ಅರ್ಹರಾಗಿದ್ದು ಕಾರ್ಡ್ ವಂಚಿತರಾದವರೇ ಟೆನ್ಶನ್ ಬಿಡಿ; ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್​ನ್ಯೂಸ್

ration-card
Spread the love

ನ್ಯೂಸ್ ಆ್ಯರೋ: ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಮಾಧಾನಕರ ಸುದ್ದಿ ನೀಡಿದೆ. ಬಿಪಿಎಲ್ ಕಾರ್ಡ್ ಸಮಸ್ಯೆ ಪರಿಹಾರಕ್ಕೆ ಆಹಾರ ಇಲಾಖೆ ಅಧಿಕಾರಿಗಳಿಗೆ ಹೊಸ ಡೆಡ್ ಲೈನ್ ನೀಡಿದೆ. ಇದೇ ನವೆಂಬರ್ 28ರವರೆಗೆ ಸರಿಪಡಿಸಲು ಸಮಯಾವಕಾಶವನ್ನು ಆಹಾರ ಸಚಿವ ಮುನಿಯಪ್ಪ ನೀಡಿದ್ದಾರೆ.

ಅರ್ಹರಾಗಿದ್ದು ಬಿಪಿಎಲ್ ಕಾರ್ಡ್ ವಂಚಿತರಾದವರು ಚಿಂತೆ ಮಾಡಬೇಕಾಗಿಲ್ಲ. ಇನ್ನೂ 3 ದಿನದೊಳಗಡೆ ಪಡಿತರ ಪಡೆಯಬಹುದು ಎಂದು ಆಹಾರ ಸಚಿವರು ಹೇಳಿದ್ದಾರೆ. ಪರಿಶೀಲನೆ ಮಾಡಿ ಅರ್ಹರಿಗೆ ಬಿಪಿಎಲ್ ಕಾರ್ಡ್ ವಾಪಸ್ ಆಗಲಿದೆ. ನವೆಂಬರ್ 28ರೊಳಗೆ ಸಮಸ್ಯೆಗೆ ಪರಿಹಾರ ಕೊಡಲು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.

ಬಿಪಿಎಲ್ ಕಾರ್ಡ್​ಗಳ ಗೊಂದಲ ನಿವಾರಣೆ ಆಗಿದೆ. ಒಂದು ವಾರದಲ್ಲಿ ಗೊಂದಲ ಪರಿಹರಿಸುವುದಾಗಿ ಹೇಳಿದ್ದೆ. ನವೆಂಬರ್ 28 ರ ನಂತ್ರ ಹಿಂದಿನಂತೆ ಬಿಪಿಎಲ್ ಕಾರ್ಡ್‌ನವ್ರು ಪಡಿತರ ಪಡೆಯಬಹುದು.

ಬಿಪಿಎಲ್ ಕಾಡ್೯ ಪರಿಷ್ಕರಣೆಯಲ್ಲಿ ನಾವು ಕೇಂದ್ರ ಸರ್ಕಾರದ ಮಾನದಂಡಗಳು ಅನುಸರಿಸಿದ್ದೇವೆ ಹೊರತು ಯಾವುದೇ ಅವೈಜ್ಞಾನಿಕ ಕ್ರಮ ಅನುಸರಿಸಿಲ್ಲ ಎಂದಿದ್ದಾರೆ.

Leave a Comment

Leave a Reply

Your email address will not be published. Required fields are marked *

error: Content is protected !!