
ಪಡಿತರ ಚೀಟಿ ತಿದ್ದುಪಡಿಯ ಅವಧಿ ಬಗ್ಗೆ ಅಧಿಕೃತ ಮಾಹಿತಿ – ತಿದ್ದುಪಡಿ ಆಗದವರು ಈ ಸುದ್ದಿ ಗಮನಿಸಿ
- ಸರ್ಕಾರಿ ಸೇವೆಗಳು
- August 21, 2023
- No Comment
- 3494
ನ್ಯೂಸ್ ಆ್ಯರೋ : ಪಡಿತರ ಚೀಟಿ ಬದಲಾವಣೆ, ತಿದ್ದುಪಡಿಯ ಅವಧಿಯನ್ನು ಇನ್ನಷ್ಟು ದಿನ ವಿಸ್ತರಿಸಿರುವುದಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ಆಗ್ರಹದ ಮೇರೆಗೆ ಕ್ರಮ
ಈ ಹಿಂದೆ ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ವಿಳಾಸ ಬದಲಾವಣೆಗೆ ಆಗಸ್ಟ್ 31ರ ವರೆಗೆ ಗಡುವು ವಿಧಿಸಲಾಗಿತ್ತು. ಇದೀಗ ಗ್ರಾಹಕರ ಆಗ್ರಹದ ಮೇರೆಗೆ ಈ ಅವಧಿಯನ್ನು ಇನ್ನಷ್ಟು ದಿನ ವಿಸ್ತರಿಸಿದ್ದೇವೆ.
ಆನ್ ಲೈನ್ ಮೂಲಕ ಅಥವಾ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ, ವಿಳಾಸ ಬದಲಾವಣೆ ಮಾಡಿಕೊಳ್ಳಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಾರ್ವಜನಿಕ ವಿತರಣೆ ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ತಿಳಿಸಿದರು.
ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಎಪ್ರಿಲ್-ಮೇ ತಿಂಗಳಿನಲ್ಲಿ ಹೊಸದಾಗಿ ಎಪಿಎಲ್, ಬಿಪಿಎಲ್ ಕಾರ್ಡ್ ಮಾಡಿಸುವುದು, ಹೆಸರು ತಿದ್ದುಪಡಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ಈಗ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಬಯೋಮೆಟ್ರಿಕ್ಸ್, ಯಜಮಾನನ ಹೆಸರಿನಲ್ಲಿರುವ ಪಡಿತರ ಚೀಟಿ ಯಜಮಾನಿಯ ಹೆಸರಿಗೆ ವರ್ಗಾಯಿಸುವುದು ಸೇರಿದಂತೆ ಕೆಲವು ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅದಾಗ್ಯೂ ಹೊಸ ಕಾರ್ಡ್ ಮಾಡಿಸಲು ಇನ್ನೂ ಅವಕಾಶ ನೀಡಿಲ್ಲ.