ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಬೇಕೆ?‌ – ಹೀಗೆ ಅರ್ಜಿ ಸಲ್ಲಿಸಿ..

ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯಬೇಕೆ?‌ – ಹೀಗೆ ಅರ್ಜಿ ಸಲ್ಲಿಸಿ..

ನ್ಯೂಸ್ ಆ್ಯರೋ‌ : 5 ಭರವಸೆಗಳ ವಾಗ್ದಾನದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸರಕಾರ ಅವುಗಳ ಈಡೇರಿಕೆಯತ್ತ ಹೆಜ್ಜೆ ಇಟ್ಟಿದೆ. ಅದರ ಮೊದಲ ಭಾಗವಾಗಿ ಜೂ. 11ರಂದು ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಸದ್ಯ ಫೋಟೋ ಇರುವ ಗುರುತಿನ ಚೀಟಿಯ ಪ್ರತಿ ತೋರಿಸಿ ಈ ಸೌಲಭ್ಯ ಪಡೆಯಬಹದಾಗಿದ್ದು, ಇನ್ನು ಮುಂದೆ ಸ್ಮಾರ್ಟ್ ಕಾರ್ಡ್ ಪಡೆಯಬೇಕಾಗಿದೆ. ಅದನ್ನು ಪಡೆಯುವ ವಿಧಾನ ಇಲ್ಲಿದೆ.

ಸ್ಮಾರ್ಟ್ ಕಾರ್ಡ್‌ಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಪೋರ್ಟಲ್ ನಲ್ಲಿ ಶಕ್ತಿ ಸ್ಮಾರ್ಟ್‌ ಕಾರ್ಡ್‌ಗಾಗಿ ಮಹಿಳೆಯರು ಮೊದಲು ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಇದಕ್ಕಾಗಿ ಪ್ರಮುಖ ದಾಖಲೆಗಳಾಗಿ ಆಧಾರ್ ಕಾರ್ಡ್, ಇತ್ತೀಚಿನ ಭಾವಚಿತ್ರ, ರಾಜ್ಯದಲ್ಲಿ ವಾಸಿಸುತ್ತಿರುವುದಕ್ಕೆ ಪುರಾವೆ ನೀಡಬೇಕು.

ನೋಂದಾಯಿಸುವ ವಿಧಾನ

ಮೊದಲು ಸೇವಾ ಸಿಂಧು ಅಧಿಕೃತ ವೆಬ್‌ಸೈಟ್‌ https://sevasindhuservices.karnataka.gov.in/ಗೆ ಭೇಟಿ ನೀಡಿ. ಬಳಿಕ ಮೊದಲ ಬಾರಿ ಅರ್ಜಿ ಸಲ್ಲಿಸುತ್ತಿದ್ದರೆ ನಿಮ್ಮ ಅಕೌಂಟ್ ಕ್ರಿಯೇಟ್ ಮಾಡಬೇಕು. ಇದಕ್ಕಾಗಿ New user? Register here ಇಲ್ಲಿ ಕ್ಲಿಕ್ ಮಾಡಿ.

ನಿಮ್ಮ ಆಧಾರ್ ಕಾರ್ಡ್ ಮತ್ತು ಮೊಬೈಲ್ ಸಂಖ್ಯೆ ನಮೂದಿಸಿ ಅಕೌಂಟ್‌ ಕ್ರಿಯೇಟ್ ಮಾಡಿಕೊಳ್ಳಿ. ನಂತರ ನಿಮ್ಮ ಮೊಬೈಲ್ ಸಂಖ್ಯೆ ಮತ್ತು ಪಾಸ್ ವಾರ್ಡ್ ಅಥವಾ ಓಟಿಪಿ ಮೂಲಕ ಲಾಗಿನ್ ಆಗಿ. ಆಪ್ಷನ್‌ ನಲ್ಲಿ ಶಕ್ತಿ ಸ್ಮಾರ್ಟ್ ಕಾರ್ಡ್ ಆಯ್ಕೆ ಮಾಡಿ ಅರ್ಜಿ ಸಲ್ಲಿಸಿ. ಆಗ ಕೇಳುವ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ, ಆಧಾರ ಸಂಖ್ಯೆ, ಗುರುತಿನ ಚೀಟಿ ಹಾಗೂ ಇತರ ಮಾಹಿತಿಯನ್ನು ತುಂಬಿ.

ಇದಾದ ಬಳಿಕ ಸೇವಾ ಸಿಂಧು ಶಕ್ತಿ ಸ್ಮಾರ್ಟ್ ಕಾರ್ಡ್ ಪಿಡಿಎಫ್ ಫೈಲ್‌ ಓಪನ್ ಆಗುತ್ತದೆ. ಡೌನ್‌ಲೋಡ್ ಪಿಡಿಎಫ್‌ ಮೇಲೆ ಕ್ಲಿಕ್ ಮಾಡಿ ನಿಮ್ಮ ಸೇವಾ ಸಿಂಧು ಶಕ್ತಿ ಸ್ಮಾರ್ಟ್ ಕಾರ್ಡ್‌ ಡೌನ್ ಲೋಡ್ ಮಾಡಿಕೊಳ್ಳಬಹುದು.

ಶಕ್ತಿ ಯೋಜನೆಯಡಿ ನಾಲ್ಕು ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆ೦ಗಳೂರು ಮಹಾನಗರ ಸಾರಿಗೆ ಸ೦ಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸ೦ಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಸಾರಿಗೆಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *