ರೇಷನ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ – ಮತ್ತೊಮ್ಮೆ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿಗೆ ಅವಕಾಶ : ಷರತ್ತು ಅನ್ವಯ

ರೇಷನ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ – ಮತ್ತೊಮ್ಮೆ ರೇಷನ್ ಕಾರ್ಡ್ ಮಾರ್ಪಾಡು, ತಿದ್ದುಪಡಿಗೆ ಅವಕಾಶ : ಷರತ್ತು ಅನ್ವಯ

ನ್ಯೂಸ್ ಆ್ಯರೋ : ಬಿಪಿಎಲ್, ಎಪಿಎಲ್ ಹಾಗೂ ಎಎವೈ ರೇಷನ್‌ ಕಾರ್ಡ್ ಹೊಂದಿರುವವರಿಗೆ ಆಹಾರ ಇಲಾಖೆ ಗುಡ್ ನ್ಯೂಸ್ ನೀಡಿದೆ.

ರಾಜ್ಯಾದ್ಯಂತ ಪಡಿತರ ಚೀಟಿ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಿ ಆದೇಶ ಹೊರಡಿಸಿದ್ದು, ಅಕ್ಟೋಬರ್‌ 5ರಿಂದ 9 ದಿನಗಳ ಕಾಲ ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ .

ಅಕ್ಟೋಬರ್ 13 ರವರೆಗೆ ಪಡಿತರ ಚೀಟಿಗಳನ್ನು ಅಪ್ಡೇಟ್‌ ಮಾಡಿಕೊಳ್ಳಬಹುದಾಗಿದ್ದು, ಅದರಂತೆ ಕರ್ನಾಟಕ ಒನ್‌, ಬೆಂಗಳೂರು ಒನ್‌, ಗ್ರಾಮ ಒನ್‌ ಕೇಂದ್ರಗಳಿಗೆ ಭೇಟಿ ನೀಡಿ, ಕಾರ್ಡ್ಗಳಿಗೆ ಹೊಸ
ಹೆಸರು ಸೇರ್ಪಡೆ, ಹೆಸರುಗಳ ಅಕ್ಷರಗಳು, ವಿಳಾಸ ಪರಿಷ್ಕರಣೆ ಸೇರಿದಂತೆ ಯಾವುದೇ ರೀತಿಯ ತಿದ್ದುಪಡಿಗಳಿದ್ದರೂ ಮಾಡಿಸಿಕೊಳ್ಳಬಹುದಾಗಿದೆ. ಹಾಲಿ ಇರುವ ಪಡಿತರ ಚೀಟಿಯಲ್ಲಿನ ಹೆಸರು ರದ್ದುಪಡಿಸುವುದು, ಕುಟುಂಬದ ಹೊಸ ಸದಸ್ಯರ ಹೆಸರು ಸೇರಿಸುವುದಕ್ಕೆ ಅವಕಾಶ ಒದಗಿಸಲಾಗಿದೆ.

ಅ 13ರವರೆಗಗೂ ತಿದ್ದುಪಡಿಗೆ ಅವಕಾಶ :

ಪಡಿತರ ಚೀಟಿಯಲ್ಲಿ ತಿದ್ದುಪಡಿ ಮಾಡಿಸಲು ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಲೇ ಅವಕಾಶ ಕಲ್ಪಿಸಲಾಗಿದೆ. ರೇಶನ್ ಕಾರ್ಡ್ ತಿದ್ದುಪಡಿ ಮಾಡುವ ಪ್ರಕ್ರಿಯೆಯನ್ನು ವಿಭಾಗವಾರುಗಳಂತೆ ವಿಂಗಡಿಸಲಾಗಿದ್ದು, ಪ್ರತಿ ವಿಭಾಗಕ್ಕೆ ತಲಾ ಮೂರು ದಿನಗಳ ಕಾಲ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿ ಕೊಡಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಅವಕಾಶ :

ಮೊದಲ ವಲಯದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳ ಎಪಿಎಲ್, ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅಗಸ್ಟ್ 5ರಿಂದ 7ರವರೆಗೂ ಇಲ್ಲಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ವಿಶೇಷ ಎಂದರೆ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇಲ್ಲಿ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ.

ರೇಶನ್ ಕಾರ್ಡ್ ಎಲ್ಲಿ ತಿದ್ದುಪಡಿ ಮಾಡಿಸಬಹುದು ?

ಕಳೆದ ತಿಂಗಳು ಕೂಡಾ ಆಹಾರ ಇಲಾಖೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿತ್ತು. ಆದರೆ ಸರ್ವರ್ ಡೌನ್ ಆಗಿ‌ ಸಾರ್ವಜನಿಕರಿಗೆ ಈ ಅವಕಾಶವನ್ನು ಬಳಸಿಕೊಳ್ಳುವುದು ಸಾಧ್ಯವಾಗಿರಲಿಲ್ಲ. ತಿದ್ದುಪಡಿ ಮಾಡಿಸಲು ಬಂದ ಸಾರ್ವಜನಿಕರು ಸಮಸ್ಯೆ ಎದುರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಮತ್ತೆ ಸರ್ಕಾರ ಈ ಅವಕಾಶ ನೀಡಿದೆ. ಸೇವಾ ಕೇಂದ್ರದಲ್ಲಿ‌ ಮಾತ್ರ ಈ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಇನ್ನು, ರೇಷನ್ ಕಾರ್ಡ್ ತಿದ್ದುಪಡಿಗೆ ಬಯೋಮೆಟ್ರಿಕ್ ಸೌಲಭ್ಯ ಇರುವ ಕಂಪ್ಯೂಟರ್ ಅವಶ್ಯವಾಗಿದ್ದು, ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಸೇವಾ ಕೇಂದ್ರದಲ್ಲಿ‌ ತಿದ್ದುಪಡಿ ಮಾಡಿಸಬಹುದಾಗಿದೆ.

ಏನೇನು ತಿದ್ದುಪಡಿ ಮಾಡಬಹುದು?

  1. ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ
  2. ಕಾರ್ಡ್ ಸದಸ್ಯರ ಹೆಸರು ಡಿಲಿಟ್ & ಸೇರ್ಪಡೆ
  3. ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ
  4. ಮಹಿಳೆಯನ್ನು ಮನೆಯ ಯಜಮಾನಿ ಎಂದು ಎಂದು ಇಲ್ಲಿ ಹೆಸರು ಬದಲಾವಣೆ ಮಾಡಿಕೊಳ್ಳಬಹುದು.

ರಾಜ್ಯದ ಎಲ್ಲಾ ಭಾಗದಲ್ಲಿ ಅವಕಾಶ :

ವಿಭಾಗವಾರುವಿನಂತೆ ತಲಾ ಮೂರು ದಿನಗಳ ಕಾಲ, ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

  1. ಮೊದಲ ವಲಯದಲ್ಲಿ ಬೆಂಗಳೂರು ನಗರ, ಗ್ರಾಮಾಂತರ – ಅ. 5ರಿಂದ 7ರವರೆಗೆ
  2. ಕಲಬುರಗಿ ವಲಯ – ಅ.8ರಿಂದ 10ವರೆಗೆ
    3.ಬೆಳಗಾವಿ ವಲಯ – ಅ.11ರಿಂದ 13ರವರೆಗೆ ಅವಕಾಶ

Related post

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ : ಎಲ್ಲಾ ಕಛೇರಿಗಳಿಗೂ ಬೀಳುತ್ತೆ ಬೀಗ..!

ಲೋಕಸಭಾ ಚುನಾವಣೆ ದಿನ ಸಾರ್ವತ್ರಿಕ ರಜೆ – ರಾಜ್ಯ ಸರ್ಕಾರದಿಂದ ಆದೇಶ…

ನ್ಯೂಸ್ ಆ್ಯರೋ : ಇನ್ನೆರಡೇ ದಿನಗಳು ಅಂದರೆ ಏಪ್ರಿಲ್ 26ರಂದು ಲೋಕಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯಲಿದ್ದು, ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡುವ…
ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 24-04-2024 ಬುಧವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮಲ್ಲಿ ಇಂದು ಚುರುಕುತನವನ್ನು ನೋಡಬಹುದು. ನಿಮ್ಮ ಆರೋಗ್ಯವು ಇಂದು ನಿಮ್ಮನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ಮನೆ ಅಥವಾ ಸಾಮಾಜಿಕ…
ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 23-04-2024 ಮಂಗಳವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ಕೋಪ ಕಡ್ಡಿಯನ್ನು ಗುಡ್ಡ ಮಾಡಬಹುದು-ಇದು ನಿಮ್ಮ ಕುಟುಂಬದ ಸದಸ್ಯರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಕೋಪವನ್ನು ನಿಯಂತ್ರಣದಲ್ಲಿಡುವುದನ್ನು ಕಲಿತ ಆ ಮಹಾನ್ ಆತ್ಮಗಳೇ ಅದೃಷ್ಟಶಾಲಿಗಳು. ನಿಮ್ಮ ಕೋಪ ನಿಮ್ಮನ್ನು ಸುಡುವ…

Leave a Reply

Your email address will not be published. Required fields are marked *