ಮೇರಿ ಲೈಫ್ ಆ್ಯಪ್ ಬಿಡುಗಡೆಗೊಳಿಸಿದ ಕೇಂದ್ರ ಸರ್ಕಾರ‌ – ಹವಾಮಾನ ಬದಲಾವಣೆಯ ಕಡಿವಾಣಕ್ಕೆ ಕೇಂದ್ರದಿಂದ ಹೊಸ ಹೆಜ್ಜೆ

ಮೇರಿ ಲೈಫ್ ಆ್ಯಪ್ ಬಿಡುಗಡೆಗೊಳಿಸಿದ ಕೇಂದ್ರ ಸರ್ಕಾರ‌ – ಹವಾಮಾನ ಬದಲಾವಣೆಯ ಕಡಿವಾಣಕ್ಕೆ ಕೇಂದ್ರದಿಂದ ಹೊಸ ಹೆಜ್ಜೆ

ನ್ಯೂಸ್ ಆ್ಯರೋ‌ : ಹವಾಮಾನ ಬದಲಾವಣೆ ಜನ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಅತಿಯಾದ ಸೆಕೆ, ಚಳಿ, ಪ್ರವಾಹ ಪರಿಸ್ಥಿತಿ ಈಗ ಹೆಚ್ಚಾಗಲು ಮಾನವನ ಅತಿಯಾದ ಚಟುವಟಿಕೆಗಳೇ ಕಾರಣ ಎನ್ನುತ್ತಾರೆ ತಜ್ಞರು. ಹೀಗಾಗಿ ಇದರ ಬಗ್ಗೆ ಯುವ ಜನತೆಯಲ್ಲಿ ಜಾಗೃತಿ ಮೂಡಿಸಲು ಕೇಂದ್ರ ಮುಂದಾಗಿದೆ. ಅದರ ಕುರಿತಾದ ವಿವರ ಇಲ್ಲಿದೆ.

ಯುವಜನತೆಯ ಸಶಕ್ತಿಕರಣ ಹಾಗೂ ಹವಾಮಾನ ಬದಲಾವಣೆಗೆ ಕಡಿವಾಣ ಹಾಕುವ ಕಾರ್ಯದಲ್ಲಿ ಅವರ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ‘ಮೇರಿ ಲೈಫ್’ ಆ್ಯಪ್ ಅನಾವರಣಗೊಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ‘ಮಿಷನ್ ಲೈಪ್ ಆ್ಯಪ್’ನಿಂದ ಪ್ರೇರಣೆಗೊಂಡು ಇದನ್ನು ಅಭಿವೃದ್ಧಿಪಡಿಸಲಾಗಿದೆ. ‘ಮೇರಿ ಲೈಫ್’ನಲ್ಲಿನ ‘ಲೈಫ್’ ಎಂಬ ಪದ ಪರಿಸರಕ್ಕಾಗಿ ಜೀವನ ಶೈಲಿ ಎಂಬ ಅರ್ಥ ಕೊಡುತ್ತದೆ. ಪರಿಸರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ರಾಷ್ಟ್ರವ್ಯಾಪಿ ಆಂದೋಲನ ಕೈಗೊಳ್ಳುವುದಕ್ಕೆ ಈ ಆ್ಯಪ್ ನೆರವಾಗಲಿದೆ. ನಾಗರಿಕರ ಶಕ್ತಿ ಪ್ರದರ್ಶನಕ್ಕೂ ವೇದಿಕೆ ಕಲ್ಪಿಸಲಿದೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ.

ಪರಿಸರ ರಕ್ಷಣೆ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಸುಸ್ಥಿರ ಚಟುವಟಿಕೆಗಳ ಕುರಿತು ಇದರ ಮೂಲಕ ಜಾಗೃತಿ ಮೂಡಿಸಬಹುದಾಗಿದೆ. ಆ್ಯಪ್ ಕುರಿತು ಜನರಲ್ಲಿ ಅರಿವು ಮೂಡಿಸಲು ಒಂದು ತಿಂಗಳ ತಿಂಗಳ ಅಭಿಯಾನ ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *