‘ರೇಷನ್ ಕಾರ್ಡ್ ತಿದ್ದುಪಡಿ’ ಆರಂಭ – ಆನ್ ಲೈನ್ ಮೂಲಕ ತಿದ್ದುಪಡಿ ಮಾಡಲು ಇಲ್ಲಿದೆ ಮಾಹಿತಿ..

‘ರೇಷನ್ ಕಾರ್ಡ್ ತಿದ್ದುಪಡಿ’ ಆರಂಭ – ಆನ್ ಲೈನ್ ಮೂಲಕ ತಿದ್ದುಪಡಿ ಮಾಡಲು ಇಲ್ಲಿದೆ ಮಾಹಿತಿ..

ನ್ಯೂಸ್ ಆ್ಯರೋ : ಪಡಿತರ ಚೀಟಿಯಲ್ಲಿ ಹೆಸರು ಬದಲಾವಣೆ, ವಿಳಾಸ ಬದಲಾವಣೆ ಹಾಗೂ ಹೊಸ ಹೆಸರು ನಮೂದು ಮುಂತಾದ ತಿದ್ದುಪಡಿಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಶನಿವಾರದಿಂದ ಚಾಲನೆ ನೀಡಿದೆ. ಆನ್ ಲೈನ್ ಮೂಲಕ ಅಥವಾ ಗ್ರಾಮ ಪಂಚಾಯಿತಿ ಕಚೇರಿ ಮತ್ತು ಬಯೋ ಫೋಟೋ ಕೇಂದ್ರದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದಾಗಿದ್ದು, ಆನ್ ಲೈನ್ ಮೂಲಕ ತಿದ್ದುಪಡಿ ಮಾಡಬಯಸುವವರು https://ahara.kar.nic.in/ವೆಬ್ ಸೈಟ್ ಭೇಟಿ ನೀಡಬಹುದು.

ಅಲ್ಲದೇ ಸ್ಮಾರ್ಟ್‌ಫೋನ್ ಅಥವಾ ಕಂಪ್ಯೂಟರ್ ಮೂಲಕವೇ ಈ ಎರಡೂ ಕಾರ್ಯಗಳನ್ನು ಸುಲಭವಾಗಿ ನೆರವೇರಿಸಬಹುದಾಗಿದ್ದು, ಯಾವುದೇ ಕಚೇರಿಗಳಿಗೆ ಅಲೆದಾಡದೇ ಆನ್‌ಲೈನ್ ಸಹಾಯದಿಂದ ನಿಮ್ಮ ಮನೆಯಲ್ಲೇ ಕುಳಿತು ರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಬಹುದು ಹಾಗೂ ಹೆಸರು ತಿದ್ದುಪಡಿ ಮಾಡಬಹುದು.

ಹೌದು, ಇತ್ತೀಚಿನ ದಿನಗಳಲ್ಲಿ ಪಡಿತರ ಚೀಟಿ ಇಲ್ಲದಿದ್ದರೆ ಆಗುವಂತಹ ಸಮಸ್ಯೆಗಳು ಹೆಚ್ಚು ಎಂದೇ ಹೇಳಬಹುದು. ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆಯಲು ಮಾತ್ರವಲ್ಲದೇ, ಗುರುತಿನ ಪತ್ರವಾಗಿ, ಸರ್ಕಾರದ ಯೋಜನೆಗಳಿಗಾಗಿ, ವಿಮೆ ಸೌಲಭ್ಯಗಳಿಗಾಗಿ ಪಡಿತರ ಚೀಟಿ ಅತ್ಯಗತ್ಯವಾಗಿದೆ. ಆದರೆ, ಪಡಿತರ ಚೀಟಿಯಲ್ಲಿ ಕೆಲವೊಮ್ಮೆ ಹೆಸರು ತಪ್ಪಾಗಿ ಈ ಸೇವೆಗಳಿಗೆ ಅಲಭ್ಯವಾಗಿರಬಹುದು ಹಾಗೂ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡಿಸದೇ ದಾಖಲಾತಿ ಇಲ್ಲದಂತಾಗಿ ಹಲವು ಯೋಜನೆಗಳಿಂದ ವಂಚಿತವಾಗಬಹುದು.

ಈ ಎರಡೂ ಕಾರ್ಯಗಳು ಅತ್ಯಗತ್ಯವಾಗಿರುವುದರಿಂದ, ನಾವಿಂದು ರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡಿಸುವುದು ಹಾಗೂ ಹೆಸರನ್ನು ತಿದ್ದುಪಡಿ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತೇವೆ. ಇದಕ್ಕಾಗಿ, ನೀವು ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್‌ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಈ ಎರಡು ದಾಖಲೆಗಳು ಇದ್ದರೆ ನೀವು ಆನ್‌ಲೈನ್ ಮುಖಾಂತರ ರೇಷನ್ ಕಾರ್ಡ್‌ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು. ಇದಕ್ಕಾಗಿ, ನೀವು https://ahara.kar.nic.in/home ಅಧಿಕೃತ ವೆಬ್ ಸೈಟ್ ಗೆ ಲಾಗ್‌ ಇನ್ ಆಗಿ. ಲಾಗ್‌ಇನ್‌ ಮಾಡಿದ ನಂತರ ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ. ಅಲ್ಲಿ ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ. ಹೊಸ ಪೇಜ್ ತೆರೆಯುತ್ತದೆ. ಅಲ್ಲಿನ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪಲೋಡ್ ಮಾಡಿ.

ಈ ಎರಡೂ ಕಾರ್ಯಗಳು ಅತ್ಯಗತ್ಯವಾಗಿರುವುದರಿಂದ, ನಾವಿಂದು ರೇಷನ್ ಕಾರ್ಡ್‌ಗೆ ಕುಟುಂಬದ ಹೊಸ ಸದಸ್ಯರ ಹೆಸರು ಸೇರ್ಪಡೆ ಮಾಡಿಸುವುದು ಹಾಗೂ ಹೆಸರನ್ನು ತಿದ್ದುಪಡಿ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡುತ್ತೇವೆ. ಇದಕ್ಕಾಗಿ, ನೀವು ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್‌ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಈ ಎರಡು ದಾಖಲೆಗಳು ಇದ್ದರೆ ನೀವು ಆನ್‌ಲೈನ್ ಮುಖಾಂತರ ರೇಷನ್ ಕಾರ್ಡ್‌ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು. ಇದಕ್ಕಾಗಿ, ನೀವು https://ahara.kar.nic.in/home ಅಧಿಕೃತ ವೆಬ್ ಸೈಟ್ ಗೆ ಲಾಗ್‌ ಇನ್ ಆಗಿ. ಲಾಗ್‌ಇನ್‌ ಮಾಡಿದ ನಂತರ ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ. ಅಲ್ಲಿ ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ. ಹೊಸ ಪೇಜ್ ತೆರೆಯುತ್ತದೆ. ಅಲ್ಲಿನ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ.

Related post

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ ಮದುವೆ

ಚಿಕ್ಕಮಗಳೂರಿನಲ್ಲೊಂದು ಮಂತ್ರ ಮಾಂಗಲ್ಯ; 25 ವರ್ಷ ಪ್ರೀತಿಯಲ್ಲಿದ್ದ ಜೋಡಿಗೆ ಮಾನವ ಮಂಟಪದಲ್ಲಿ…

ನ್ಯೂಸ್ ಆರೋ: ಬರೋಬ್ಬರಿ 25 ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿಯೊಂದು ಮಂತ್ರ ಮಾಂಗಲ್ಯ ಮೂಲಕ ಮದುವೆಯಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಅಪರೂಪದ ಘಟನೆ ತುಮಕೂರಲ್ಲಿ ನಡೆದಿದೆ. ಹೌದು ಜನಾಂದೋಲನದಲ್ಲಿ…
ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು! ಏನಿದು ವಿಷಯ?

ಪನೀರ್​ ಬಿರಿಯಾನಿ ಆರ್ಡರ್​ ಮಾಡಿದ್ರೆ, ಅದರ ಜೊತೆಗೆ ಚಿಕನ್​ ಕೂಡ ಬಂತು!…

ನ್ಯೂಸ್ ಆರೋ: ಎಷ್ಟೋ ಬಾರಿ ನಾವು ಈ ಹೊಟೇಲ್ ಗಳಿಗೆ ಹೋದಾಗ, ಅಲ್ಲಿ ಜನರು ವೆಜ್ ಮಂಚೂರಿಯನ್ನು ಆರ್ಡರ್ ಮಾಡಿದರೆ ಚಿಕನ್ ಮಂಚೂರಿ ತಂದು ಟೇಬಲ್ ಮೇಲೆ ಇಟ್ಟಿರುವ…
ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ಮದ್ವೆಗೂ ಮುಂಚೆಯೇ ಐದು ಮಂದಿ ತಾರೆಯರ ಜೊತೆ ಡೇಟ್ ಮಾಡಿದ್ದ ವಿರಾಟ್..!

ನ್ಯೂಸ್ ಆರೋ: ಬಾಲಿವುಡ್‌ನ ಖ್ಯಾತ ನಟಿ ಅನುಷ್ಕಾ ಶರ್ಮಾ ಹಾಗೂ ಟೀಂ ಇಂಡಿಯಾದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರ ಪರಿಚಯ ಯಾರಿಗೂ ಅಗತ್ಯವಿಲ್ಲ. ಇತ್ತೀಚೆಗಷ್ಟೇ ಅಂದರೆ ಮೇ…

Leave a Reply

Your email address will not be published. Required fields are marked *