ಗೃಹ ಲಕ್ಷ್ಮೀ ಯೋಜನೆ: ಮೊಬೈಲ್ ಮೂಲಕವೂ ನೋಂದಾಯಿಸಿ – ವಿವರಗಳು ಇಲ್ಲಿವೆ…

ಗೃಹ ಲಕ್ಷ್ಮೀ ಯೋಜನೆ: ಮೊಬೈಲ್ ಮೂಲಕವೂ ನೋಂದಾಯಿಸಿ – ವಿವರಗಳು ಇಲ್ಲಿವೆ…

ನ್ಯೂಸ್ ಆ್ಯರೋ‌ : 5 ಭರವಸೆಗಳ ವಾಗ್ದಾನದೊಂದಿಗೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಈ ಪೈಕಿ ಗೃಹ ಲಕ್ಷ್ಮೀ ಯೋಜನೆಯೂ ಒಂದು. ಅರ್ಹ ಮಹಿಳೆಯರಿಗೆ ಮಾಸಿಕ 2 ಸಾವಿರ ರೂ. ಒದಗಿಸುವ ಯೋಜನೆ ಇದಾಗಿದೆ.

ಗೃಹಿಣಿಯರು, ಭೂ ರಹಿತ ಮಹಿಳೆಯರು ಮತ್ತು ಕೃಷಿ ಕಾರ್ಮಿಕರಿಗೆ ನೆರವು ನೀಡುವುದು ಈ ಯೋಜನೆಯ ಉದ್ದೇಶ. ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿದವರಿಗೆ ಈ ಯೋಜನೆಯ ಲಾಭ ಸಿಗಲಿದೆ.

ಮೊಬೈಲ್ ನಲ್ಲಿ ನೋಂದಾಯಿಸುವ ವಿಧಾನ

ಗೃಹ ಲಕ್ಷ್ಮೀ ಯೋಜನೆಗೆ ಮೊಬೈಲ್ ಮೂಲಕವೇ ಹೆಸರು ನೋಂದಾಯಿಸಬಹುದು ಎಂದು ಸರಕಾರ ತಿಳಿಸಿದೆ. ಅದಕ್ಕಾಗಿ ಮಾಡಬೇಕಾದದ್ದು ಇಷ್ಟೇ..

ಸೇವಾ ಸಿಂಧು ಪೋರ್ಟಲ್ ನ ಅಧಿಕೃತ ವೆಬ್ ಸೈಟ್ https://sevasindhuservices.karnataka.gov.in/ಗೆ ಭೇಟಿ ನೀಡಿ. ನಿಮ್ಮ ಇಮೇಲ್ ಐಡಿಗೆ ಬಂದ ಒಟಿಪಿ ಬಳಸಿ ಲಾಗಿನ್ ಆಗಿ. ಮೊದಲ ಬಾರಿಯ ಬಳಕೆದಾರರಾಗಿದ್ದರೆ ಹೊಸ ಬಳಕೆದಾರ ಆಯ್ಕೆ ಕ್ಲಿಕ್ ಮಾಡಿ. ನಂತರ ಆಧಾರ್ ಸಂಖ್ಯೆ ದಾಖಲಿಸಿ ನೋಂದಾಯಿಸಿ.

ಡೌನ್ ಲೋಡ್ ಟ್ಯಾಬ್ ಮೇಲೆ ಕ್ಲಿಕ್ ಮಾಡುವ ಮೂಲಕ ನೋಂದಣಿ ಫಾರ್ಮ್ ಡೌನ್ ಲೋಡ್ ಮಾಡಿ. ಅರ್ಜಿದಾರರಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಉಲ್ಲೇಖಿಸಿದ ಅಗತ್ಯ ದಾಖಲೆಗಳನ್ನು ಲಗತ್ತಿಸಿ. ಬಳಿಕ ಮಕ್ಕಳ ಅಭಿವೃದ್ಧಿ ಕಚೇರಿ ಅಥವಾ ಕರ್ನಾಟಕ ಒಂದು ಕೇಂದ್ರದಲ್ಲಿ ಸಲ್ಲಿಸಿ.

ಸಲ್ಲಿಸಬೇಕಾದ ದಾಖಲೆಗಳು

ಗೃಹ ಲಕ್ಷ್ಮೀ ಯೋಜನೆಗಾಗಿ ಫಲಾನುಭವಿಗಳು ಕೆಲವೊಂದು ದಾಖಲೆ ಸಲ್ಲಿಸಬೇಕಾಗುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ, ವಿಳಾಸ ಪುರಾವೆ, ನಿವಾಸ ಪ್ರಮಾಣ ಪತ್ರ, ಬ್ಯಾಂಕ್ ಖಾತೆಯ ವಿವರ, ಆದಾಯ ಪ್ರಮಾಣ ಪತ್ರಗಳ ಪ್ರತಿಯನ್ನು ಸಲ್ಲಿಸಬೇಕು.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *