ಆಸ್ತಿ ನೋಂದಣಿಯ 34 ದಿನಗಳ ಕಾಯುವಿಕೆಗೆ ಕಡಿವಾಣ – ಏಳು ದಿನಗಳಲ್ಲೇ ಕೈ ಸೇರಲಿದೆ ಆಸ್ತಿ ಖಾತೆ : ಕಂದಾಯ ಸಚಿವ ಆರ್ ಅಶೋಕ್ ಹೇಳಿಕೆ

ನ್ಯೂಸ್ ಆ್ಯರೋ : ಆಸ್ತಿ ನೋಂದಣಿಯಾದ ಖಾತೆ ನೀಡಲು ಸದ್ಯಕ್ಕೆ ಕನಿಷ್ಠ 34 ದಿನಗಳ ಕಾಲಾವಕಾಶ ಇದೆ. ಅದನ್ನು 7 ದಿನಕ್ಕೆ ಇಳಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್‌ ಅಶೋಕ್‌ ತಿಳಿಸಿದರು.

ಆಸ್ತಿ ನೋಂದಣಿ ಮಾಡಿಸಿಕೊಂಡವರು ಖಾತೆ ಪಡೆಯಲು ತಿಂಗಳುಗಟ್ಟಲೆ ಕಾಯುವುದು ಹಾಗೂ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಕಂದಾಯ ಇಲಾಖೆ ಜನಸ್ನೇಹಿ ತೀರ್ಮಾನವನ್ನು ಪ್ರಕಟ ಮಾಡಿದೆ. ಇದರಿಂದ ಆಸ್ತಿ ಮೇಲೆ ಸಾಲ ಸೌಲಭ್ಯ ಪಡೆಯಲು ಕೂಡ ಅನುಕೂಲವಾಗಲಿದೆ ಎಂದು ತಿಳಿಸಿದರು.

ಭೂಪರಿವರ್ತನೆ ವಿಧೇಯಕ:

”ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಪರಿವರ್ತಿಸುವ ಸಂಬಂಧದ ಅನುಮೋದನಾ ಪ್ರಕ್ರಿಯೆಯ ಕಾಲಮಿತಿಯನ್ನು 7 ದಿನಗಳಿಗೆ ನಿಗದಿಪಡಿಸುವ ಕಾನೂನು ತಿದ್ದುಪಡಿ ವಿಧೇಯಕವನ್ನು ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡನೆ ಮಾಡಲಾಗುತ್ತಿದೆ.

ಜತೆಗೆ ಮಲೆನಾಡು ಜಿಲ್ಲೆಗಳಲ್ಲಿ ಪ್ಲಾಂಟರ್‌ಗಳು ಒತ್ತುವರಿ ಮಾಡಿಕೊಂಡಿರುವ ಒಂದು ಲಕ್ಷ ಹೆಕ್ಟೇರ್‌ ಭೂಮಿಯನ್ನು ಒತ್ತುವರಿದಾರರಿಗೆ ಮಂಜೂರು ಮಾಡಲು ಅವಕಾಶ ಕಲ್ಪಿಸುವ ಮತ್ತೊಂದು ಕಾನೂನು ತಿದ್ದುಪಡಿ ವಿಧೇಯಕವನ್ನೂ ಅಧಿವೇಶನದಲ್ಲಿ ಮಂಡನೆ ಮಾಡಲಾಗುತ್ತಿದೆ” ಎಂದು ಸಚಿವರು ತಿಳಿಸಿದರು.

ಆದಿವಾಸಿಗಳಿಗೆ ಹಕ್ಕುಪತ್ರ:

ಇನ್ನೆರಡು ತಿಂಗಳಲ್ಲಿ ಜೇನುಕುರುಬ, ಕಾಡು ಕುರುಬ, ಬೆಟ್ಟ ಕುರುಬ, ಎರವ, ಸೋಲಿಗ ಮತ್ತಿತರ ಅರಣ್ಯವಾಸಿಗಳಿಗೆ ಹಕ್ಕುಪತ್ರ ಹಂಚುವ ತೀರ್ಮಾನಕ್ಕೆ ರಾಜ್ಯ ಸರಕಾರ ಬಂದಿದೆ.

