ದೇಶದ ನಾಗರೀಕರಿಗೆ ಮೋದಿ ಭರ್ಜರಿ ಗಿಫ್ಟ್ – ಬಡವರಿಗೆ ಐದು ವರ್ಷ ಉಚಿತ ಅಕ್ಕಿ, ಸ್ತ್ರೀಯರಿಗೆ ಕೃಷಿ ಡ್ರೋನ್ ಕೊಡುಗೆ

ದೇಶದ ನಾಗರೀಕರಿಗೆ ಮೋದಿ ಭರ್ಜರಿ ಗಿಫ್ಟ್ – ಬಡವರಿಗೆ ಐದು ವರ್ಷ ಉಚಿತ ಅಕ್ಕಿ, ಸ್ತ್ರೀಯರಿಗೆ ಕೃಷಿ ಡ್ರೋನ್ ಕೊಡುಗೆ

ನ್ಯೂಸ್ ಆ್ಯರೋ ‌: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ಸಿಹಿಸುದ್ದಿ ನೀಡಿದ್ದು, ಬಡವರಿಗೆ ಆಹಾರದ ಖಾದತಿ ಮತ್ತು ಮಹಿಳೆಯರಿಗೆ ಆದಾಯದ ಹೊಸ ಮೂಲ ಸೃಷ್ಟಿಸುವ ಎರಡು ಬಂಪರ್‌ ಕೊಡುಗೆಗಳನ್ನು ಘೋಷಿಸಿದ್ದಾರೆ.

ದೇಶದ 81.35 ಕೋಟಿ ಬಡವರಿಗೆ ತಿಂಗಳಿಗೆ ೫ ಕೆಜಿ ಉಚಿತ ಪಡಿತರ ಆಹಾರ ಧಾನ್ಯಗಳನ್ನು ಒದಗಿಸುವ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆಯನ್ನು ಇನ್ನೂ 5 ವರ್ಷಗಳವರೆಗೆ ವಿಸ್ತರಿಸಲಾಗಿದ್ದು, ಜೊತೆಗೆ 15, 000 ಸ್ತ್ರೀಶಕ್ತಿ ಸಂಘಗಳಿಗೆ ಕೃಷಿ ಡ್ರೋನ್‌ ಒದಗಿಸುವ ಯೋಜನೆಗೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಗರೀಬ್ ಕಲ್ಯಾಣ್ ಅನ್ನ ಯೋಜನೆಯ ಬಗ್ಗೆ ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ ಐಎಂಎಫ್ ಶ್ಲಾಘಿಸಿತ್ತು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ ಆಹಾರ ಒದಗಿಸುವ ಮೂಲಕ ಕಡುಬಡತನದಿಂದ ದೇಶವಾಸಿಗಳನ್ನು ಪಾರು ಮಾಡಲಾಗಿದೆ ಎಂದು ವರದಿಯಲ್ಲಿ ತಿಳಿಸಿತ್ತು.

ವರದಿಯ ಪ್ರಕಾರ ಭಾರತದಲ್ಲಿ ದಿನಕ್ಕೆ 142 ರೂಪಾಯಿಗಿಂತ ಕಡಿಮೆ ಸರಾಸರಿ ಆದಾಯ ಇರುವ ಕಡುಬಡವರ ಸಂಖ್ಯೆ ಕೊರೋನಾ ಬಿಕ್ಕಟ್ಟಿನ 2020ರ ವರ್ಷದಲ್ಲಿಯೂ ಕೊರೊನಾ ಪೂರ್ವ 2019ರ ಮಟ್ಟದಲ್ಲಿ ಉಳಿದುಕೊಂಡಿದೆ. ಗರೀಬ್ ಕಲ್ಯಾಣ ಯೋಜನೆ ಬಡತನವನ್ನು ದೂರ ಮಾಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿತ್ತು.

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *