನಮೂದಿಸಬೇಕು. ಆನಂತರ ಅರ್ಜಿಯ ಜೊತೆಗೆ ಮನೆಯ ಯಜಮಾನಿಗೆ ಸಂಬಂಧಿಸಿದ ದಾಖಲೆಗಳಾಗಿ, ಆಧಾರ್ ಕಾರ್ಡ್, ವೋಟರ್ ಐಡಿ ಜೆರಾಕ್ಸ್ ಪ್ರತಿ, ಬ್ಯಾಂಕ್ ಬಾಸ್ ಪುಸ್ತಕದ ಮೊದಲ ಪುಟದ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು. ಪತಿಗೆ ಸಂಬಂಧಿಸಿದ ದಾಖಲೆಗಳಾಗಿ, ಪತಿಯ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.

ಇನ್ನೂ ಅರ್ಜಿಯ ಕೆಳಭಾಗದಲ್ಲಿ ಸ್ವಯಂ ಘೋಷಣೆಗಾಗಿ ಜಾಗವನ್ನು ಬಿಡಲಾಗಿದ್ದು, ಅಲ್ಲಿ, ನಾನು, ನನ್ನ ಪತಿಯು ಆದಾಯ ತೆರಿಗೆ ಹಾಗೂ ಜಿಎಸ್ ಟಿ ಪಾವತಿದಾರರಾಗಿರುವುದಿಲ್ಲ ಎಂಬುದನ್ನು ಸ್ವಯಂ ದೃಢೀಕರಣ ಮಾಡಬೇಕಿರುತ್ತದೆ. ಇದು ತುಂಬಾ ಮಹತ್ವದ ವಿಚಾರವಾಗಿದ್ದು, ಮಾಸಿಕ 2 ಸಾವಿರ ರೂ.ಗಳಿಗಾಗಿ ಇಲ್ಲಿ ತಪ್ಪು ಮಾಹಿತಿಯನ್ನು ನೀಡಿಲ್ಲ ಎಂಬುದನ್ನು ಈ ದೃಢೀಕರಣ ಖಾತ್ರಿ ಪಡಿಸುತ್ತದೆ. ಹಾಗಾಗಿ, ಸಹಿ ಮಾಡುವ ಮುನ್ನ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡುತ್ತಿಲ್ಲ ಎಂಬುದನ್ನು ನೀವು ಖಾತ್ರಿ ಪಡಿಸಿದಂತೆ.. ಸ್ವಯಂ ಘೋಷಣೆಯ ಕೆಳಗಡೆ ಇರುವ ಎಡಭಾಗದಲ್ಲಿ ಅರ್ಜಿ ಭರ್ತಿ ಮಾಡಿದ ದಿನಾಂಕ, ಸ್ಥಳವನ್ನು ನಮೂದಿಸಬೇಕು. ಬಲಭಾಗದಲ್ಲಿ ಅರ್ಜಿದಾರರ ಸಹಿ ಅಥವಾ ಎಡಗೈ ಹೆಬ್ಬೆಟ್ಟಿನ ಗುರುತನ್ನು ಹಾಕಲು ಸ್ಥಳಾವಕಾಶ ಕಲ್ಪಿಸಲಾಗಿದೆ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *