ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಹೇಳಿಕೆ

ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಳ – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಹೇಳಿಕೆ

ನ್ಯೂಸ್ ಆ್ಯರೋ : ರಾಜ್ಯ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ‌ ಹೆಚ್ಚಿಸುವ ಭರವಸೆ ನೀಡಿತ್ತು. ಇದೀಗ ಕೊಟ್ಟ ಮಾತಿನಂತೆ ‌ನಡೆಯುವ ಮುನ್ಸೂಚನೆ ನೀಡಿದೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತರ ಗೌರವಧನ ಹೆಚ್ಚಳ ಕುರಿತು ಚರ್ಚೆ ನಡೆಸಿ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಕುರಿತು ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ. ಕಾಂಗ್ರೆಸ್ ಪಕ್ಷ ಕೊಟ್ಟ ಭರವಸೆಗಳನ್ನು ಈಡೇರಿಸಲಿದೆ. ಅಲ್ಲಿಯವರೆಗೆ ಸ್ವಲ್ಪ ತಾಳ್ಮೆ ಬೇಕು ಎಂದು ಹೇಳಿದ್ದಾರೆ.

ಗೃಹ ಲಕ್ಷ್ಮೀ ಯೋಜನೆಯ ಅರ್ಜಿ ಕರೆಯಲು ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದೇವೆ. ಜು. 1 ರಿಂದ 15 ರವರೆಗೆ ಅರ್ಜಿ ಪಡೆಯುವ ಪ್ರಕ್ರಿಯೆ ನಡೆಯಲಿದೆ. ಫಲಾನುಭವಿಗಳ ಬ್ಯಾಂಕ್ ಖಾತೆ, ಆಧಾರ್ ಸಂಖ್ಯೆ ಜೋಡಣೆ ಮಾಡುವುದು, ಕುಟುಂಬದ ಮುಖ್ಯಸ್ಥೆಯನ್ನು ಖಚಿತಪಡಿಸಿಕೊಳ್ಳುವ ಕೆಲಸ ನಡೆಯುತ್ತಿದೆ. ಇದಕ್ಕಾಗಿ ಸಾಫ್ಟ್ ವೇರ್ ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *