ಕರ್ನಾಟಕದ ಜನತೆಗೆ ಉಚಿತ ವಿದ್ಯುತ್ ಯೂನಿಟ್ ಮಿತಿ ಹೆಚ್ಚಿಸಿದ ಸರ್ಕಾರ – ಈ ಭಾಗ್ಯ ಯಾರಿಗೆಲ್ಲ ಅನ್ವಯ ಆಗುತ್ತೆ ಗೊತ್ತಾ?

ಕರ್ನಾಟಕದ ಜನತೆಗೆ ಉಚಿತ ವಿದ್ಯುತ್ ಯೂನಿಟ್ ಮಿತಿ ಹೆಚ್ಚಿಸಿದ ಸರ್ಕಾರ – ಈ ಭಾಗ್ಯ ಯಾರಿಗೆಲ್ಲ ಅನ್ವಯ ಆಗುತ್ತೆ ಗೊತ್ತಾ?

ನ್ಯೂಸ್ ಆ್ಯರೋ : ಈ ಹಿಂದೆ ಕರ್ನಾಟಕ ರಾಜ್ಯದಲ್ಲಿ ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ 18 ಯೂನಿಟ್ ಮಿತಿಯಿತ್ತು. ಆ ಮಿತಿಯನ್ನು 40 ಯೂನಿಟ್ ಗೆ ನಮ್ಮ ಸರ್ಕಾರವೇ ಹೆಚ್ಚಳ ಮಾಡಿತ್ತು. ಆದರೆ ಇದೀಗ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿಗಳನ್ನು ಗೃಹಜ್ಯೋತಿ ಯೋಜನೆಯಡಿ ಸೇರಿಸಿಕೊಂಡು, 58 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ವಿಧಾನಸೌದದಲ್ಲಿ ಸಿಎಂ ಹೇಳಿದ್ದಿಷ್ಟು!

ವಿಧಾನಸೌಧದಲ್ಲಿ ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ‘ರಾಜ್ಯದಲ್ಲಿ ಈ ತನಕ ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ 40 ಯೂನಿಟ್ ಗಳ ಮಿತಿಯಿತ್ತು. ಅದನ್ನು ಇದೀಗ 58 ಯೂನಿಟ್ ವರೆಗೆ ಉಚಿತವಾಗಿ ನೀಡಲು ಚಿಂತಿಸಲಾಗಿದೆ. ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ 389.66 ಕೋಟಿ ರೂ ಬಾಕಿ ಇತ್ತು. ಆ ಕಾರಣದಿಂದ ಗೃಹಜ್ಯೋತಿಯಡಿ ಉಚಿತ ಕೊಡುವುದು ಕಷ್ಟವಾಗುತ್ತಿತ್ತು. ಸದ್ಯ, ಬಾಕಿ ಮೊತ್ತವನ್ನು ಮನ್ನ ಮಾಡಲಾಗುತ್ತಿದ್ದು, ಇನ್ನು ಬಾಕಿ ಕಟ್ಟುವ ಅಗತ್ಯವಿಲ್ಲ ಎಂದಿದ್ದಾರೆ.

ರೈತರಿಗೆ 7 ಗಂಟೆಗಳ ಥ್ರಿಪೇಸ್ ವಿದ್ಯುತ್ ಪೂರೈಕೆ!

ಇನ್ನು ರಾಜ್ಯದಲ್ಲಿ ಸದ್ಯ, ಮಳೆಯ ಕೊರತೆಯಿದೆ ಆದರೆ ಕೆಲವರ ಬೇಡಿಕೆಗೆ ಅನುಗುಣವಾಗಿ 5 ಗಂಟೆ ವಿದ್ಯುತ್ ನೀಡಲಾಗುತ್ತಿತ್ತು. ರಾಯಚೂರು, ಬಳ್ಳಾರಿ, ಕೊಪ್ಪಳ ಇತ್ಯಾದಿ ಜಿಲ್ಲೆಗಳಲ್ಲಿ ಸದ್ಯ, ಕಬ್ಬು ಹಾಗೂ ಭತ್ತ ಕಟಾವಿಗೆ ಬಂದಿರುವ ಕಾರಣ 5 ಗಂಟೆ ವಿದ್ಯುತ್ ಸಾಕಾಗುತ್ತಿಲ್ಲ ಎಂಬ ಕೂಗು ಕೇಳಿ ಬರುತ್ತಿದೆ. ಆ ಕಾರಣ ರೈತರ ಪಂಪ್ ಸೆಟ್ ಗಳಿಗೆ ಥ್ರಿಪೇಸ್ ನಲ್ಲಿ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ವಿದ್ಯುತ್ ಉತ್ಪಾದನಾ ಪ್ರಮಾಣ ಹೆಚ್ಚಳ!

ಇದರೊಂದಿಗೆ ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಪ್ರಮಾಣ 3,200 ಮೆಗಾ ವ್ಯಾಟ್ ಹೆಚ್ಚಳವಾಗಿದೆ. ರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಘಟಕಗಳಿದ್ದು ಜಲವಿದ್ಯುತ್, ಸೋಲಾರ್ ಮೂಲಕ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಥರ್ಮಲ್ ಘಟಕವು 1000 ಮೆಗಾ ವ್ಯಾಟ್ ಉತ್ಪಾದಿಸುತ್ತಿದೆ‌. ಈ ಮೂಲಕ ವಿದ್ಯುತ್ ಉತ್ಪಾದನಾ ಪ್ರಮಾಣ 3,200 ಮೆಗಾ ವ್ಯಾಟ್ ಹೆಚ್ಚಳವಾಗಿದೆ‌. ಹಾಗೆಯೇ ವಿದ್ಯುತ್ ಉತ್ಪಾದನೆಗಾಗಿ ಬಜೆಟ್ ನಲ್ಲಿ 13,000 ಕೋಟಿ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಶಾಲಾ, ಕಾಲೇಜುಗಳಿಗೆ ಉಚಿತ ವಿದ್ಯುತ್

ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಜೂನಿಯರ್ ಕಾಲೇಜುಗಳಿಗೆ ನವೆಂಬರ್ 1 ರಂದು ಘೋಷಿಸಿರುವಂತೆ ವಿದ್ಯುತ್ ಹಾಗೂ ನೀರಿನ‌ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಮುಂದಿನ ಮುಂಗಾರಿನ ವರೆಗೆ ಮಳೆ ಬರುವುದಿಲ್ಲ ಆದ್ದರಿಂದಲೇ ಈ ನಿರ್ಧಾರಕ್ಕೆ ಬರಲಾಗಿದೆ. ಇನ್ನು ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ನೀಡುವ ಸಹಾಯಧನ ಮುಂದುವರೆಯಲಿದೆ ಎಂದಿದ್ದಾರೆ.

ಯುಪಿ, ಪಂಜಾಬ್‌ನೊಂದಿಗೆ ವಿದ್ಯುತ್ ಒಪ್ಪಂದ!

ವಿದ್ಯುತ್ ಖರೀದಿಯ ಮೊತ್ತವು ನಾವು ಎಷ್ಟು ವಿದ್ಯುತ್ ಖರೀದಿಸುತ್ತೇವೆ ಎನ್ನುವುದರ ಮೇಲೆ ಅವಲಂಬಿತವಾಗಿದೆ. ಶೇ.70ರಷ್ಟು ಥರ್ಮಲ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. 1000 ಯೂನಿಟ್ ವರೆಗೆ ವಿದ್ಯುತ್ ಹೊರಗಿನಿಂದ ಖರೀದಿಯಾಗುತ್ತಿದೆ. ಸ್ಥಳೀಯ ಹಾಗೂ ಆಮದು ಮಾಡಿಕೊಂಡ ಕಲ್ಲಿದ್ದಲನ್ನು ಮಿಶ್ರಣ ಮಾಡಿ ಬಳಸುವುದರಿಂದಲೂ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಉತ್ತರ ಪ್ರದೇಶ ಹಾಗೂ ಪಂಜಾಬ್ ನಿಂದ ಈಗ ವಿದ್ಯುತ್ ಖರೀದಿಸಿ ಮುಂದಿನ ಜೂನ್ ನಲ್ಲಿ ಹಿಂದಿರುಗಿಸುತ್ತೇವೆ‌. ಈ ಒಪ್ಪಂದದ ನಡುವೆ ಯಾವುದೇ ಖಾಸಗಿ ಸಂಸ್ಥೆಗಳ ಹಸ್ತಕ್ಷೇಪ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Related post

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ದಿನ‌ ಭವಿಷ್ಯ 08-12-2023 ಶುಕ್ರವಾರ| ಇಂದಿನ ರಾಶಿಫಲ ಹೀಗಿದೆ..

ಮೇಷಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ. ಇಲ್ಲದಿದ್ದರೆ ಪರಿಸ್ಥಿತಿ ನಿಯಂತ್ರಣ ಮೀರಬಹುದು. ಗುಣಪಡಿಸಲಾರದ್ದನ್ನು ತಡೆದುಕೊಳ್ಳಬೇಕು ಎಂದು ನೆನಪಿಡಿ.…
ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ – ಅಮಿತ್ ಷಾ ಅವರು ನೆಹರು ಬಗ್ಗೆ ಹೇಳಿದ್ದೇನು?

ನೆಹರು ಮಾಡಿದ “ಆ ಎರಡು ತಪ್ಪುಗಳೇ” ಸಂಪೂರ್ಣ ಕಾಶ್ಮೀರ ನಮ್ಮದಾಗದಿರಲು ಕಾರಣ…

ನ್ಯೂಸ್ ಆ್ಯರೋ : ನೆಹರು ಅವರು ಎಸಗಿದ ಎರಡು ಪ್ರಮಾದಗಳಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಇಂದಿಗೂ ಕಷ್ಟ ಅನುಭವಿಸುತ್ತಿದ್ದಾರೆ. ಕಳೆದ 5 ದಶಕಗಳಲ್ಲಿ ಕಾಶ್ಮೀರಿಗಳು ಅನುಭವಿಸಿದ ಸಂಕಷ್ಟಕ್ಕೆ…
ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ – ಭಾಗ್ಯಗಳ ಕೊಡುಗೆ ನೀಡಿದ್ದ ರಾಜ್ಯ ಸರ್ಕಾರಕ್ಕೆ ಮದ್ಯ ಪ್ರಿಯರ ಸಾಥ್ –

ರಾಜ್ಯದಲ್ಲಿ ಮದ್ಯ ಸೇವನೆ ದಿಢೀರ್ ಹೆಚ್ಚಳ, ಬೊಕ್ಕಸಕ್ಕೆ ಭರ್ಜರಿ ಆದಾಯ –…

ನ್ಯೂಸ್ ಆ್ಯರೋ : ಕರ್ನಾಟಕದಲ್ಲಿ ‘ಮದ್ಯ’ ದರ ಹೆಚ್ಚಾಗಿದ್ದರೂ ಎಣ್ಣೆ ಪ್ರಿಯರಿಂದಾಗಿ ಮದ್ಯ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿರುವುದು ರಾಜ್ಯ ಸರ್ಕಾರಕ್ಕೆ…

Leave a Reply

Your email address will not be published. Required fields are marked *