ಕನ್ನಡಿಗರಿಗೆ ಶೇ 70 ಕೆಲಸ ಕಡ್ಡಾಯ, ಹೊಸ ವರ್ಷದಲ್ಲಿ ಕಾನೂನು ಜಾರಿಗೆ ಸರಕಾರದ ಸಿದ್ಧತೆ
ವಿಶೇಷವಾಗಿ ಹೆಗ್ಗಡದೇವನಕೋಟೆಯ ಕೆಂಚನಹಳ್ಳಿ ಸೇರಿದಂತೆ 23 ಹಾಡಿಗಳ ನೂರಾರು ಅರಣ್ಯವಾಸಿಗಳು ಕಳೆದ 52 ವರ್ಷಗಳಿಂದ ಭೂ ಒಡೆತನಕ್ಕಾಗಿ ನಡೆಸುತ್ತಿರುವ ಹೋರಾಟಕ್ಕೆ ತಾರ್ಕಿಕ ಅಂತ್ಯ ನೀಡಿ, ಅರಣ್ಯ ಇಲಾಖೆ ಜತೆಗಿನ ಈ ಜನರ ನಿತ್ಯ ಸಂಷರ್ಘ ಕೊನೆಗೊಳಿಸಲು ಸರಕಾರ ನಿರ್ಧರಿಸಿದೆ. ಈ ಸಂಬಂಧ ಇದೇ ವಾರ ಸಂಬಂಧಪಟ್ಟ ಇಲಾಖೆಗಳ ಉನ್ನತ ಮಟ್ಟದ ಸಭೆ ನಡೆಸಿ, ಸಮಸ್ಯೆ ಇತ್ಯರ್ಥಪಡಿಸುವ ಜತೆಗೆ, ಎರಡು ತಿಂಗಳೊಳಗೆ ಎಲ್ಲಾ ಅರ್ಹರಿಗೆ ಹಕ್ಕುಪತ್ರ ವಿತರಿಸಲು ನಿರ್ಧರಿಸಲಾಗಿದೆ.

Related post

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 15-04-2024 ಸೋಮವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನಿಮ್ಮ ದಯಾಳು ಪ್ರಕೃತಿ ಇಂದು ಅನೇಕ ಸಂತೋಷದ ಕ್ಷಣಗಳನ್ನು ತರುತ್ತದೆ. ಲೋನ್ ತೆಗೆದುಕೊಂಡಿರುವ ಜನರಿಗೆ ಲೋನ್ ನ ಮೊತ್ತವನ್ನು ಮರುಪಾವತಿಸುವಲ್ಲಿ ತೊಂದರೆಗಳು ಉಂಟಾಗಬಹುದು. ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವ…
ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 14-04-2024 ಭಾನುವಾರ| ಇಂದಿನ ರಾಶಿಫಲ ಹೀಗಿದೆ..

ಮೇಷನೀವು ಧೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಯಾರಾದರೂ ನಿಮಗೆ ಹಾನಿ ಮಾಡಲು ಪ್ರಯತ್ನಿಸಬಹುದು – ಬಲವಾದ ಶಕ್ತಿಗಳು ನಿಮ್ಮ ವಿರುದ್ಧ…
ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು ಬೆಂಗಳೂರಿಗೆ ಕರೆತಂದ NIA ಅಧಿಕಾರಿಗಳು

ರಾಮೇಶ್ವರ ಕೆಫೆ ಬಾಂಬ್ ಸ್ಫೋಟ ಪ್ರಕರಣ – ಇಬ್ಬರು ಬಂಧಿತ ಉಗ್ರರನ್ನು…

ನ್ಯೂಸ್ ಆ್ಯರೋ : ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಉಗ್ರರನ್ನು NIA ಅಧಿಕಾರಿಗಳು ಬೆಂಗಳೂರಿಗೆ ಕರೆತಂದಿದ್ದಾರೆ. ಅಬ್ದುಲ್ ಮತೀನ್ ತಾಹಾ ಹಾಗೂ ಮುಜಾವಿರ್ ಹುಸೇನ್…

Leave a Reply

Your email address will not be published. Required fields are marked *